Advertisement

ದಾವಣಗೆರೆ: ಬಾಲಕಿಗೆ ಲೈಂಗಿಕ ಕಿರುಕುಳ: ವೃದ್ಧನಿಗೆ 5 ವರ್ಷ ಜೈಲು

05:19 PM Nov 18, 2022 | Team Udayavani |

ದಾವಣಗೆರೆ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ವಯೋವೃದ್ಧನಿಗೆ ದಾವಣಗೆರೆ ಜಿಲ್ಲಾ ಮತ್ತು ಸತ್ರ ಮಕ್ಕಳ ಸ್ನೇಹಿ(ಫೋಕ್ಸೋ) ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ, 5 ಸಾವಿರ ದಂಡ ವಿಧಿಸಿದೆ.

Advertisement

ದಾವಣಗೆರೆಯ ವಿಮಾನಮಟ್ಟಿ ಚಾನಲ್ ಏರಿಯಾ ನಿವಾಸಿ ತಿಮ್ಮಪ್ಪ(65) ಶಿಕ್ಷೆಗೆ ಗುರಿಯಾದ ವ್ಯಕ್ತಿ. ಮನೆ ಸಮೀಪ ದಲ್ಲೇ ಇದ್ದ ಅಪ್ರಾಪ್ತೆಯ ಪರಿಚಯ ಮಾಡಿಕೊಂಡಿದ್ದ. ಮನೆ ಕೆಲಸಕ್ಕೆ ಹೋಗುತ್ತಿದ್ದ ಸಂತ್ರಸ್ಥೆಯ ತಾಯಿ ಮಗಳನ್ನು ಆಟವಾಡಲು ಮನೆಯ ಬಳಿ ಬಿಟ್ಟು ಹೋಗುತ್ತಿದ್ದರು. ಚಾಕೋಲೇಟ್ ಕೊಡಿಸುವುದಾಗಿ ಹೇಳಿ, ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತು 2019 ರಲ್ಲಿ ದಾವಣಗೆರೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ತನಿಖಾಧಿಕಾರಿ ಪ್ರಕಾಶ್ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿ ದ್ದರು. ಮೂರು ವರ್ಷಗಳ ಕಾಲ ಪ್ರಕರಣದ ವಿಚಾರಣ ನಡೆದು, ಅಂತಿಮವಾಗಿ ಆರೋಪಿ ಲೈಂಗಿಕ ಕಿರುಕುಳ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧಿಶರಾದ ಎನ್. ಶ್ರೀಪಾದ್ 5 ವರ್ಷ ಜೈಲು ಶಿಕ್ಷೆ, 5 ಸಾವಿರ ದಂಡ ವಿಧಿಸಿದ್ದಲ್ಲದೆ ಸಂತ್ರಸ್ತೆಗೆ 2 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಎಸ್.ಕೋಟೇಗೌಡರ್ ವಾದ ಮಂಡಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next