ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಬೆಂಗಳೂರಿನಿಂದ ಸಿಂಧಗಿಗೆ ತೆರಳುತ್ತಿದ್ದ ಖಾಸಗಿ ದೊಣ್ಣೆಹಳ್ಳಿ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾಗಿದೆ. ಘಟನೆಯಲ್ಲಿ ಇಪ್ಪತ್ತು ಮಂದಿ ಗಾಯಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ ಗಾಯಗೊಂಡವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ, ಗಾಯಾಳುಗಳನ್ನು ಜಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿ , ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಕುಷ್ಟಗಿ: ತ್ರಿವರ್ಣ ಧ್ವಜಾ ಇರುವ ಕಂಬದ ಮೇಲೆ ಭಗವಧ್ವಜಾ; ಬಿಜೆಪಿ ವಿರುದ್ಧ ಕೈ ಆಕ್ರೋಶ