ದಾವಣಗೆರೆ; ವಿದ್ಯಾರ್ಥಿ ಸಮುದಾಯ ಎದುರಿಸುತ್ತಿರುವವಿವಿಧ ಶೈಕ್ಷಣಿಕ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿಸೋಮವಾರ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೊರೊನಾ ಎರಡನೇ ಆಲೆಯ ನಂತರ ಸಹಜ ಸ್ಥಿತಿಗೆಮರಳಿದೆ. ಈಗಾಗಲೇ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ,ಸ್ನಾತಕೋತ್ತರ ತರಗತಿಗಳೆಲ್ಲವೂ ಮತ್ತೆ ಪ್ರಾರಂಭವಾಗಿವೆ.ಭೌತಿಕ ತರಗತಿಗಳು ಆರಂಭಗೊಂಡ ಬಳಿಕ ವಿದ್ಯಾರ್ಥಿಗಳಿಗೆಕೆಲವೊಂದು ಸಮಸ್ಯೆಗಳು ಉದ್ಭವಿಸುತ್ತಿರುವುದು ಶೋಚನಿಯ.
ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಸ್ಥಗಿತಗೊಂಡಿದ್ದಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರತೊಂದರೆಯಾಗಿ ಪರಿಣಮಿಸಿದೆ .
ಸಾರಿಗೆ ಇಲಾಖೆಯುತಕ್ಷಣವೇ ವಿದ್ಯಾರ್ಥಿಗಳ ಅವಶ್ಯಕತೆಗೆ ಅನುಗುಣವಾಗಿಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆಬಸ್ ಸಂಚಾರ ಆರಂಭಿಸಬೇಕು ಎಂದು ಪ್ರತಿಭಟನಾಕಾರರುಒತ್ತಾಯಿಸಿದರು.ಡಿಪ್ಲೋಮಾ, ಎಂಜಿನಿಯರಿಂಗ್, ಸ್ನಾತಕ-ಸ್ನಾತಕೋತ್ತರ,ಪಿಎಚ್‌ಡಿ ಮಾಡುತ್ತಿರುವ ಪರಿಶಿಷ್ಟ ಜಾತಿ, ಪಂಗಡ ,ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳುಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೇಪರದಾಡುವಂತಾಗಿದೆ. ರಾಜ್ಯ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆಎಲ್ಲಾ ವಿದ್ಯಾರ್ಥಿ ವೇತನ ತಕ್ಷಣ ಬಿಡುಗಡೆಗೊಳಿಸಬೇಕು.
ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಿಗೆ ಅವಲಂಬಿತರಾಗಿದ್ದಾರೆ. ಹೊಸದಾಗಿ ಶಾಲಾ ಕಾಲೇಜಿಗೆಪ್ರವೇಶ ಪಡೆದ ವಿದ್ಯಾರ್ಥಿಗಳ ತರಗತಿಗಳು ಆರಂಭವಾಗಿವೆ.ಆದರೆ, ವಿದ್ಯಾರ್ಥಿಗಳ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೆಮುಗಿಯದೆ ದಿನನಿತ್ಯ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿನಿರ್ಮಾಣವಾಗಿದೆ.
ಸರ್ಕಾರ ತಕ್ಷಣವೇ ಸಂಬಂಧಪಟ್ಟಅ ಧಿಕಾರಿಗಳಿಗೆ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೆಯನ್ನುಪೂರ್ಣಗೊಳಿಸುವಂತೆ ನಿರ್ದೇಶನ ನೀಡಿ ವಸತಿನಿಲಯಗಳಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದುಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿಸಲ್ಲಿಸಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಶರತ್, ಶಶಾಂಕ್,ಮಂಜುನಾಥ್, ದೊಡ್ಡೆಶ್, ನರೇಂದ್ರ, ತಿಪ್ಪೇಶ್, ಸಿದ್ದೇಶ್,ಇತರರು ಇದ್ದರು