Advertisement

Davanagere; ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ: ತಾಯಿ ಮತ್ತು ಮಗ ಸ್ಥಳದಲ್ಲೇ ಮೃತ್ಯು

07:53 PM Dec 04, 2023 | Team Udayavani |

ದಾವಣಗೆರೆ: ಹೊರ ವಲಯದ ಶಿರಮಗೊಂಡನಹಳ್ಳಿ ಸೇತುವೆ ಬಳಿ ಸೋಮವಾರ ಸಂಜೆ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ನಿವಾಸಿಗಳಾದ ಅರುಣ್ ಶೆಟ್ಟರ್ (50) ಮತ್ತು ಅವರ ತಾಯಿ ವಿಜಯ ಲಕ್ಷ್ಮಿ ಶೆಟ್ಟರ್ (70) ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ.

Advertisement

ಹೊಸರಿತ್ತಿ ಗ್ರಾಮದ ನಿವಾಸಿಗಳಾದ ಅರುಣ್ ಶೆಟ್ಟರ್ ಕುಟುಂಬದವರು ತುಮಕೂರಿನಲ್ಲಿ ಮದುವೆ ಮಗಿಸಿಕೊಂಡು ಹೊಸರಿತ್ತಿ ಗ್ರಾಮಕ್ಕೆ ಹಿಂತಿರುಗಿವಾಗ ಶಿರಮಗೊಂಡನಹಳ್ಳಿ ಸೇತುವೆ ಬಳಿ ಟ್ರ್ಯಾಕ್ಟರ್ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವರನ್ನು ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಅತಿ ವೇಗವಾಗಿ ಬಂದ ಕಾರು ಟ್ರ್ಯಾಕ್ಟರ್ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.ವೇಗದಲ್ಲಿದ್ದ ಕಾರು ನಿಯಂತ್ರಣಕ್ಕೆ ಸಿಗದೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿ ಏಳು ಜನರು ಪ್ರಯಾಣಿಸುತ್ತಿದ್ದರು.ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವುದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next