ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸ್ಫೋಟಗೊಂಡಿದೆ. ಚನ್ನಗಿರಿ ತಾಲೂಕಿನ ಮಾವಿನಹೊಳೆ ಸಮೀಪದ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಶುಂಪಾಲರು ಸೇರಿ 46, ಜಗಳೂರು ತಾಲೂಕಿನ ಖಾಸಗಿ ಶಾಲೆಯ ಆರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿವರೆಗೆ ಒಟ್ಟಾರೆ 246 ವಿದ್ಯಾರ್ಥಿಗಳಿದ್ದಾರೆ. 10 ನೇ ತರಗತಿ ವಿದ್ಯಾರ್ಥಿಗೆ ರೋಗ ಲಕ್ಷಣ ಕಾಣಿಸಿಕೊಂಡಿದ್ದು ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿದಾಗ ಕೊರೊನಾ ದೃಢಪಟ್ಟಿತ್ತು. ಇತರೆ ಎಲ್ಲ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದಾಗ ಒಟ್ಟು 46 ಪ್ರಕರಣ ದೃಢಪಟ್ಟಿವೆ.
ಪ್ರಾಚಾರ್ಯ ಹಾಗೂ 6 ವಿದ್ಯಾರ್ಥಿಗಳಲ್ಲಿ ಸ್ವಲ್ಪ ಪ್ರಮಾಣದ ರೋಗ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನುಳಿದ ವಿದ್ಯಾರ್ಥಿಗಳಲ್ಲಿ ರೋಗ ಲಕ್ಷಣಗಳು ಕಂಡು ಬರದ ಹಿನ್ನೆಲೆಯಲ್ಲಿ ಹಾಸ್ಟೆಲ್‌ನಲ್ಲೇ ಐಸೋಲೇಷನ್ ಮಾಡಲಾಗಿದೆ. 10 ದಿನ ರಜೆ ಘೋಷಿಸಲಾಗಿದೆ. ಪ್ರತಿ ವಿದ್ಯಾರ್ಥಿಯ ಮೇಲೆ ನಿಗಾವಹಿಸಲಾಗಿದೆ.
ಜಗಳೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಆರು ಮಕ್ಕಳಿಗೆ ಕೊರೊನಾ ಕಾಣಿಸಿಕೊಂಡಿದೆ. ಆರು ವಿದ್ಯಾರ್ಥಿಗಳ ಸಂಪರ್ಕಿತರು, ಸಿಬ್ಬಂದಿ, ಇತರರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 10 ದಿನಗಳವರೆಗೆ ಶಾಲೆಯನ್ನ ಸೀಲ್‌ಡೌನ್ ಮಾಡಲಾಗಿದೆ.
ಇದನ್ನೂ ಓದಿ: ಸಹಕಾರಿ ಸಂಘಗಳು ಇನ್ನಷ್ಟು ಕೃಷಿಗೆ ಸಹಾಯ ಮಾಡುವ ಕಾರ್ಯ ಮಾಡಬೇಕು:ವಿಶ್ವೇಶ್ವರ ಹೆಗಡೆ ಕಾಗೇರಿ