Advertisement

ಆರ್‌ಟಿಇ ಕಾಯ್ದೆಯಡಿ ಪ್ರವೇಶ ಕಡ್ಡಾಯ

08:58 PM Jul 02, 2021 | Team Udayavani |

ದಾವಣಗೆರೆ : ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‌ ಟಿಇ) ಯಡಿಯಲ್ಲಿನ ಮಕ್ಕಳ ಪ್ರವೇಶವನ್ನು ಖಾಸಗಿ ಶಾಲೆಗಳು ಯಾವುದೇ ಕಾರಣಕ್ಕೂ ನಿರಾಕರಿಸುವಂತಿಲ್ಲ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ| ಆರ್‌.ಜಿ. ಆನಂದ್‌ ಹಳಿದರು.

Advertisement

ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಸಂಭವನೀಯ ಕೋವಿಡ್‌ ಮೂರನೇ ಅಲೆ ನಿಯಂತ್ರಣ ಕುರಿತಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ನಡೆದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಆರ್‌ಟಿಇ ಕಾಯ್ದೆ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲೇಬೇಕು. ಇಲ್ಲದಿದ್ದಲ್ಲಿ ಕಾಯ್ದೆ ಅನ್ವಯ ಸಂಬಂಧಿತ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಆರ್‌. ಪರಮೇಶ್ವರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 565 ಖಾಸಗಿ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆಯನ್ವಯ ಶೇ. 25 ರಷ್ಟು ಮಕ್ಕಳಿಗೆ ಪ್ರವೇಶ ನೀಡುತ್ತಿವೆ. ಪರಿಶಿಷ್ಟ ಜಾತಿ, ಶೇ. 7.5, ಪರಿಶಿಷ್ಟ ವರ್ಗಕ್ಕೆ ಶೇ. 1.5, ಉಳಿದಂತೆ ಒಬಿಸಿ ಹಾಗೂ ಸಾಮಾನ್ಯ ವರ್ಗದವರಿಗೆ ಆರ್‌ಟಿಇ ಯಡಿ ಪ್ರವೇಶ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಶಿಕ್ಷಣ ಮೂಲಭೂತ ಹಕ್ಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಆರ್‌ಟಿಇಯಲ್ಲಿ ಹಂಚಿಕೆಯಾದ ಮಕ್ಕಳ ಶಾಲಾ ಪ್ರವೇಶವನ್ನು ಖಾಸಗಿ ಶಾಲೆಗಳು ಯಾವುದೇ ಕಾರಣಕ್ಕೂ ನಿರಾಕರಿಸುವಂತಿಲ್ಲ. ಆರ್‌ಟಿಇ ಅಡಿ ಪ್ರವೇಶ ಪಡೆದ ಮಕ್ಕಳು ಅಥವಾ ಅವರ ಪಾಲಕರು, ಪೋಷಕರಿಗೆ ತೊಂದರೆ ಕೊಡುವಂತಹ ದೂರು ಕೇಳಿ ಬರುತ್ತವೆ. ಅಂತಹ ಯಾವುದೇ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಬಾರದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸೂಚನೆ ಹಾಗೂ ಕಾಯ್ದೆಯ ಪಾಲನೆ ಕುರಿತಂತೆ ಎಲ್ಲ ಶಾಲೆಗಳಿಗೆ ಸುತ್ತೋಲೆ ಕಳುಹಿಸುವಂತೆ ಡಾ| ಆನಂದ್‌, ಡಿಡಿಪಿಐಗೆ ಸೂಚನೆ ನೀಡಿದರು. ಜಿಪಂ ಸಿಇಒ ಡಾ| ವಿಜಯ ಮಹಾಂತೇಶ್‌ ದಾನಮ್ಮನವರ್‌ ಮಾತನಾಡಿ, ಕಳೆದ ಏ. 20 ರಿಂದ ಮಾ. 21 ರವರೆಗೆ 1098 ಮಕ್ಕಳ ಸಹಾಯವಾಣಿಯಡಿ ಮಕ್ಕಳ ರಕ್ಷಣೆಗೆ ಸಂಬಂ ಧಿಸಿದಂತೆ ಒಟ್ಟು 496 ಕರೆಗಳನ್ನು ಸ್ವೀಕರಿಸಿ ನೆರವು ನೀಡಲಾಗಿದೆ.

Advertisement

2020-21ರಲ್ಲಿ 6 ಬಾಲ್ಯವಿವಾಹಗಳನ್ನು ನಿಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. 2021-22 ರಲ್ಲಿ 3 ಪ್ರಕರಣಗಳಿಗೆ ದಾಖಲಿಸಲಾಗಿದೆ. ಫೋಕೊÕà ಅಡಿ 2020ರ ಮಾರ್ಚ್‌ನಿಂದ ಮೇವರೆಗೆ ಒಂದು ಪ್ರಕರಣದಲ್ಲಿ ಖುಲಾಸೆಗೊಳಿಸಲಾಗಿದೆ. 2020-21 ರಲ್ಲಿ ಒಟ್ಟು 49 ಪ್ರಕರರಣಗಳು, 2021-22 ರಲ್ಲಿ 15 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ಮಕ್ಕಳ ರಕ್ಷಣೆ ಹಾಗೂ ಹಕ್ಕುಗಳ ಉಲ್ಲಂಘನೆ ಬಗ್ಗೆ ಯಾವುದೇ ದೂರುಗಳು ಬಂದಲ್ಲಿ ಮೊದಲು ಜಿಲ್ಲಾ  ಧಿಕಾರಿಗಳಿಗೆ ಮಾಹಿತಿ ನೀಡಬೇಕು. ಬಳಿಕ ಕಾನೂನು ಕ್ರಮ ಕೈಗೊಳ್ಳುವಂತೆ ಡಾ| ಆನಂದ್‌ ಸೂಚಿಸಿದರು.

ಕೋವಿಡ್‌, ಲಾಕ್‌ಡೌನ್‌ ಕಾರಣಗಳಿಂದ ಶಾಲೆಗಳು ಆರಂಭವಾಗಿಲ್ಲ. ತಂದೆ, ತಾಯಿ ಆರ್ಥಿಕ ಸಮಸ್ಯೆಯ ನೆಪವೊಡ್ಡಿ ಮಕ್ಕಳನ್ನು ದುಡಿಮೆಗೆ ಹಚ್ಚುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಕಾರ್ಮಿಕ ಇಲಾಖೆ ಹೆಚ್ಚು ಜಾಗ್ರತೆಯಿಂದ ಕಾರ್ಯ ನಿರ್ವಹಿಸಬೇಕಿದೆ. ಬಾಲ ಕಾರ್ಮಿಕರು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅ ಧಿಕಾರಿ ಇಬ್ರಾಹಿಂ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಒಟ್ಟು 129 ಕಡೆಗಳಲ್ಲಿ ತಪಾಸಣೆ ನಡೆಸಿ 6 ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. ಬಾಲ ಕಾರ್ಮಿಕರ ಪತ್ತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್‌. ವಿಜಯ್‌ಕುಮಾರ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next