Advertisement

ಕೆಪಿಸಿಸಿ ಅಧ್ಯಕ್ಷರಿಗೆ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ

09:57 PM Jul 16, 2021 | Team Udayavani |

ದಾವಣಗೆರೆ: ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಗುರುವಾರ ದಾವಣಗೆರೆಗೆ ಆಗಮಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

Advertisement

ಬಂಜಾರ ಸಮುದಾಯದ ಕುಲಗುರು ಸಂತ ಸೇವಾಲಾಲ್‌ ಅವರ ಜನ್ಮಸ್ಥಳ ಸೂರಗೊಂಡನಕೊಪ್ಪದಲ್ಲಿ ಆಯೋಜಿಸಿದ್ದ ಸಂವಾದ ಮತ್ತು ಕೊರೊನಾದಿಂದ ಮೃತಪಟ್ಟಿರುವ ಬಂಜಾರ ಸಮುದಾಯದವರ ಮನೆಗಳಿಗೆ ತೆರಳಿ ಸಾಂತ್ವನ ಹೇಳುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಿ.ಕೆ. ಶಿವಕುಮಾರ್‌ ದಾವಣಗೆರೆ ಮಾರ್ಗವಾಗಿ ತೆರಳಿದರು. ದಾವಣಗೆರೆ ಜಿಲ್ಲೆಯ ಗಡಿ ಗ್ರಾಮ ಲಕ್ಕಮುತ್ತೇನಹಳ್ಳಿ ಬಳಿ ಆನಗೋಡು ಜಿಲ್ಲಾ ಪಂಚಾಯತ್‌ ಸದಸ್ಯ ಕೆ.ಎಸ್‌. ಬಸವಂತಪ್ಪ ನೇತೃತ್ವದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಡಿ.ಕೆ. ಶಿವಕುಮಾರ್‌ ಅವರಿಗೆ ಶಾಲು, ಹಾರ ಹಾಕಿ ಸ್ವಾಗತಿಸಿದರು.

ದಾವಣಗೆರೆ ಹೊರ ವಲಯದ ಅಪೂರ್ವ ರೆಸಾರ್ಟ್‌ ಬಳಿ ಕೆಪಿಸಿಸಿ ವಕ್ತಾರ ಡಿ. ಬಸವರಾಜ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ, ನಗರಪಾಲಿಕೆ ಸದಸ್ಯರಾದ ಜಿ.ಎಸ್‌. ಮಂಜುನಾಥ್‌ ಗಡಿಗುಡಾಳ್‌, ಅಬ್ದುಲ್‌ ಲತೀಫ್‌, ಅಯೂಬ್‌ ಪೈಲ್ವಾನ್‌, ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್‌ ಖಾಲಿದ್‌, ಲಿಯಾಖತ್‌ ಅಲಿ ಇತರರು ಡಿ.ಕೆ. ಶಿವಕುಮಾರ್‌ ಅವರನ್ನು ಸ್ವಾಗತಿಸಿದರು.

ಡಿ.ಕೆ. ಶಿವಕುಮಾರ್‌ ಆಗಮಿಸುತ್ತಿದ್ದಂತೆ “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಜಯವಾಗಲಿ’ ಎಂಬ ಘೋಷಣೆ ಮೊಳಗಿದವು. ನಗು ಮೊಗದಿಂದಲೇ ಕಾರ್ಯಕರ್ತರ ಘೋಷಣೆ ಆಲಿಸಿದ ಡಿ.ಕೆ. ಶಿವಕುಮಾರ್‌ ಹಾಲು, ತುರಾಯಿ ಸ್ವೀಕರಿಸಿ ಸೂರಗೊಂಡನಕೊಪ್ಪದತ್ತ ತೆರಳಿದರು. ಡಿ.ಕೆ. ಶಿವಕುಮಾರ್‌ ತಡವಾಗಿ ಬಂದರೂ ಮಳೆಯ ನಡುವೆಯೇ ಮುಖಂಡರು, ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನಿಗೆ ಕಾದಿದ್ದು ವಿಶೇಷವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next