Advertisement

ಅನ್ನದಾತರ ಕೈಹಿಡಿದ ಕೃಷಿ ಹೊಂಡ

05:59 PM Jul 22, 2021 | Team Udayavani |

„ಆರ್‌. ಬಸವರೆಡ್ಡಿ ಕರೂರು

Advertisement

ಸಿರುಗುಪ್ಪ: ಕೃಷಿ ಭಾಗ್ಯ ಯೋಜನೆಯಡಿ ಮತ್ತು ನರೇಗಾ ಯೋಜನೆಯಡಿಯಲ್ಲಿ ತೋಟಗಾರಿಕೆ, ಕೃಷಿ ಇಲಾಖೆ ವತಿಯಿಂದ ಸುಮಾರು 2500ಕ್ಕೂ ಹೆಚ್ಚು ಕೃಷಿ ಹೊಂಡಗಳು ನಿರ್ಮಾಣವಾಗಿದ್ದು, ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷಿ ಹೊಂಡಗಳಲ್ಲಿ ನೀರು ಸಂಗ್ರಹವಾಗುತ್ತಿದೆ. ಮಳೆಯಾಧಾರಿತ ಕೃಷಿ ಪ್ರದೇಶದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ರೈತರಿಗೆ ಅನುಕೂಲವಾಗುತ್ತಿದೆ.

ತಾಲೂಕಿನ ಹಚ್ಚೊಳ್ಳಿ, ಸಿರುಗುಪ್ಪ, ತೆಕ್ಕಲಕೋಟೆ, ಕರೂರು ಹೋಬಳಿ ವ್ಯಾಪ್ತಿಯಲ್ಲಿ ಬರುವ ಮಳೆಯಾಶ್ರಿತ ಪ್ರದೇಶದಲ್ಲಿ ರೈತರು ವಿವಿಧ ಬೆಳೆಗಳನ್ನು ಬೆಳೆಯಲು ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೃಷಿ ಇಲಾಖೆಯು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಮತ್ತು ತೋಟಗಾರಿಕೆ ಇಲಾಖೆಯು ನರೇಗಾ ಯೋಜನೆಯಡಿ ಕೃಷಿ ಹೊಂಡ ಹಾಗೂ ಬದುಗಳ ನಿರ್ಮಾಣ ಮಾಡಿರುವುದರಿಂದ ಮಳೆಯಾಶ್ರಿತ ಪ್ರದೇಶದಲ್ಲಿ ಹತ್ತಿ, ಸಜ್ಜೆ, ನವಣೆ, ಜೋಳ, ಸೂರ್ಯಕಾಂತಿ, ಮೆಣಸಿನಕಾಯಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಅನುಕೂಲವಾಗಿದೆ.

ಕೃಷಿ ಹೊಂಡದಲ್ಲಿ ಸಂಗ್ರಹವಾದ ನೀರನ್ನು ಬೆಳೆಗೆ ನೀರು ಅನಿವಾರ್ಯವಾದ ಸಂದರ್ಭದಲ್ಲಿ ಬಳಕೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಇದರಿಂದ ರೈತರು ಉತ್ತಮ ಇಳುವರಿ ಪಡೆಯಲು ಸಹಾಯಕವಾಗುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕ ನಜೀರ್‌ ಅಹಮ್ಮದ್‌ ತಿಳಿಸಿದ್ದಾರೆ.

—————–

Advertisement

ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡವನ್ನು ನಿರ್ಮಿಸಿಕೊಂಡರೆ, ಆಪತ್ಕಾಲದಲ್ಲಿ ಬೆಳೆಗಳಿಗೆ ನೀರನ್ನು ಕೊಡುವ ಹನಿ ನೀರಾವರಿ, ತುಂತುರು ನೀರಾವರಿ ಪದ್ಧತಿ ಅಳವಡಿಸಿಕೊಂಡರೆ ಉತ್ತಮ ಬೆಳೆ ಬೆಳೆಯಲು ಸಾಧ್ಯವಾಗುತ್ತದೆ.

ಡಾ| ಎಂ.ಎ. ಬಸವಣ್ಣೆಪ್ಪ ಕೃಷಿ ವಿಜ್ಞಾನಿ, ಸಿರುಗುಪ್ಪ

Advertisement

Udayavani is now on Telegram. Click here to join our channel and stay updated with the latest news.

Next