Advertisement

ದಾವಣಗೆರೆ ಜಿಲ್ಲೆಯಲ್ಲಿ 86 ಹೊಸ ಕೋವಿಡ್ ಪ್ರಕರಣ ಪತ್ತೆ! ಓರ್ವ ಸಾವು

07:25 PM Jul 30, 2020 | sudhir |

ದಾವಣಗೆರೆ: ಜಿಲ್ಲೆಯಲ್ಲಿ ಇಂದು 86 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು ಓರ್ವ ಸೋಂಕಿನಿಂದ ಮೃತಪಟ್ಟ ವರದಿಯಾಗಿದೆ.

Advertisement

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 50 ವರ್ಷದ ವ್ಯಕ್ತಿ (ರೋಗಿ ನಂಬರ್ 96853) ಮೃತಪಟ್ಟವರು. ಜು.‌24 ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿಲ್ಲೆಯಲ್ಲಿ ಹೊಸದಾಗಿ 86 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಎರಡು ಸಾವಿರದ ಸಮೀಪ‌ವಾಗುತ್ತಿದೆ. 1979 ಪ್ರಕರಣಗಳಲ್ಲಿ ಈಗ 867 ಸಕ್ರಿಯ ಪ್ರಕರಣಗಳಿವೆ.

ಗುರುವಾರ 85 ಜನರು ಒಳಗೊಂಡಂತೆ ಈವರೆಗೆ 1066 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 46ಕ್ಕೆ ಏರಿದೆ.

Advertisement

Udayavani is now on Telegram. Click here to join our channel and stay updated with the latest news.

Next