ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಶಾಲಾ ಗಂಟೆ ಬಾರಿಸುವ ಮೂಲಕ ಹಾಗೂ ಶಿಕ್ಷಕರಿಂದ ಗಿಡಗಳಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಹಳೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಕರಿಗೆ ಗೌರವಾರ್ಪಣೆ ಸಲ್ಲಿಸಿ ನೆನಪಿನ ಕಾಣಿಕೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ತಮ್ಮ ಬಾಲ್ಯದ ಕುರಿತು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಗುರುವಂದನೆ ಸ್ವೀಕರಿಸಿದ ಶಿಕ್ಷಕರು ಸಹ ವಿದ್ಯಾರ್ಥಿಗಳ ಸಾಧನೆಯನ್ನು ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಗುರುವಂದನಾ ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು
Advertisement
ಓದಿ :ಅಪಘಾತಕ್ಕೀಡಾದ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ ಸಚಿವ ಸುರೇಶ್ ಕುಮಾರ್