Advertisement
ಭಾನುವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ವರ್ಷದ ಸ್ವಾತಂತ್ರ ದಿನದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಬಹುಜನರ ಒಳಿತಿಗಾಗಿ, ಬಹುಜನರ ಕಲ್ಯಾಣಕ್ಕಾಗಿ ಜಗಜ್ಯೋತಿ ಬಸವೇಶ್ವರರ ಮಹಾಮನೆಯ ಮಂತ್ರವನ್ನು ಸಾರುತ್ತಾ ಭವ್ಯ ಭಾರತ ಕಟ್ಟುವ ಸಂಕಲ್ಪ ಮಾಡೋಣ ಎಂದರು.
Related Articles
Advertisement
ಜಗಳೂರು ಕ್ಷೇತ್ರದಲ್ಲಿ 660 ಕೋಟಿ ರೂ. ಅನುದಾನದಲ್ಲಿ 57 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆ, ಚನ್ನಗಿರಿ ತಾಲೂಕು ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಮುಂದುವರೆದ ಭಾಗಕ್ಕೆ 167 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ವ್ಯಾಪ್ತಿಯ 130 ಕೆರೆಗಳ ನೀರು ತುಂಬಿಸುವ 518 ಕೋಟಿ ರೂ. ಯೋಜನೆಗೆ ಡಿಪಿಆರ್ ತಯಾರಿಸಲಾಗುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ 164.76 ಕೋಟಿ ಹಾಗೂ ರಾಜ್ಯದ ಪಾಲು 54.71 ಕೋಟಿ ರೂ. ಸೇರಿದಂತೆ ಒಟ್ಟು 219.47 ಕೋಟಿ ರೂ.ಗಳ ನೆರವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
ಜಲಜೀವನ್ ಮಿಷನ್ ಯೋಜನೆಯಡಿ 166.74 ಕೋಟಿ ರೂ. ಯೋಜನೆಯಡಿ 225 ಕಾಮಗಾರಿ ಪ್ರಗತಿಯಲ್ಲಿದ್ದು, 9 ಕಾಮಗಾರಿ ಪೂರ್ಣಗೊಂಡಿವೆ. ಜಲಸಿರಿ ಯೋಜನೆಯಡಿ 24-7 ನೀರು ಪೂರೈಸುವ ಕಾಮಗಾರಿಯನ್ನ ಆಗಸ್ಟ್ ವೇಳೆಗೆ ಪೂರ್ಣಗೊಳಿಸಿ, ದಾವಣಗೆರೆ ಮಹಾನಜನತೆಗೆ ನಿರಂತರ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಲಾಗುವುದು.
ಸ್ಮಾರ್ಟ್‌ಸಿಟಿ ಯೋಜನೆಯಡಿ 1014 ಕೋಟಿ ರೂಪಾಯಿ ಮೊತ್ತದಲ್ಲಿ 95 ಕಾಮಗಾರಿ ಕೈಗೊಂಡಿದ್ದು, ಈವರೆಗೆ 445 ಕೋಟಿ ರೂ. ವೆಚ್ಚದಲ್ಲಿ 37 ಕಾಮಗಾರಿ ಪೂರ್ಣಗೊಳಿಸಿದೆ. 3.10 ಕೋಟಿ ವೆಚ್ಚದಲ್ಲಿ ನಗರದ ಕಲ್ಯಾಣಿಯನ್ನು ಆಕರ್ಷಕ ಪುಷ್ಕರಣಿಯಾಗಿ ನಿರ್ಮಿಸಲಾಗುತ್ತಿದೆ ಎಂದರು. ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್ ಎಸ್.ಟಿ. ವೀರೇಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮತ್ತಿತರರು ಉಪಸ್ಥಿತರಿದ್ದರು.