Advertisement

ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿ

05:08 PM Jan 28, 2021 | |

ಜಗಳೂರು: ಜಿಲ್ಲೆಯಲ್ಲಿಯೇ ಆತೀ ಹಿಂದುಳಿದ ತಾಲೂಕು ಜಗಳೂರು ತಾಲೂಕಾಗಿದ್ದು, 57 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ನೀರು ಬರುವುದರಿಂದ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಲಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಪಟ್ಟಣದ ಗುರುಭವನ ಆವರಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜನಸ್ಪಂದನ ಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣಾ ಸಮಾರಂಭ ಉದ್ಘಾಟಿಸಿ ನಂತರ ಮಾತನಾಡಿದ ಅವರು, ಈ ಭಾಗದಲ್ಲಿ ಮಳೆ ಕಡಿಮೆ ಪ್ರಮಾಣದಲ್ಲಿ ಆಗುತ್ತಿರುವುದರಿಂದ ಕೆರಗಳಿಗೆ ನೀರು ಬರುವುದರಿಂದ ರೈತರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇಲ್ಲಿನ ಶಾಸಕರು ಸಾಕಷ್ಟು ಕೆಲಸ ಮಾಡುತ್ತಿದ್ದು, ಅವರಿಗೆ ಸಹಕಾರ ನೀಡುತ್ತೇನೆ ಎಂದು ಹೇಳಿದರು.

ಸಂಸದ ಜಿ.ಎಂ. ಸಿದ್ದೇಶ್ವರ್‌ ಮಾತನಾಡಿ, ಶಾಸಕ ರಾಮಚಂದ್ರ ಅವರು ಕೇವಲ 2 ವರ್ಷದಲ್ಲಿ 3 ಸಾವಿರ ಕೋಟಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಪ್ರಧಾನಮಂತ್ರಿ ಮೋದಿಯವರು ಅಪ್ಪಟ ಬ್ರಹ್ಮಚಾರಿಯಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ತಲ್ಲೀನರಾಗಿದ್ದಾರೆ. ಪ್ರತಿಭಟನೆಯ ಹೆಸರಿನಲ್ಲಿ ಕೆಂಪು ಕೋಟೆಯಲ್ಲಿ ನಡೆದ ಘಟನೆ ತುಂಬಾ ನೋವಿನ ಸಂಗತಿಯಾಗಿದೆ ಎಂದರು.
ಶಾಸಕ ಎಸ್‌.ವಿ. ರಾಮಚಂದ್ರ ಮಾತನಾಡಿ, ತರಳುಬಾಳು ಶ್ರೀಗಳ ಕೃಪಕಟಾಕ್ಷದಿಂದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. ಸಂಸದ ಸಿದ್ದೇಶಣ್ಣನ ಶ್ರಮದಿಂದ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಜಲ ನೀತಿಗೆ ಸೇರಿತು. 1200 ಕೋಟಿ ರೂ. ವೆಚ್ಚದ ದೊಡ್ಡ ಯೋಜನೆಗೆ ಪ್ರಧಾನಿ ಮೋದಿಯವರಿಂದ ಭೂಮಿ
ಪೂಜೆ ಮಾಡಿಸುವ ಉದ್ದೇವಿದೆ ಎಂದರು.

ಉಸ್ತುವಾರಿ ಸಚಿವರು ಪಕ್ಷದ ಬದಲಾಯಿಸಿದ್ದರಿಂದ ಇಂದು ಸಾಕಷ್ಟು ಕಾರ್ಯಗಳಿಗೆ ಕೈ ಜೋಡಿಸುತ್ತಿದ್ದಾರೆ. ನನ್ನನ್ನು ನಿಗಮದ ಅಧ್ಯಕ್ಷನನ್ನಾಗಿ ಮಾಡಲು ಕಾರಣೀ ಭೂತರಾಗಿದ್ದಾರೆ ಎಂದರು.

ಪಶು ಚಿಕಿತ್ಸಾಲಯ ಬಿದರಿಕೆರೆ, ಡಿ ದೇವರಾಜ ಅರಸು ಮೆಟ್ರಿಕ್‌ ನಂತರದ ಬಾಲಕರ ಪಲ್ಲಾಗಟ್ಟೆ, ಜಿಪಂನಿಂದ ನಿರ್ಮಿಸಲಾಗಿದ್ದ ಶಾಲಾ ಕೊಠಡಿಗಳ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಾಂತಕುಮಾರಿ ಶಶಿಧರ್‌, ಸಿಇಒ ಪದ್ಮ ಬಸವಂತಪ್ಪ, ಎಎಸ್‌ ಪಿ.ರಾಜೀವ್‌, ಉಪವಿಭಾಗಾಧಿ ಕಾರಿ ಮಮತ ಹೊಸಗೌಡರ್‌, ತಹಶೀಲ್ದಾರ್‌ ಡಾ.ನಾಗವೇಣಿ, ಇಒ ಮಲ್ಲನಾಯ್ಕ, ತಾ.ಪಂ ಅಧ್ಯಕ್ಷೆ ಮಂಜುಳಾ, ಪಪಂ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿ ಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

Advertisement

 

ಓದಿ : ಸರ್ಕಾರಿ ನೌಕರರ ವರ್ಗಾವಣೆ ಸಹಜ ಪ್ರಕ್ರಿಯೆ

Advertisement

Udayavani is now on Telegram. Click here to join our channel and stay updated with the latest news.

Next