Advertisement

ಲಸಿಕಾ ಅಭಿಯಾನ ಯಶಸ್ವಿ ಗೊಳಿಸಿ

12:31 PM Feb 05, 2021 | Team Udayavani |

ದಾವಣಗೆರೆ: ಸಾರ್ವತ್ರಿಕ ಲಸಿಕೆ ಕಾರ್ಯಕ್ರಮದಲ್ಲಿ ಬಿಟ್ಟು ಹೋದ ಮಕ್ಕಳು ಮತ್ತು ಗರ್ಭಿಣಿಯರನ್ನು ಗುರುತಿಸಿ ಲಸಿಕೆ ಹಾಕಿಸುವ ತೀವ್ರಗೊಂಡ ಇಂದ್ರಧನುಷ್‌ ಲಸಿಕಾ ಅಭಿಯಾನವನ್ನು ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಲಸಿಕಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್‌ ಸಿಇಒ ಪದ್ಮಾ ಬಸವಂತಪ್ಪ ಸೂಚಿಸಿದರು.

Advertisement

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ತೀವ್ರಗೊಂಡ ಇಂದ್ರಧನುಷ್‌ ಲಸಿಕಾ ಅಭಿಯಾನ 3.0(ಇಂಟೆನ್ಸಿಫೈಡ್‌ ಮಿಷನ್‌ 3.0) ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾವಣಗೆರೆ ಮತ್ತು ಹರಿಹರ ನಗರ ಪ್ರದೇಶದಲ್ಲಿ ಮುಖ್ಯವಾಗಿ ವಲಸೆ ಪ್ರದೇಶಗಳು, ಕೊಳಚೆ ಪ್ರದೇಶಗಳಲ್ಲಿ ಸಾರ್ವತ್ರಿಕ ಲಸಿಕೆಯಿಂದ ಬಿಟ್ಟು ಹೋದ ಎರಡು ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರನ್ನು ಗುರುತಿಸಿ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಈಗಾಗಲೇ ಕ್ರಿಯಾ ಯೋಜನೆ
ಸಿದ್ಧವಾಗಿದೆ. ಈ ಕಾರ್ಯಕ್ರಮವನ್ನು ನಿಗದಿತ ಗುರಿ ಸಾಧಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದರು.

ಆರ್‌ಸಿಎಚ್‌ ಅಧಿಕಾರಿ ಡಾ| ಮೀನಾಕ್ಷಿ ಮಾತನಾಡಿ, ಅಭಿಯಾನದಲ್ಲಿ ಲಸಿಕೆಗಳಾದ ಡಿಟಿಪಿ, ಮೀಸಲ್ಸ್‌, ಟಿಟಿ, ಬಿಸಿಜಿ, ರುಬೆಲ್ಲಾ ಸೇರಿದಂತೆ ಸಾರ್ವತ್ರಿಕೆ ಲಸಿಕೆಗಳನ್ನು ಹಾಕಿಸಿಕೊಳ್ಳುವಲ್ಲಿ ಬಿಟ್ಟು ಹೋದ ಎರಡು ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯನ್ನು ಗುರುತಿಸಿ ಈ ಲಸಿಕೆಗಳನ್ನು ನೀಡಲಾಗುವುದು.

ಫೆಬ್ರವರಿ ಮತ್ತು ಮಾರ್ಚ್‌ ಮಾಹೆಗಳ 8, 9, 10 ಮತ್ತು 12 ನೇ ದಿನಾಂಕಗಳಂದು ದಾವಣಗೆರೆ ಮತ್ತು ಹರಿಹರ ನಗರಗಳ ಈಗಾಗಲೇ ಗುರುತಿಸಲಾದ ಸ್ಥಳಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಸಾರ್ವತ್ರಿಕ ಲಸಿಕಾಕರಣದ ಕುರಿತು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಾಭಿವೃದ್ಧಿ ಕೋಶ, ಯುವಜನ
ಸಬಲೀಕರಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳು ಮತ್ತು ಮಹಿಳೆಯರಲ್ಲಿ ಜಾಗೃತಿ ಮೂಡಿಸುವ
ಮೂಲಕ ಲಸಿಕಾಕರಣದ ಯಶಸ್ಸಿಗೆ ಸಹಕರಿಸಬೇಕು ಎಂದರು.

Advertisement

ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಚಿಗಟೇರಿ ಜಿಲ್ಲಾಸ್ಪತ್ರೆಯ ಅಧೀಕ್ಷಕ ಜಯಪ್ರಕಾಶ್‌, ಡಿಡಿಪಿಐ ಸಿ.ಆರ್‌.ಪರಮೇಶ್ವರಪ್ಪ, ಮಹಿಳಾ
ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್‌, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ನಟರಾಜ್‌, ದಾವಣಗೆರೆ
ಮತ್ತು ಹರಿಹರ ತಾಲ್ಲೂಕು ವೈದ್ಯಾಧಿಕಾರಿಗಳು, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಓದಿ :ಕುಂದಾಪುರ ಹೆದ್ದಾರಿ ಅವ್ಯವಸ್ಥೆ ವಿರೋಧಿಸಿ ಧರಣಿ ಸತ್ಯಾಗ್ರಹ

Advertisement

Udayavani is now on Telegram. Click here to join our channel and stay updated with the latest news.

Next