Advertisement

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

10:13 PM Sep 21, 2024 | Team Udayavani |

ದಾವಣಗೆರೆ: ಇಲ್ಲಿಯ ಕೆಟಿಜೆ ನಗರದ ಬಾರ್‌ವೊಂದಕ್ಕೆ ಏಕಾಏಕಿ ನುಗ್ಗಿದ ವ್ಯಕ್ತಿಯೋರ್ವ ಮದ್ಯ ಸೇವಿಸುತ್ತಿದ್ದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ(ಸೆ21) ಸಂಜೆ ಸಂಭವಿಸಿದೆ.

Advertisement

ಏಕಾಏಕಿ ಬಂದ ಗೌತಮ್ ಎಂಬ ವ್ಯಕ್ತಿ ಕುಮಾರ್ (36) ಎಂಬಾತನಿಗೆ ಎರಡ್ಮೂರು ಬಾರಿ ಚೂರಿಯಿಂದ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುಮಾರ್ ಪೊಲೀಸರು ಆಸ್ಪತ್ರೆಗೆ ಒಯ್ಯುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ.

ಗೌತಮ್ ಎಂಬಾತ ಚಾಕುವಿನಿಂದ ಚುಚ್ಚಿ ಕೊಲೆ ಮಾಡುವ ದೃಶ್ಯ ಬಾರ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕೊಲೆಗೈದ ಗೌತಮ್ ನನ್ನು ಕೆಟಿಜೆನಗರ ಠಾಣೆ ಪೊಲೀಸರು ಬಂಧಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next