Advertisement

ದಾವಣಗೆರೆ: ಸಂಚಾರದ ಒತ್ತಡದಲ್ಲಿ ಸಿಲುಕಿದ ರಾಹುಲ್ ಗಾಂಧಿ

02:21 PM Aug 03, 2022 | Team Udayavani |

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಧ್ಯಾಹ್ನ 2.30ರ ಒಳಗಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೆಂಗಳೂರಿಗೆ ವಾಪಾಸ್ಸಾಗಿ, ದೆಹಲಿಗೆ ತೆರಳಬೇಕಾಗಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೂಡ ಸಂಚಾರದ ಒತ್ತಡದಲ್ಲಿ ಸಿಲುಕಿದ್ದಾರೆ.

Advertisement

ಕೇವಲ ರಾಹುಲ್ ಗಾಂಧಿ ಮಾತ್ರವಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಕೂಡ ಟ್ರಾಫಿಕ್‍ ಜಾಮ್ ನಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮದ ಸ್ಥಳದಿಂದ ಸುಮಾರು 20 ಕಿ.ಮೀ. ದೂರದಲ್ಲಿ ವಾಹನಗಳ ಸಂಚಾರದ ಒತ್ತಡದಿಂದಾಗಿ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿದ್ದರು, ಕೈ ನಾಯಕರೂ ಸಹ ಟ್ರಾಫಿಕ್ ಜಾಮ್ ಬಿಸಿ ಅನುಭವಿಸಿದ್ದಾರೆ.

ಕಾರ್ಯಕ್ರಮದ ಸ್ಥಳಕ್ಕೆ ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಆಗಮಿಸಿದ ರಾಹುಲ್ ಗಾಂಧಿ ಇತರರು ದಾವಣಗೆರೆಗಿಂತ ಮುಂಚೆಯೇ ಇರುವ ಆವರಗೆರೆಯ ರಾಷ್ಟ್ರೀಯ ಹೆದ್ದಾರಿಯಿಂದಲೂ ಟ್ರಾಫಿಕ್ ಜಾಮ್ ಆಗಿದೆ. ಕೇವಲ ವಾಹನಗಳು ಮಾತ್ರವಲ್ಲದೇ ಸಮಾರಂಭಕ್ಕೆ ಜನರು ರಸ್ತೆ ಮೂಲಕವೇ ಸಾಗುತ್ತಿರುವ ಕಾರಣ ಭದ್ರತೆ, ಝೀರೋ ಟ್ರಾಫಿಕ್‍ನಲ್ಲಿ ಸಾಗಬೇಕಾಗಿದ್ದ ಕೈ ವರಿಷ್ಠರು ಟ್ರಾಫಿಕ್‍ನಲ್ಲಿ ಸಿಲುಕಿದ್ದಾರೆ.

ಕಾರಣ ಅವರು ಕಾರ್ಯಕ್ರಮಕ್ಕೆ ಬರುವುದು ತಡವಾಗಲಿದೆ. ಅಲ್ಲದೇ ಕಾರ್ಯಕ್ರಮ ಮುಗಿಸಿಕೊಂಡು ಹೋಗುವುದು ನಿಗಧಿತ ಅವಧಿಯಲ್ಲಿ ನವದೆಹಲಿಗೆ ತೆರಳುವುದು ಅಸಾಧ್ಯ ಎನ್ನಲಾಗುತ್ತಿದೆ. ಈ ಮಧ್ಯೆ ದಾವಣಗೆರೆಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯವರನ್ನು ಬೇರೊಂದು ಮಾರ್ಗದ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಕರೆತರಲು ಪ್ರಯತ್ನ ಮಾಡುತ್ತಿದ್ದಾರೆ.

ಪೊಲೀಸರ ಹರಸಾಹಸ
ರಾಹುಲ್ ಗಾಂಧಿ ಅವರು ಸಂಚಾರದ ಒತ್ತಡದಿಂದಾಗಿ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದರೂ ಸಹ ವೇದಿಕೆ ಬಳಿ ಸಾಗಲು ಹರಸಾಹಸ ಪಡಬೇಕಾಯಿತು. ಪೊಲೀಸರು ದಾರಿ ಮಾಡಿಕೊಡಲು ಪ್ರಯತ್ನ ನಡೆಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next