Advertisement
ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ನಡೆಯುತ್ತಿವೆ. ಎಲ್ಲೆಂದರಲ್ಲಿ ಹಂದಿ, ಬೀದಿನಾಯಿಗಳ ಓಡಾಟ ಸರ್ವೇಸಾಮಾನ್ಯವಾಗಿದೆ. ಅನೇಕರಿಗೆ ಹಂದಿ ಕಚ್ಚಿದ ಪ್ರಸಂಗಗಳೂ ನಡೆದಿವೆ. ಪ್ರತ್ಯೇಕ ಜಾಗ ಮೀಸಲಿರಿಸಿ ಹಂದಿಗಳ ನಿಯಂತ್ರಣಕ್ಕಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
Related Articles
Advertisement
ರವೀಂದ್ರ ಮಲ್ಲಾಪುರ ಮಾತನಾಡಿ, ದಾವಣಗೆರೆ ನಗರಕ್ಕೆ ಬೇಸಿಗೆ ಸೇರಿದಂತೆ ನಿರಂತರವಾಗಿ ಕುಡಿಯುವ ನೀರು ಸರಬರಾಜು ಮಾಡಲು ಹಾಗೂ 0.20 ಟಿ.ಎಂ.ಸಿ ನೀರು ನಿರಂತರವಾಗಿ ಇರುವಂತೆ ನೋಡಿಕೊಳ್ಳಲು 76.11 ಕೋಟಿ ರೂ. ವೆಚ್ಚದಲ್ಲಿ ರಾಜನಹಳ್ಳಿ-ಮಾಕನೂರು ಗ್ರಾಮಗಳ ಬಳಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣ ಮಾಡಲಾಗುತ್ತಿದೆ.
ಬ್ಯಾರೇಜ್ ನಿರ್ಮಾಣಕ್ಕೆ ನದಿಯ ಎರಡು ಬದಿಯಲ್ಲಿನ ಖಾಸಗಿ ಜಮೀನಿನಲ್ಲಿ ನಿರ್ಮಾಣ ಕಾರ್ಯ ಕೈಗೊಳ್ಳಬೇಕಿದ್ದು, ಅವಶ್ಯವಿರುವ ಭೂಮಿಯನ್ನು ಗುರುತಿಸಿ ಸ್ಥಳ ಪರಿಶೀಲಿಸಿ ಮಾಕನೂರು ಗ್ರಾಮದಲ್ಲಿ ಸುಮಾರು 5 ಎಕರೆ, ರಾಜನಹಳ್ಳಿ ಗ್ರಾಮದ 2 ಎಕರೆ ಭೂಮಿ ಸ್ವಾ ಧೀನಪಡಿಸಿ ಕೊಳ್ಳಬೇಕಾಗಿದೆ. ಆದರೆ ಮಾಲೀಕರು ನ್ಯಾಯಾಲಯದಲ್ಲಿ ಪ್ರತ್ಯೇಕವಾಗಿ ದಾವೆ ಹೂಡಿದ್ದಾರೆ. ಭೂಮಿ ಅಳತೆಗೆ ತಕರಾರು ಮಾಡುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.
ಒಂದು ತಿಂಗಳಲ್ಲಿ ಸಮಸ್ಯೆ ಪರಿಹರಿಸಿಕೊಡಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸುಸಜ್ಜಿತ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸಬೇಕು. ಸ್ಮಾರ್ಟ್ ಸಿಟಿಯಡಿ ನಡೆಯುತ್ತಿರುವ ಎಲ್ಲ ಕಾಮಗಾರಿಗಳನ್ನು ಒಂದು ವರ್ಷದೊಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.
ಸಭೆಯಲ್ಲಿ ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಸ್.ಎ. ರವೀಂದ್ರನಾಥ್, ಮಹಾಪೌರ ಎಸ್.ಟಿ. ವೀರೇಶ್ ಇತರರು ಭಾಗಹಿಸಿದ್ದರು.