Advertisement

ಕುರುಬ ಪದ ಎಸ್‌ಟಿಗೆ ಸೇರಿಸಲು ಹೋರಾಟ

03:38 PM Jan 24, 2021 | Team Udayavani |

ಚಿತ್ರದುರ್ಗ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಹೊಸದಾಗಿ ಸೇರಿಸಬೇಕಿಲ್ಲ. ಈಗಾಗಲೇ ಆ ಸೌಲಭ್ಯ ಸಿಕ್ಕಿದೆ. ಆದರೆ ಬಿಟ್ಟು
ಹೋಗಿರುವ ಆರು ಪದಗಳನ್ನಷ್ಟೇ ಸೇರಿಸಬೇಕಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಶ್ರೀ ನಿರಂಜನನಾಂದಪುರಿ ಸ್ವಾಮೀಜಿ ಹೇಳಿದರು.

Advertisement

ಕುರುಬರನ್ನು ಎಸ್‌ಟಿಗೆ ಸೇರಿಸಲು ಕಾಗಿನೆಲೆಯಿಂದ ಆರಂಭವಾಗಿರುವ ಪಾದಯಾತ್ರೆ ಶನಿವಾರ ನಗರಕ್ಕೆ ಆಗಮಿಸಿದ ವೇಳೆ
ಸುದ್ದಿಗೋಷ್ಠಿ ಯಲ್ಲಿ ಶ್ರೀಗಳು ಮಾತನಾಡಿದರು. ಜೇನುಕುರುಬ, ಕಾಡುಕುರುಬ, ಗೊಂಡ, ರಾಜಗೊಂಡ, ಕಾಟನಾಯಕನ್‌, ಕುರುಮನ್‌, ಪದಗಳು ಎಸ್‌. ಟಿ. ಪಟ್ಟಿಯಲ್ಲಿವೆ. ಆದರೆ ಕುರುಬ ಎನ್ನುವ ಪದ ಮಾತ್ರ ಬಿಟ್ಟು ಹೋಗಿದೆ. ಇದು ಕೂಡ ಸೇರ್ಪಡೆ ಮಾಡಬೇಕು ಎನ್ನುವುದು ನಮ್ಮ ಒತ್ತಾಯ. ಅದಕ್ಕಾಗಿ ಐತಿಹಾಸಿಕ ಬೃಹತ್‌ ಪಾದಯಾತ್ರೆ ಆರಂಭಿಸಲಾಗಿದೆ ಎಂದರು.

ಕೊಡಗು, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್‌ ಜಿಲ್ಲೆಯ ಕೆಲವರು ಪರಿಶಿಷ್ಟ ಪಂಗಡದ ಸೌಲಭ್ಯ ಪಡೆಯುತ್ತಿದ್ದಾರೆ. ಕೊಡಗು ಜಿಲ್ಲೆಯ
ವ್ಯಾಪ್ತಿಗೆ ಮಾತ್ರ ಕುರುಬ ಸಮುದಾಯಕ್ಕೆ ಸೌಲಭ್ಯ ಕಲ್ಪಿಸಲಾಗಿದೆ. ಇದನ್ನು ರಾಜ್ಯದ ಎಲ್ಲೆಡೆ ವಿಸ್ತರಿಸಬೇಕು. ಹಾಲುಮತ ಸೇರಿದಂತೆ ಇತರ 6 ಪದಗಳಿಂದ ಗುರುತಿಸುವ ಕುರುಬ ಸಮು  ದಾಯದ ಪರ್ಯಾಯ ಹೆಸರುಗಳನ್ನು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ಆರಂಭ

ಫೆ. 7 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ 10 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮಾವೇಶಕ್ಕೆ ಸಕಲ ಸಿದ್ಧತೆ
ಮಾಡಿಕೊಳ್ಳಲಾಗುತ್ತಿದೆ. ಪಾದಯಾತ್ರೆಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಭಕ್ತರನ್ನು ಕಣ್ತುಂಬಿಕೊಂಡಾಗ ನಡಿಗೆಯ ದಣಿವು
ಮಾಯವಾಗುತ್ತದೆ ಎಂದರು.

Advertisement

ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ಹಲವು ಪದಗಳಿಂದ ಗುರುತಿಸುವ ಸಮುದಾಯ ಮೀಸಲಾತಿ ಸೌಲಭ್ಯದಿಂದ
ವಂಚಿತವಾಗಿದೆ. ಸರ್ಕಾರ ಸರಿಯಾಗಿ ಸ್ಪಂದಿಸದೇ ಇದ್ದರೆ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಫೆ. 7 ರಂದು ಪಾದಯಾತ್ರೆ ಬೆಂಗಳೂರು ತಲುಪಲಿದ್ದು, ಅಲ್ಲಿ ಬೃಹತ್‌ ಸಮಾವೇಶ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದೇವೆ. ಅಷ್ಟಕ್ಕೂ ಸ್ಪಂದಿಸದಿದ್ದರೆ 1 ತಿಂಗಳು ಗಡುವು ನೀಡಿ ನಂತರ ದೆಹಲಿಯ ಸಂಸತ್‌ ಭವನಕ್ಕೆ ನಮ್ಮ ಹೋರಾಟ ತೆಗೆದುಕೊಂಡು ಹೋಗುತ್ತೇವೆ. ಅಲ್ಲಿ ಧರಣಿ ನಡೆಸುತ್ತೇವೆ ಎಂದರು.

ಇದನ್ನೂ ಓದಿ : ರೈತರ ಟ್ರ್ಯಾಕ್ಟರ್ ರ‍್ಯಾಲಿಗೆ ಮಾರ್ಗಗಳನ್ನು ಸೂಚಿಸಿದ ದೆಹಲಿ ಪೊಲೀಸರು

Advertisement

Udayavani is now on Telegram. Click here to join our channel and stay updated with the latest news.

Next