Advertisement
ಮತದಾನ ದಿನಾಂಕ ಸಮೀಪಿಸುತ್ತಿದ್ದರೂ ಬಿಸಿಲಿನ ಬೇಗೆಯಿಂದಬಳಲುತ್ತಿರುವ ಜನರು ಚುನಾವಣೆ ಬಗ್ಗೆ ಇನ್ನೂ ಹೆಚ್ಚಿನ ಒಲವು ತೋರಿಸಿಲ್ಲ. ಕಳೆದ ತಿಂಗಳಿನಿಂದಲೇ ಬಿಜೆಪಿ ಪ್ರಚಾರ ಆರಂಭಿಸಿದೆ. ಆದರೆ ಅಭ್ಯರ್ಥಿ ಆಯ್ಕೆ ತಡವಾಗಿ ಆದ ಪರಿಣಾಮ ಕಾಂಗ್ರೆಸ್ ಚುನಾವಣಾ ಪ್ರಚಾರ ಕಳೆದ ಒಂದು ವಾರದಿಂದ ಶುರುವಾಗಿದೆ. ಬಿಜೆಪಿ ಪಕ್ಷದಿಂದ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ ಹಾಗೂ ಜಿ.ಕರುಣಾಕರರೆಡ್ಡಿ ಎರಡು ಸುತ್ತಿನ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರವಾಗಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕೂಡ ಒಂದು ದಿನ ಪ್ರಚಾರ ನಡೆಸಿದ್ದಾರೆ.
ಸಹಕಾರ ಕೋರಿದ್ದಾರೆ. ನಂತರ ಕಾಂಗ್ರೆಸ್ ಚುನಾವಣಾ ಉಸ್ತುವಾರಿ
ಎಸ್.ಎಸ್. ಮಲ್ಲಿಕಾರ್ಜುನ ಒಂದು ದಿನ ಪ್ರಚಾರಕ್ಕೆ ಬಂದಿದ್ದಾರೆ. ಒಟ್ಟಾರೆಯಾಗಿ ತಾಲೂಕಿಗೆ ಯಾವುದೇ ಸ್ಟಾರ್ ಪ್ರಚಾರಕರು ಆಗಮಿಸಿಲ್ಲ. ಹೀಗಾಗಿ ಹಳ್ಳಿಗಳಲ್ಲಿ ಮತದಾರರು ಚುನಾವಣೆ ಬಗ್ಗೆ ಆಷ್ಟೊಂದು ಆಸಕ್ತಿ ತೋರುತ್ತಿಲ್ಲ. ಕ್ಷೇತ್ರದಲ್ಲಿ ಚುನಾವಣೆ ಅಬ್ಬರ ಜೋರಾಗಿ ಕಾಣುತ್ತಿಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರು ಚುನಾವಣೆ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ ಹೊರತು ಮತದಾರ ಮಾತ್ರ ತನ್ನ ಗುಟ್ಟು ಬಿಟ್ಟುಕೊಟ್ಟಿಲ್ಲ. ತಾಲೂಕಿನಲ್ಲಿ ಎಸ್ಸಿ-ಎಸ್ಟಿ,
ಹಿಂದುಳಿದ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಕೆಲಸ ಅರಸಿ ಕಾಫಿ ಸೀಮೆಗೆ ಗುಳೇ ಹೋಗುತ್ತಿದ್ದಾರೆ. ಉದ್ಯೋಗ ಸೃಷ್ಟಿಯಾಗುವ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬೇಕು ಎಂಬುದು ಇಲ್ಲಿನ ಜನರ ಪ್ರಮುಖ ಬೇಡಿಕೆಯಾಗಿದೆ. ಮಾಜಿ ಶಾಸಕ ದಿ.ಎಂ.ಪಿ.ರವೀಂದ್ರ ಪ್ರಯತ್ನದ ಫಲವಾಗಿ ತಾಲೂಕಿಗೆ 371ಜೆ ಕಲಂ ಸೌಲಭ್ಯ ದೊರಕಿದ್ದು, ಯುವಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ದೊರೆಯಲಿರುವುದರಿಂದ ಇದು ಯುವಜನತೆಗೆ ಸ್ವಲ್ಪ ಭರವಸೆ ಮೂಡಿಸಿದೆ.
Related Articles
Advertisement
ಕ್ಷೇತ್ರದಲ್ಲಿ ಯುವ ಜನತೆ ಮೋದಿ ಮತ್ತು ರಾಷ್ಟ್ರ ಪ್ರೇಮದ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಭವಿಷ್ಯದ ನಾಯಕಎಂದು ಬಣ್ಣಿಸಲಾಗುತ್ತಿದೆ. ಸರ್ಜಿಕಲ್ ಸ್ಟ್ರೈಕ್, ಬಾಲಕೋಟ್ ಘಟನೆ, ರಫೇಲ್ ಹಗರಣದ ಬಗ್ಗೆ ಜನರು ತಲೆ ಕೆಡೆಸಿಕೊಂಡಿಲ್ಲ. ಬಿಜೆಪಿಯವರು ಬಡವರಿಗೆ ಅಕ್ರಮ ಸಕ್ರಮದಡಿ ಪಟ್ಟಾ ವಿತರಣೆ,
ಬಡವರಿಗೆ ಸೂರು ನೀಡಿದ್ದೇವೆ ಎನ್ನುತ್ತಿದ್ದಾರೆ. 371ಜೆ ಕಲಂ ಸೌಲಭ್ಯ, 60 ಕೆರೆಗಳಿಗೆ ನದಿ ನೀರು ತುಂಬಿಸುವ, ಗರ್ಭಗುಡಿ ಬ್ರಿಡ್ಜ್ ಕಂ ಬ್ಯಾರೇಜ್ ಯೋಜನೆ ಸಕಾರಗೊಳಿಸಿದ್ದೇವೆ ಎಂದು ಕಾಂಗ್ರೆಸ್ ನವರು ಪ್ರಚಾರ ಮಾಡುತ್ತಿದ್ದಾರೆ. ಒಟ್ಟಾರೆ ಇಲ್ಲಿ ದೇಶದ ಸಮಸ್ಯೆಗಳ ಬದಲಾಗಿ ಸ್ಥಳೀಯ ಸಮಸ್ಯೆಗಳೇ ಹೆಚ್ಚಾಗಿ ಪ್ರತಿಧ್ವನಿಸುತ್ತಿವೆ.