Advertisement

ದಾವಣಗೆರೆ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಅಪರಾಧಿಗೆ 30 ವರ್ಷ ಜೈಲು

09:49 PM Apr 21, 2023 | Team Udayavani |

ದಾವಣಗೆರೆ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ದಾವಣಗೆರೆ ಜಿಲ್ಲಾ ಮಕ್ಕಳ ಸ್ನೇಹಿ ಮತ್ತು ಎಫ್.ಟಿ.ಎಸ್.ಸಿ. ನ್ಯಾಯಾಲಯ 30 ವರ್ಷ ಜೈಲು, 70 ಸಾವಿರ ರೂಪಾಯಿ ದಂಡ ವಿಧಿಸಿದೆ.

Advertisement

ಹರಿಹರದ ತಿಪ್ಪೇಶಿ ಶಿಕ್ಷೆಗೆ ಗುರಿಯಾದವನು. 2019 ರ ಎ.19 ರಂದು ಹರಿಹರದಲ್ಲಿ ಮನೆ ಕಟ್ಟಿಸುತ್ತಿದ್ದ ಸಂದರ್ಭದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಗೆ ಪುಸಲಾಯಿಸಿ  ಅತ್ಯಾಚಾರವೆಸಗಿದ್ದನು. ಅತ್ಯಾಚಾರದಿಂದ ಆಘಾತಗೊಂಡು ಅಳುತ್ತಿದ್ದ ಬಾಲಕಿಗೆ ಬೆದರಿಕೆ ಹಾಕಿದ್ದನು.ಅಪ್ರಾಪ್ತೆಯ ಪೋಷಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಹರಿಹರ ನಗರ ಪೊಲೀಸರು ಆರೋಪಿಯನ್ನ ಬಂಧಿಸಿದ್ದರು. ಆಗಿನ ತನಿಖಾಧಿಕಾರಿ ಎಂ.ಕೆ. ಗಂಗಲ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮಕ್ಕಳ ಸ್ನೇಹಿ ಮತ್ತು ಎಫ್.ಟಿ.ಎಸ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಎನ್. ಶ್ರೀಪಾದ್ ಆರೋಪಿಗೆ 30ವರ್ಷ ಜೈಲು ಶಿಕ್ಷೆ ಹಾಗೂ 70ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಅಲ್ಲದೆ ಸಂತ್ರಸ್ಥೆಗೆ 6.50ಲಕ್ಷ ರೂ.ಪರಿಹಾರ ನೀಡಲು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಕೆ.ಜಿ. ಜಯಪ್ಪ ಸರ್ಕಾರದ ಪರ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next