Advertisement
ಜಿಲ್ಲಾಡಳಿತ, ಜಿಪಂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮತ್ತು ದಾವಣಗೆರೆ ತಾಲೂಕು ಮಟ್ಟದ ಪೋಷಣ್ ಅಭಿಯಾನ್ ಜನಾಂದೋಲನ ಹಾಗೂ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಗರ್ಭಿಣಿಯರ ದೈಹಿಕ ಆರೋಗ್ಯದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸುತ್ತಿದ್ದು, ಮಾನಸಿಕ ಆರೋಗ್ಯದ ಕಡೆಗೂ ಅತಿ ಹೆಚ್ಚಿನ ಗಮನ ಕೊಡಬೇಕಿದೆ ಎಂದರು.
Related Articles
Advertisement
ಅಂಗನವಾಡಿ ಕಾರ್ಯಕರ್ತೆಯರ ಕೆಲಸ ಒಂದು ಸೇವೆ ಇದ್ದಂತೆ. ಅದನ್ನು ಉತ್ತಮವಾಗಿ ನಿರ್ವಹಿಸಬೇಕಿದೆ. ಗರ್ಭಿಣಿಯರು ಯಾವುದೇ ಹಿಂಜರಿಕೆ ಇಲ್ಲದೇ ಅಂಗನವಾಡಿಗೆ ಭೇಟಿ ನೀಡಿ ಪೌಷ್ಟಿಕ ಆಹಾರ, ಇತ್ಯಾದಿ ಸೌಲಭ್ಯ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಇದೊಂದು ಅದ್ಭುತ ಕಾರ್ಯಕ್ರಮವಾಗಿದ್ದು, ಸರ್ಕಾರ ಸದುದ್ದೇಶದಿಂದ ಈ ಅಭಿಯಾನ ಆರಂಭಿಸಿದ್ದು, ಇದು ಮುಂದಿನ ಪೀಳಿಗೆ ಸದೃಢಗೊಳ್ಳಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಎ.ರವೀಂದ್ರನಾಥ್ ಮಾತನಾಡಿ, ಹಿಂದೆಲ್ಲ ಗರ್ಭಿಣಿಯರು ಸೇರಿದಂತೆ ಎಲ್ಲ ಹೆಣ್ಣುಮಕ್ಕಳು ಬೀಸುವುದು, ಕುಟ್ಟುವುದು, ನೀರು ಸೇದುವುದು ಹೀಗೆ ಮನೆಯ ದೈನಂದಿನ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಇಂದು ಸೋಮಾರಿತನ ಹೆಚ್ಚಾಗಿದ್ದು, ಗರ್ಭಿಣಿಯರು ಚಟುವಟಿಕೆಯಿಲ್ಲದೇ ಆಸ್ಪತ್ರೆಯಲ್ಲಿ ಹೆರಿಗೆಯಾಗುತ್ತಿವೆ. ಪೌಷ್ಟಿಕತೆ ಕೊರತೆಯೂ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಪೋಷಣ್ ಅಭಿಯಾನ್ ಎಂಬ ಅತ್ಯುತ್ತಮ ಕಾರ್ಯಕ್ರಮ ಜಾರಿಗೆ ತಂದಿದ್ದು, ಅಂಗನವಾಡಿ ಕಾರ್ಯಕರ್ತೆಯರು ಈ ಯೋಜನೆ ಸೌಲಭ್ಯವನ್ನು ಪ್ರಾಮಾಣಿಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕಿದೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್.ವಿಜಯಕುಮಾರ್, ಕೇಂದ್ರ ಸರ್ಕಾರದ ಪೋಷಣ್ ಅಭಿಯಾನದ ಉದ್ದೇಶ ಗರ್ಭಿಣಿಯರು ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ, ಕಾಲಕಾಲಕ್ಕೆ ಚುಚ್ಚುಮದ್ದು ಸೇರಿದಂತೆ ಉತ್ತಮ ಆರೋಗ್ಯ ಕಲ್ಪಿಸುವುದು. 2017ರ ಮೇ ಮಾಹೆಯಲ್ಲಿ ಈ ಯೋಜನೆ ಜಾರಿಗೆ ಬಂದಿದ್ದು, ಈ ಅಭಿಯಾನದ ಅಂಗವಾಗಿ ಸೆ.1 ರಿಂದ ಒಂದು ತಿಂಗಳ ಕಾಲ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಅಂಗನವಾಡಿಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಗರ್ಭಿಣಿಯರು, ಪಾಲಕರಿಗೆ ಈ ಕುರಿತು ಅರಿವು ಮೂಡಿಸಲಾಗುವುದು. ಪ್ರತಿ ತಿಂಗಳು ಮೊದಲನೇ ಮತ್ತು ಮೂರನೇ ಶುಕ್ರವಾರ ನಿರಂತರ ಪೋಷಣ್ ಕಾರ್ಯಕ್ರಮ ನಡೆಯುತ್ತದೆ. ಪ್ರತಿ ಒಂದು ಕಾರ್ಯಕ್ರಮಕ್ಕೆ ಫಲಾನುಭವಿಗಳ ಖಾತೆಗೆ ನೇರವಾಗಿ 250 ರೂ. ಪಾವತಿಸಲಾಗುವುದು ಎಂದು ತಿಳಿಸಿದರು.
100 ಗರ್ಭಿಣಿಯರಿಗೆ ಹಾಗೂ 6 ತಿಂಗಳು ತುಂಬಿದ 50 ಮಕ್ಕಳಿಗೆ ಪೂರಕ ಆಹಾರ (ಅನ್ನಪ್ರಾಶನ) ನೀಡಲಾಯಿತು. ಇದೇ ಸಂದರ್ಭದಲ್ಲಿ ಪೋಷಣ್ ಅಭಿಯಾನ ಕುರಿತಾದ ಮಾಹಿತಿ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಜಿ.ಪಂ ಸದಸ್ಯೆ ಮಂಜುಳಾ ಟಿ.ವಿ. ರಾಜು, ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಮಾತನಾಡಿದರು. ತಾ.ಪಂ ಸದಸ್ಯೆ ಅಂಬುಜಾಕ್ಷಿ, ಡಿಎಚ್ಒ ಡಾ|ರಾಘವೇಂದ್ರಸ್ವಾಮಿ ಇದ್ದರು.