Advertisement

13 ಗ್ರಾಮ ಪಂಚಾಯತ್‌ ಬಿಜೆಪಿ ತೆಕ್ಕೆಗೆ: ರೇಣುಕಾಚಾರ್ಯ

03:53 PM Feb 07, 2021 | Team Udayavani |

ಹೊನ್ನಾಳಿ: ತಾಲೂಕಿನ 20 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಇದರಲ್ಲಿ 13 ಗ್ರಾಮ ಪಂಚಾಯಿತಿಗಳು ಬಿಜೆಪಿ ತೆಕ್ಕೆಗೆ ಬಂದಿವೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ತಾಲೂಕಿನ ಹನುಮಸಾಗರ ಗ್ರಾಮ ಪಂಚಾಯಿತಿಗೆ ಶನಿವಾರ ಭೇಟಿ ನೀಡಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ ಅವರು ಮಾತನಾಡಿದರು. ಬೇಲಿಮಲ್ಲೂರು, ಮುಕ್ತೇನಹಳ್ಳಿ, ಲಿಂಗಾಪುರ, ಎಚ್‌. ಗೋಪಗೊಂಡನಹಳ್ಳಿ, ಕಮ್ಮಾರಗಟ್ಟೆ, ಕುಂಬಳೂರು, ಬನ್ನಿಕೋಡು, ಕ್ಯಾಸಿನಕೆರೆ, ಹನುಮಸಾಗರ, ಕತ್ತಿಗೆ, ಹುಣಸಗಟ್ಟ, ಕುಂದೂರು, ಬೆನಕನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿ ಅ ಧಿಕಾರದ ಚುಕ್ಕಾಣಿ ಹಿಡಿದಿದೆ ಎಂದರು.

ಇನ್ನೂ 8 ಗ್ರಾಪಂಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಬಾಕಿ ಇದ್ದು, ಅಲ್ಲಿಯೂ ಬಿಜೆಪಿ ಹೆಚ್ಚಿನ ಸಂಖ್ಯೆಯಲ್ಲಿ ಅಧಿ ಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ರೇಣುಕಾಚಾರ್ಯ, ನೂತನವಾಗಿ ಆಯ್ಕೆಯಾಗಿರುವ ಗ್ರಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಒಟ್ಟಾಗಿ
ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು.

ಐದು ವರ್ಷಗಳ ಕಾಲ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂದು ತಿಳಿಸಿದರು. ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನ 45 ಗ್ರಾಮ
ಪಂಚಾಯಿತಿಗಳಲ್ಲಿ ಬಿಜೆಪಿ 35ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಅಧಿ ಕಾರಕ್ಕೆ ಬರಲಿದೆ. ಕಾಂಗ್ರೆಸ್‌ನವರು ಅವಳಿ ತಾಲೂಕಿನಲ್ಲಿ ಕಾಂಗ್ರೆಸ್‌ ಪಕ್ಷ 30ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಅ ಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಆ ಪಕ್ಷದ ಮುಖಂಡರು ಹೇಳುತ್ತಿದ್ದರು. ಇದೀಗ ಅವಳಿ ತಾಲೂಕಿನ ಜನರು ಕಾಂಗ್ರೆಸ್‌ನವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದರು.

ಹನುಮಸಾಗರ ಗ್ರಾಪಂ ಅಧ್ಯಕ್ಷೆ ಬಸಮ್ಮ ನಾಗರಾಜಪ್ಪ, ಉಪಾಧ್ಯಕ್ಷೆ ಶೃತಿ ಮಂಜುನಾಥ್‌, ಮುಖಂಡರಾದ ಹಾಲೇಶಣ್ಣ, ಮಂಜುನಾಥ್‌, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್‌, ನೆಲಹೊನ್ನೆ ಮಂಜುನಾಥ್‌ ಇದ್ದರು.

Advertisement

ಓದಿ : ಉತ್ತರಾಖಂಡ್ ನಲ್ಲಿ ಹಿಮ ಸ್ಪೋಟ: ಹರಿದ್ವಾರ- ಋಷಿಕೇಶದಲ್ಲಿ ಪ್ರವಾಹ ಭೀತಿ

Advertisement

Udayavani is now on Telegram. Click here to join our channel and stay updated with the latest news.

Next