Advertisement

Davanagere; ಮನಪಾದಲ್ಲಿ ಕಪ್ಪುಪಟ್ಟಿ: ಬಿಜೆಪಿ ಸದಸ್ಯರ ವಿರುದ್ಧ ಕ್ರಮಕ್ಕಾಗಿ ಪ್ರತಿಭಟನೆ

10:12 PM Feb 28, 2024 | Team Udayavani |

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ರಾಷ್ಟ್ರಗೀತೆ, ನಾಡಗೀತೆ ಹಾಡುವ ಸಂದರ್ಭದಲ್ಲಿ ಕಪ್ಪುಪಟ್ಟಿ ಧರಿಸಿದ್ದ ಬಿಜೆಪಿ ಸದಸ್ಯರ ವಿರುದ್ಧ ಕ್ರಮ ತೆಗೆದುಕೊಳ್ಳುವ ಜೊತೆಗೆ ಸಭೆಯಿಂದ ಹೊರಕ್ಕೆ ಹಾಕಬೇಕು ಎಂದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.

Advertisement

ರಾಷ್ಟ್ರಗೀತೆ ಮತ್ತು ನಾಡಗೀತೆ ಹಾಡುವಾಗ ಕಪ್ಪುಪಟ್ಟಿ ಕಟ್ಟಿಕೊಳ್ಳುವಂತಿಲ್ಲ.‌ ಆದರೂ, ಬಿಜೆಪಿ ಸದಸ್ಯರು ಕಪ್ಪು ಪಟ್ಟಿ ಧರಿಸುವ ಮೂಲಕ ರಾಷ್ಟ್ರಗೀತೆ, ನಾಡಗೀತೆಗೆ ಅಪಮಾನ ಮಾಡಿರುವುದು ಅತ್ಯಂತ ಖಂಡನೀಯ. ಅಪಮಾನ ಮಾಡಿರುವ ಬಿಜೆಪಿ ಸದಸ್ಯರನ್ನು ಸಭೆಯಿಂದ ಹೊರ ಹಾಕಬೇಕು ಎಂದು ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.

ತಾವು ನಾಡಗೀತೆ, ರಾಷ್ಟ್ರಗೀತೆ ಹಾಡುವಾಗ ಕಪ್ಪು ಪಟ್ಟಿ ಧರಿಸಿರಲಿಲ್ಲ ಎಂದು ಬಿಜೆಪಿ ಸದಸ್ಯರು ಹೇಳಿದರು. ಕಪ್ಪು ಪಟ್ಟಿ ಧರಿಸಿರುವುದಕ್ಕೆ ವೀಡಿಯೋ ಸಾಕ್ಷಿ ಇದೆ ಎಂದು ಕಾಂಗ್ರೆಸ್ ಸದಸ್ಯರು ಹೇಳಿದರು.

ರಾಜ್ಯ ಸಭಾ ಸದಸ್ಯರಾಗಿ ನಾಸೀರ್ ಅಹಮದ್ ಆಯ್ಕೆ ಯಾದ ನಂತರ ವಿಜಯೋತ್ಸವ ಆಚರಿಸುವಾಗ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಖಂಡನೀಯ. ಅದರ ವಿರುದ್ಧ ಖಂಡನಾ‌ ನಿರ್ಣಯ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ ಘಟನೆಯೂ ನಡೆಯಿತು.

ಮಾತಿನ ಚಕಮಕಿ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರೊಬ್ಬರು ಅವಾಚ್ಯ ಶಬ್ದ ಬಳಸಿದರು. ಘಟನೆ ಬಯ ತನಿಖೆ ನಡೆಯುತ್ತಿದೆ. ಯಾರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೋ ಅಂತಹವರನನ್ನು ಗಲ್ಲಿಗೆ ಏರಿಸಬೇಕು ಎಂದು ಒತ್ತಾಯಿಸಿದರು.

Advertisement

ರಾಷ್ಟ್ರದ್ರೋಹ ಹೇಳಿಕೆ ನೀಡಿದವರ ಪರ ಇರುವವರಿಗೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಕೂಗಿದರು. ರಾಷ್ಟ್ರಗೀತೆಗೆ ಅಪಮಾನ ಮಾಡಿದವರಿಗೆ ಧಿಕ್ಕಾರ ಎಂದು ಕಾಂಗ್ರೆಸ್ ಸದಸ್ಯರು ಕೂಗಿದರು.‌ ಸಾಕಷ್ಟು ಗದ್ದಲ ಏರ್ಪಟ್ಟಿದ್ದರಿಂದ ಮೇಯರ್ ವಿನಾಯಕ ಪೈಲ್ವಾನ್ ಸಭೆಯನ್ನು ಕೆಲ ಕಾಲ ಮುಂದೂಡಿದರು.

Advertisement

Udayavani is now on Telegram. Click here to join our channel and stay updated with the latest news.

Next