Advertisement
ಗುರುವಾರ, ತಮ್ಮ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ಸೋಂಕಿನ ಅರಿವು ಮತ್ತು ನಿಯಂತ್ರಣ ಕುರಿತು ನಗರದ ಪ್ರಸಿದ್ಧ ಜವಳಿ ಅಂಗಡಿಗಳ ಮಾಲೀಕರೊಂದಿಗೆ ಆಯೋಜಿಸಿದ್ದ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಈಗಾಗಲೇ ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬಟ್ಟೆ ವ್ಯಾಪಾರಕ್ಕೆ ಅನುವು ಮಾಡಿಕೊಡಲಾಗಿದೆ. ಅದೇ ರೀತಿ ದಾವಣಗೆರೆ ನಗರದಲ್ಲಿ ಹಬ್ಬಗಳ ಹಿನ್ನೆಲೆಯಲ್ಲಿ ಜವಳಿ ಅಂಗಡಿ ಮಾಲೀಕರ ಒತ್ತಾಯದ ಮೇರೆಗೆ ಕೆಲ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಅಂಗಡಿ ತೆಗೆಯಲು ಅವಕಾಶ ನೀಡಲಾಗಿದೆ. ಆದರೆ, ಅಂಗಡಿ ಮಾಲೀಕರು ಅವಘಡ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಕೆಲ ನಿಯಮಗಳನ್ನು ಪಾಲಿಸಬೇಕು ಎಂದರು.
Related Articles
Advertisement
ಹೊಟೇಲ್, ಬೀದಿ ಬದಿ ವ್ಯಾಪಾರ ಸೇರಿದಂತೆ ಜಿಲ್ಲೆಯಲ್ಲಿ ಕೋಳಿ ಮಾಂಸ ಮಾರುವ ಹಾಗೂ ಮೊಟ್ಟೆ ಅಂಗಡಿಗಳನ್ನು ಮುಚ್ಚಿಸಲಾಗಿದ್ದು, ಈ ವ್ಯಾಪಾರಸ್ಥರಿಗೆ ಸಾಕಷ್ಟು ನಷ್ಟವಾಗಿದೆ. ಸಾರ್ವಜನಿಕರ ಆರೋಗ್ಯದ ಮೇಲಿನ ದುಷ್ಪರಿಣಾಮದ ಕುರಿತು ಅವಲೋಕಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಇದೇ ರೀತಿ ಕೊರೊನಾ ಸೋಂಕು ನಿರ್ವಹಣೆಯಲ್ಲಿ ಅಂಗಡಿ ಮಾಲೀಕರು ಸಹ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ನಮ್ಮ ಜಿಲ್ಲೆಯಲ್ಲಿ 102 ಜನ ವಿದೇಶ ಪ್ರವಾಸ ಕೈಗೊಂಡವರಿದ್ದು, ಅವರಲ್ಲಿ 6ಜನರನ್ನು ನಿಗಾವಣೆಯಲ್ಲಿ ಇರಿಸಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಯಾರೊಬ್ಬರಲ್ಲೂ ಸೋಂಕು ಕಂಡುಬಂದಿಲ್ಲ. ಎಲ್ಲ ವರದಿಗಳು ನೆಗೆಟಿವ್ ಇವೆ ಎಂದು ತಿಳಿಸಿದರು. ಎಸ್‌ಪಿ ಹನುಮಂತರಾಯ ಮಾತನಾಡಿ, ಜವಳಿ ಅಂಗಡಿ ಮಾಲೀಕರು ಕಟ್ಟುನಿಟ್ಟಿನ ಕ್ರಮ ಅನುಸರಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಡಾ| ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಿ.ಡಿ.ರಾಘವನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಬಿ.ಎಸ್.ಚನ್ನಬಸಪ್ಪ ಆ್ಯಂಡ್ ಸನ್ಸ್, ಗೌಡ್ರ ಜಯದೇವಪ್ಪ, ಅಂಬರ್‌ಕರ್ ಪಂಪಣ, ರವಿತೇಜ, ಶಾಂತಲಾ ಸಿಲ್ಕ್ಸ್ ಸೇರಿದಂತೆ ವಿವಿಧ ಜವಳಿ ಅಂಗಡಿಗಳ ಮಾಲೀಕರು ಉಪಸ್ಥಿತರಿದ್ದರು.