Advertisement

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

02:24 PM Apr 28, 2024 | |

ದಾವಣಗೆರೆ: ದಾವಣಗೆರೆಯ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಭಾನುವಾರ ನಡೆದ ವಿಜಯ ಸಂಕಲ್ಪ ಸಮಾವೇಶಕ್ಕೆ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ ಇತರೆಡೆಯಿಂದ ಜನಸಾಗರವೇ ಹರಿದು ಬಂದಿತು.

Advertisement

ನಿಗದಿಯಾಗಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ 2ಕ್ಕೆ ಸಮಾವೇಶಕ್ಕೆ ಆಗಮಿಸಬೇಕಿತ್ತಾದರೂ ಬೆಳಗಾವಿ, ಶಿರಸಿ ಸಮಾವೇಶದ ಹಿನ್ನೆಲೆಯಲ್ಲಿ ಒಂದು ಗಂಟೆ ತಡವಾಗಿ ಬರುತ್ತಾರೆ ಎಂದು ಗೊತ್ತಿದ್ದರೂ ಜನರು ಭಾರೀ ಉತ್ಸಾಹದಿಂದಲೇ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದತ್ತ ದೌಡಾಯಿಸಿದರು. ಸಮಾವೇಶ ಪ್ರಾರಂಭ ಮುನ್ನವೇ ಸಾವಿರಾರು ಜನರು ಸಭಾಂಗಣದಲ್ಲಿ ಇದ್ದರು.

ಗಾಯಕರಾದ ಕಂಬದ ರಂಗಯ್ಯ, ದಿವ್ಯಾ ರಾಘವನ್ ಇತರರ ಹಾಡುಗಳಿಗೆ ಭರ್ಜರಿ ಹೆಜ್ಜೆ ಹಾಕಿದರು. ಮಿಮಿಕ್ರಿ ಪ್ರಕಾಶ್ ಹಾಸ್ಯ ದ ಮೂಲಕ ಜನರ ರಂಜಿಸಿದರು. ಮೋದಿಯವರ ಬೃಹತ್ ಕಟೌಟ್, ಬಿಜೆಪಿ ಬಾವುಟ ಹಾರಾಡಿದವು.‌ ಜೈಶ್ರೀರಾಮ್, ಮೋದಿ, ಭಾರತ್ ಮಾತಾ ಕೀ ಜೈ ಘೋಷಣೆ ಮೊಳಗಿದವು.

ಮೋದಿ ಭೇಟಿ ಹಿನ್ನೆಲೆಯಲ್ಲಿ ದಾವಣಗೆರೆಯ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿತ್ತು. ಸಮಾವೇಶ ನಡೆದ ಹೈಸ್ಕೂಲ್ ಮೈದಾನಕ್ಕೆ ಹೊಂದಿಕೊಂಡಿರುವ ರಸ್ತೆಗಳಲ್ಲಿ ಹೋಟೆಲ್, ಅಂಗಡಿ, ವಾಣಿಜ್ಯ ಸಂಕೀರ್ಣ ಗಳನ್ನು ಶನಿವಾರದಿಂದಲೇ‌ ಮುಚ್ಚಿಸಲಾಗಿತ್ತು. ಹೈಸ್ಕೂಲ್ ಮೈದಾನ ಸಂಪರ್ಕಿ ಸುವ ಪ್ರತಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಖಾಸಗಿ, ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿತ್ತು. ಎ.ವಿ. ಕಮಲಮ್ಮ ಮಹಿಳಾ ಕಾಲೇಜು ರಸ್ತೆ, ಪ್ರವಾಸಿ ಮಂದಿರ ರಸ್ತೆ ಇತರೆಡೆ ಸಂಚಾರ ನಿರ್ಬಂಧಿಸಲಾಗಿತ್ತು. ಎತ್ತರದ ಕಟ್ಟಡಗಳಲ್ಲಿ ರಕ್ಷಣಾ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದರು. ಬಿರು ಬಿಸಿಲಿನ ನಡುವೆಯೂ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next