Advertisement

ಕೋವಿಡ್ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲೆಯಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ

06:51 PM Aug 03, 2021 | Team Udayavani |

ದಾವಣಗೆರೆ: ಕೋವಿಡ್-19 ಎರಡನೇ ಅಲೆ ಸಾಂಕ್ರಾಮಿಕ ರೋಗದ ಹರಡುವಿಕೆ ನಿಯಂತ್ರಿಸಲುಇಂದಿನಿಂದಲೇ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 10ಗಂಟೆಯಿಂದ ಆಗಸ್ಟ್ 16 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿ ಮಹಾಂತೇಶ ಬೀಳಗಿ ಆದೇಶಹೊರಡಿಸಿದ್ದಾರೆ.

Advertisement

ರಾತ್ರಿ ಕರ್ಫ್ಯೂ ಜಾರಿಗೊಳಿಸಿದ ಅವಧಿಯಲ್ಲಿ ಅನುಮತಿಸಿದ ಚಟುವಟಿಕೆಗೆ ಮಾತ್ರಅವಕಾಶವಿರುತ್ತದೆ. ಜುಲೈ 31ರ ಸರ್ಕಾರದಆದೇಶ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಸಂಪರ್ಕ ಆದೇಶಗಳು ಹಾಗೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳವಿಶೇಷ ಕಣ್ಗಾವಲು ಕ್ರಮಗಳಿಗೆ ಸಂಬಂಧಿಸಿದಂತೆಆದೇಶಗಳು ಮುಂದಿನ ಆದೇಶದವರೆಗೆಜಾರಿಯಲ್ಲಿರುತ್ತವೆ.

ಅದೇ ರೀತಿ ಕೋವಿಡ್-19 ಸಂಭಾವ್ಯ ಮೂರನೇಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ ತಕ್ಷಣದಿಂದಜಾರಿಗೆ ಬರುವಂತೆ  ಆ. 31ವರೆಗೆ ಅಥವಾಮುಂದಿನ ಆದೇಶದವರೆಗೆ ಜಿಲ್ಲೆಯ ಎಲ್ಲಮುಂಜರಾಯಿ ದೇವಾಲಯಗಳು ಮತ್ತು ಖಾಸಗಿದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಮಾತ್ರಅವಕಾಶ ಕಲ್ಪಿಸಿಕೊಡಲಾಗಿದ್ದು, ಶನಿವಾರ ಮತ್ತುಭಾನುವಾರಗಳಂದು ಭಕ್ತಾದಿಗಳ ದೇಗುಲಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಽಸಿಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 1674 ಪಾಸಿಟಿವ್ ಪ್ರಕರಣ ಪತ್ತೆ; 38 ಜನರು ಸಾವು

Advertisement

Udayavani is now on Telegram. Click here to join our channel and stay updated with the latest news.

Next