Advertisement

ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯ

02:04 PM Feb 18, 2022 | Team Udayavani |

ದಾವಣಗೆರೆ: ದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಜಾಗದಲ್ಲಿ ಕೇಸರಿ ಧ್ವಜಹಾರಿಸುತ್ತೇವೆ ಎಂಬುದಾಗಿ ದೇಶದ್ರೋಹದ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್‌ಕಾರ್ಯಕರ್ತರು ಗುರುವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಇತ್ತೀಚೆಗೆ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವ ಸಂದರ್ಭದಲ್ಲಿಸಚಿವ ಕೆ.ಎಸ್‌. ಈಶ್ವರಪ್ಪ ಅವರು ದೇಶದ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿತ್ರಿವರ್ಣ ಧ್ವಜದ ಬದಲಾಗಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವುದುಅತ್ಯಂತ ಖಂಡನೀಯ ಮತ್ತು ದೇಶದ್ರೋಹದ ಕೆಲಸ. ಕೂಡಲೇ ಅವರ ವಿರುದ್ಧದೇಶದ್ರೋಹದ ಪ್ರಕರಣ ದಾಖಲಿಸಿಕೊಳ್ಳಬೇಕು ಹಾಗೂ ಬಂಧನಕ್ಕೆ ಒಳಪಡಿಸಬೇಕು.

ಬುಧವಾರ ವಿಧಾನಸಭಾ ಕಲಾಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರುಈಶ್ವರಪ್ಪ ಅವರ ಹೇಳಿಕೆ ಖಂಡಿಸಿದಾಗ ಅತ್ಯಂತ ಉಡಾಫೆಯಾಗಿ ಮಾತನಾಡಿದ್ದಾರೆ.ಸಚಿವರಾಗಿ ಜವಾಬ್ದಾರಿಯಿಂದ ವರ್ತಿಸಿಲ್ಲ. ಡಿ.ಕೆ. ಶಿವಕುಮಾರ್‌ ವಿರುದ್ಧ ಅಸಾಂವಿಧಾನಿಕಪದಗಳನ್ನು ಬಳಸಿದ್ದಾರೆ. ಕೂಡಲೇ ಅವರು ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ನಿಖೀಲ್‌ ಕೊಂಡಜ್ಜಿ, ಮುಖಂಡರಾದಎಲ್‌.ಎಂ.ಎಚ್‌ ಸಾಗರ್‌, ರಂಜಿತ್‌, ಶಿಲ್ಪಾ, ವಾಜಿದ್‌, ಚಿರಂಜೀವಿ, ಇರ್ಫಾನ್‌,ಮೆಹಬೂಬ್‌ ಬಾಷಾ, ಕಿರಣ್‌, ನವೀನ್‌ , ಸುಹೀಲ್‌, ವಿನೋದ್‌, ಹಾಲೇಶ್‌, ಅವಿನಾಶ್‌ಮೊದಲಾದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next