ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ, ಜಿಲ್ಲಾ ಕಾರ್ಯಕಾರಿಣಿ ಸಭೆ, ನೂತನ ಪದಾಧಿಕಾರಿಗಳಿಗೆ ಅಭಿನಂದನೆ
ಹಾಗೂ “ಸಂಕಲ್ಪ’ ಪಂಚವಾರ್ಷಿಕ ಕ್ರಿಯಾಯೋಜನೆ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
Advertisement
ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಬೋಧನೆ ಮಾಡುವ ಮೂಲಕ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು. ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲೇ ಇದ್ದು ಅವರನ್ನು ಉತ್ತಮ ಮಾರ್ಗದಲ್ಲಿ ತರುವಲ್ಲಿ ಪ್ರಯತ್ನಿಸಬೇಕು ಎಂದರು.
ಸಂಘದ ಜಿಲ್ಲಾಧ್ಯಕ್ಷ ಡಿ. ರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಶಾಂತಕುಮಾರಿ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಆಡಳಿತ) ಲಿಂಗರಾಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ, ವೀರಶೈವ ಲಿಂಗಾಯತ ನೌಕರರ ಸಂಘದ ಎನ್.ಇ. ನಟರಾಜ್ ಇನ್ನಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಓದಿ : ಕಸ್ತೂರಿ ನಿವಾಸ ಚಿತ್ರಕ್ಕೆ ಐವತ್ತು ವರ್ಷ