Advertisement

CITU; ಗ್ರಾ.ಪಂ ನೌಕರರ 19 ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಹೋರಾಟ

03:23 PM Jul 14, 2024 | Team Udayavani |

ದಾವಣಗೆರೆ: ಗ್ರಾಮ ಪಂಚಾಯತ್ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ಒಳಗೊಂಡಂತೆ 19 ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜು. 23 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ (ಸಿಐಟಿಯು) ನೌಕರರ ಸಂಘದ ರಾಜ್ಯ ಖಜಾಂಚಿ ಆರ್.ಎಸ್. ಬಸವರಾಜ್ ತಿಳಿಸಿದರು.

Advertisement

ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅಂದು ನಡೆಯುವ ಹೋರಾಟದಲ್ಲಿ ದಾವಣಗೆರೆ ಜಿಲ್ಲೆಯ ಒಂದು ಸಾವಿರ ನೌಕರರು ಸೇರಿದಂತೆ 30 ಸಾವಿರ ದಷ್ಟು ನೌಕರರು ಭಾಗವಹಿಸಲಿದ್ದಾರೆ. ಸರ್ಕಾರ ಎಲ್ಲ ಬೇಡಿಕೆ ಈಡೇರಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡುತ್ತಿರುವ ಬಿಲ್ ಕಲೆಕ್ಟರ್, ನೀರಗಂಟಿ, ಕಂಪ್ಯೂಟರ್ ಆಪರೇಟರ್, ಜವಾನ, ಕ್ಲರ್ಕ್ ಗಳಿಗೆ ಕನಿಷ್ಠ 31 ಸಾವಿರ ವೇತನ ನಿಗದಿ ಮಾಡಬೇಕು ಎಂದು ಒತ್ತಾಯಿಸಿ 2022 ರಿಂದ ಹೋರಾಟ ನಡೆಸಲಾಗುತ್ತಿದ್ದರೂ ಈವರೆಗೆ ಬೇಡಿಕೆ ಈಡೇರಿಲ್ಲ. ಕಳೆದ ಜನವರಿಯಲ್ಲಿ ಹೋರಾಟ ನಡೆಸಿದ ಸಂದರ್ಭದಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರೇ ಭರವಸೆ ನೀಡಿದ್ದರೂ ಜಾರಿಗೆ ಬಂದಿಲ್ಲ. ಹಾಗಾಗಿ ಬೇಡಿಕೆ ಈಡೇರಿಸುವ ತನಕ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡಿ ನಿವೃತ್ತ ರಾದವರಿಗೆ ವರ್ಷಕ್ಕೆ 15 ದಿನಗಳ ವೇತನದ ಆಧರಿಸಿ ಪಿಂಚಣಿ ನೀಡಬೇಕು. ಆದರೆ, ಪಿಂಚಣಿ ನೀಡಲಾಗುತ್ತಿಲ್ಲ. ‌ಕನಿಷ್ಠ ಆರು ಸಾವಿರ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಗೌರವಾಧ್ಯಕ್ಷ ಕೆ.ಎಚ್. ಆನಂದರಾಜ್, ಶ್ರೀನಿವಾಸಾಚಾರಿ, ಬಸವ ರಾಜ್ ಬೇತೂರು, ಚಂದ್ರಪ್ಪ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next