Advertisement

ಬಜೆಟ್‌ನಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಒತ್ತುಕೊಡಿ

01:03 PM Feb 13, 2022 | Team Udayavani |

ದಾವಣಗೆರೆ: ರಾಜ್ಯ ಬಜೆಟ್‌ನಲ್ಲಿ ಜಿಲ್ಲೆಗೆವಿಮಾನನಿಲ್ದಾಣ, ಸರ್ಕಾರಿ ವೈದ್ಯಕೀಯಕಾಲೇಜು, ಕೃಷಿ ಕಾಲೇಜು ಹಾಗೂ ಪ್ರತ್ಯೇಕ ಹಾಲುಒಕ್ಕೂಟ ಸ್ಥಾಪನೆಗೆ ವಿಶೇಷ ಆದ್ಯತೆ ನೀಡುವಂತೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿಮನವಿ ಮಾಡಿರುವುದಾಗಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ತಿಳಿಸಿದರು.

Advertisement

ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ದಾವಣಗೆರೆ ರಾಜ್ಯದ ಮಧ್ಯ ಕೇಂದ್ರವಾಗಿದೆ.ಹಾವೇರಿ, ದಾವಣಗೆರೆ ಮತ್ತು ಚಿತ್ರದುರ್ಗಜಿಲ್ಲೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಸುತ್ತಮುತ್ತಲಿನಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.

ಆದ್ದರಿಂದಬಜೆಟ್‌ನಲ್ಲಿ ಜಿಲ್ಲೆಗೆ ವಿಮಾನನಿಲ್ದಾಣ ಘೋಷಿಸಿಅದಕ್ಕೆ ಸೂಕ್ತ ಅನುದಾನ ಮೀಸಲಿಡಬೇಕೆಂದುಮನವಿ ಮಾಡಿದ್ದೇನೆ ಎಂದರು.ಶೈಕ್ಷಣಿಕವಾಗಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯಮಟ್ಟದಲ್ಲಿ ಖ್ಯಾತಿ ಪಡೆದಿರುವ ದಾವಣಗೆರೆ ಜಿಲ್ಲೆಗೆಸರ್ಕಾರಿ ವೈದ್ಯಕೀಯ ಕಾಲೇಜು, ಕೃಷಿ ಕಾಲೇಜುಆರಂಭಿಸಿದರೆ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ,ಹಾವೇರಿ, ವಿಜಯನಗರ ಜಿಲ್ಲೆಗಳ ವಿದ್ಯಾರ್ಥಿಗಳಿಗೆಅನುಕೂಲವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next