Advertisement

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

08:56 PM Sep 18, 2024 | Team Udayavani |

ದಾವಣಗೆರೆ: ತುಂಗಭದ್ರಾ ನದಿ ಪಾತ್ರದಲ್ಲಿನ ಮರಳು ತೆಗೆದ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನ್ಯಾಮತಿ ತಾಲೂಕಿನ ಮರಿಗೊಂಡನ ಹಳ್ಳಿಯಲ್ಲಿ ನಡೆದಿದೆ.

Advertisement

ತುಂಗಭದ್ರಾ ನದಿಪಾತ್ರದ ಮರಳಿಗಾಗಿ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆ ಸಂದರ್ಭದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಶಿವರಾಜ್(33) ಎಂಬಾತ ಮೃತಪಟ್ಟಿದ್ದರೆ. ಭರತ್‌ಎಂಬಾತ ತೀವ್ರವಾಗಿ ಗಾಯ ಗೊಂಡಿದ್ದು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಚ್. ಕಡದಕಟ್ಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸತೀಶ್ ಎಂಬುವರು ಶಾಲಾ ಕಾಂಪಾಂಡ್ ನಿರ್ಮಾಣದ ಗುತ್ತಿಗೆ ಪಡೆದಿದ್ದು, ಕಾಮಗಾರಿಗಾಗಿ ತುಂಗಭದ್ರಾ ನದಿಯಿಂದ ಮರಳು ತಂದಿದ್ದರು. ಈ ವಿಷಯವನ್ನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಗಮನಕ್ಕೆ ತರಲಾಗಿತ್ತು. ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸಂಬಂಧಿತರಿಗೆ ನೋಟಿಸ್ ಜಾರಿ ಮಾಡಿದ್ದರು.

ನದಿಯಿಂದ ಮರಳು ತೆಗೆದಿದ್ದ ವಿಚಾರವನ್ನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಗಮನಕ್ಕೆ ತಂದಿದ್ದು ಬಗ್ಗೆ ಸತೀಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಬುಧವಾರ ಬೆಳಗ್ಗೆ ಮಾತಿನ ಚಕಮಕಿ ನಡೆಸಿದ್ದರು. ಮಧ್ಯಾಹ್ನ ಸತೀಶ್, ಅವರ ಪುತ್ರ ಅಭಿ ಇತರರು ಮತ್ತೆ ವಿಚಾರ ಪ್ರಸ್ತಾಪಿಸಿದ್ದಾರೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ನಡೆದ ಘರ್ಷಣೆಯಲ್ಲಿ ಶಿವರಾಜ್ ಎಂಬಾತ ಮೃತಪಟ್ಟಿದ್ದು, ಭರತ್ ಎಂಬಾತ ತೀವ್ರವಾಗಿ ಗಾಯ ಗೊಂಡಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಮರಿಗೊಂಡನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಘಟನಾ ಸ್ಥಳಕ್ಕೆ ಹೊನ್ನಾಳಿ ಮತ್ತು ನ್ಯಾಮತಿ ಪೊಲೀಸರ ಭೇಟಿ ನೀಡಿದ್ದಾರೆ.ಎರಡೂ ಗ್ರಾಮಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Advertisement

ಇದನ್ನೂ ಓದಿ: Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next