Advertisement

ಕಸ ವಿಲೇವಾರಿ ಗ್ರಾಮ ಪಂಚಾಯಿತಿ ಜವಾಬ್ದಾರಿ

04:54 PM Nov 03, 2021 | Team Udayavani |

ದಾವಣಗೆರೆ: ರಾಷ್ಟ್ರೀಯ ಗ್ರಾಮೀಣಜೀವನೋಪಾಯ ಮಿಷನ್‌, ಗ್ರಾಮ ಪಂಚಾಯತಿಮಟ್ಟದಲ್ಲಿ ಸ್ವತ್ಛ ಸಂಕೀರ್ಣ ಘಟಕದ ನಿರ್ವಹಣೆ ವಹಿಸಿಕೊಂಡಿದೆ. ಕಸ ವಿಲೇವಾರಿ ಮಾಡುವುದು ಆಯಾ ಗ್ರಾಮ ಪಂಚಾಯಿತಿಗಳ ಜವಾಬ್ದಾರಿ ಎಂದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.
ಮಂಗಳವಾರ ಜಿಲ್ಲಾ ಪಂಚಾಯತ್‌ ಆವರಣದಲ್ಲಿವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕಮಾತನಾಡಿದ ಅವರು, ಕಸ ವಿಲೇವಾರಿಗಾಗಿಹೊರಗುತ್ತಿಗೆ ಆಧಾರದ ಮೇಲೆ ಅದಕ್ಕೆ ಸಿಬ್ಬಂದಿನೇಮಕ, ತರಬೇತಿ, ವೇತನ ನೀಡಲಾಗುತ್ತದೆಎಂದರು. ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ ದೃಷ್ಟಿಯಿಂದ ರಾಜ್ಯದಲ್ಲಿ ಕಸ ಸಂಗ್ರಹಣೆಗೆವಾಹನ ಖರೀದಿಸಲಾಗಿದೆ.

Advertisement

ಅದಕ್ಕೆ ಮಹಿಳಾ ಚಾಲಕರೇ ಬೇಕೆಂದು ಅಪೇಕ್ಷೆ ವ್ಯಕ್ತವಾಗಿತ್ತು. ಅದಕ್ಕೆಅವಕಾಶ ಮಾಡಿಕೊಡಲಾಗಿದೆ. ತರಬೇತಿ ಪಡೆದಮಹಿಳೆಯರು ಗ್ರಾಮ ಪಂಚಾಯತಿ ವ್ಯಾಪ್ತಿಯಎಲ್ಲ ಗ್ರಾಮಗಳಿಂದಲೂ ಕಸ ಸಂಗ್ರಹಿಸಿ ವಿಲೇವಾರಿಮಾಡಬೇಕು. ಕಸದಿಂದ ಬಂದ ಆದಾಯವನ್ನುಸಿಬ್ಬಂದಿ, ವಾಹನ ವೆಚ್ಚಕ್ಕೆ ಬಳಸಿಕೊಳ್ಳಲು ಅವಕಾಶನೀಡಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲೂಕಿನ 10, ಚನ್ನಗಿರಿ ತಾಲೂಕಿನ17, ಹರಿಹರ ತಾಲೂಕಿನ 5, ಹೊನ್ನಾಳಿ ತಾಲೂಕಿನ7, ನ್ಯಾಮತಿ ತಾಲೂಕಿನ 3, ಮತ್ತು ಜಗಳೂರುತಾಲೂಕಿನ 1 ಗ್ರಾಮ ಪಂಚಾಯತಿಗಳಲ್ಲಿ ಸುಮಾರು17 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವಒಟ್ಟು 42 ಸ್ವತ್ಛ ಸಂಕೀರ್ಣ ಘಟಕಗಳು ಉದ್ಘಾಟನೆಗೆಸಿದ್ಧವಾಗಿವೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಉಚಿತ ಸಹಾಯವಾಣಿ 18004252203 ಪ್ರಾರಂಭಿಸಲಾಗಿದೆ ಎಂದ ಸಚಿವರು, ಇದಕ್ಕೆ ಸಂಬಂಧಿಸಿದ ಪೋಸ್ಟರ್‌ ಬಿಡುಗಡೆಮಾಡಿದರು.ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕರಾದಎಸ್‌.ಎ. ರವೀಂದ್ರನಾಥ್‌, ಎಸ್‌.ವಿ. ರಾಮಚಂದ್ರ,ಪ್ರೊ| ಎನ್‌.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next