Advertisement
ಗುರುವಾರ, ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಿರ್ಧಿಷ್ಟ ಅಳತೆಯ ನಂಬರ್ ಪ್ಲೇಟ್‌ನ ಮೂರನೇ ಒಂದು ಭಾಗದಲ್ಲಿ ಸರ್ಕಾರದ ಹಾಲೋಗ್ರಾಮ್ ಮತ್ತು ಐ.ಎನ್.ಡಿ. ಎಂಬುದಾಗಿ ನಮೂದಾಗಿರಬೇಕು. ಈ ರೀತಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಖ್ಯವಾಗಿ ಅಪಘಾತದ ಸಂದರ್ಭದಲ್ಲಿ ವಾಹನಗಳ ನೋಂದಣಿ
ಸಂಖ್ಯೆ ಪತ್ತೆ ಹಚ್ಚುವುದು ಕಷ್ಟವಾಗಿದೆ. ಹಾಗಾಗಿ ಇನ್ನು ಮುಂದೆ ಎಲ್ಲಾ ವಾಹನಗಳಿಗೆ ಭಾರತೀಯ ಮೋಟಾರು ವಾಹನ ಕಾಯ್ದೆ ಅನ್ವಯ ನೋಂದಣಿ ಫಲಕ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ವಾಹನ ನೋಂದಣಿ ಸಂಖ್ಯೆಯ ಫಲಕದ ಗುರುತಿನ ಅಕ್ಷರಗಳು ಆಂಗ್ಲ ಭಾಷೆ ಮತ್ತು ಅಂಕಿಗಳು ಹಿಂದೂ ಅರೇಬಿಕ್ ಸಂಖ್ಯೆಯಲ್ಲಿರಬೇಕು. ವಾಹನ ಹಿಂಬದಿ ಮತ್ತು ಮುಂಬದಿ ನೋಂದಣಿ ಫಲಕ ಹೊಂದಿರಬೇಕು. ನೋಂದಣಿ ಫಲಕ ಅಲ್ಯೂಮಿನಿಯಂ ಲೋಹದ್ದಾಗಿರಬೇಕು. ಐ.ಎಸ್.ಓ. 759 ಮಾದರಿಯಲ್ಲಿ ರಚಿತವಾಗಿರಬೇಕು. ಅದರ ಅಂಚುಗಳು ಹಾಳಾಗದಂತೆ 10 ಎಂ.ಎಂ. ದುಂಡಾಗಿ ಮಾಡಿಸಬೇಕು. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ 200+100 ಎಂ.ಎಂ. ಗಾತ್ರ, ಪ್ರಯಾಣಿಕರ ಕಾರ್‌ಗಳ ನಂಬರ್ ಪ್ಲೇಟ್ 500+120 ಎಂ.ಎಂ., ಲಘು ಮತ್ತು ಭಾರಿ ಗಾತ್ರದ ವಾಹನಗಳಿಗೆ 340+200 ಎಂ.ಎಂ. ಅಳತೆ ನೋಂದಣಿ ಫಲಕ ಹೊಂದಿರಬೇಕು. 2 ಮತ್ತು 3 ಚಕ್ರದ, ಮತ್ತು 4 ಚಕ್ರದ ವಾಹನಗಳ ಮುಂಭಾಗದ ನೋಂದಣಿ ಫಲಕದಲ್ಲಿ ಅಕ್ಷರಗಳ 35 ಎಂ.ಎಂ. ಎತ್ತರ, 7 ಎಂ.ಎಂ. ಅಗಲ ಹಾಗೂ ಹಿಂಭಾಗದ ನೋಂದಣಿ ಫಲಕದಲ್ಲಿ ಅಕ್ಷರಗಳ 40 ಎಂ.ಎಂ ಎತ್ತರ, 7 ಎಂ.ಎಂ. ಅಗಲ ಇರಬೇಕು. ಮಧ್ಯದ ಅಂತರ 5 ಎಂ.ಎಂ. ಇರಬೇಕು ಎಂದು ಅವರು ಹೇಳಿದರು ನೋಂದಣಿ ಫಲಕಗಳಲ್ಲಿ ಅಲಂಕಾರಿಕ ಅಕ್ಷರ, ಯಾವುದೇ ಚಿತ್ರ, ಹೆಸರು, ದೇವರ ಚಿತ್ರ ಹಾಕುವುದನ್ನು ನಿಷೇ ಧಿಸಲಾಗಿದೆ. ಆದ್ದರಿಂದ ಯಾವುದೇ ವಾಹನ ನೋಂದಣಿ ಫಲಕ ಸಿದ್ದಪಡಿಸುವಾಗ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಈ ನಿಯಮ ಪಾಲಿಸದೇ ಇದ್ದಲ್ಲಿ 1,000 ರೂ. ದಂಡ ವಿ ಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.