ದಾವಣಗೆರೆ : ರಾಜ್ಯ ಸರ್ಕಾರ ನೀಡಿರುವ ಷರತ್ತುಬದ್ಧ ಅನುಮತಿಯಂತೆ ಸಾರ್ವಜನಿಕವಾಗಿ ಮತ್ತು ಮನೆಗಳಲ್ಲಿ ಗಣೇಶೋತ್ಸವ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದರು. ಸೋಮವಾರ ಗ ಣೇಶೋತ್ಸವ ಆಚರಣೆ ಸಂಬಂಧ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿವಿಧ ಇಲಾಖೆಗ ಳಿಂದ ಪಡೆಯಲಾಗುವ ಅನುಮತಿಯನ್ನು ಒಂದೇ ಕಡೆ ನೀಡಲು ಏಕ ಗವಾಕ್ಷಿ ವ್ಯವಸ್ಥೆ ಮಾಡಲಾಗುವುದು ಎಂದರು.
ಗಣೇಶೋತ್ಸವ ಭಾವನಾತ್ಮಕ ಸಂಬಂಧ , ಸುದೀರ್ಘ ಪರಂಪರೆ, ಭಾವೈಕ್ಯತೆ ಸಾರುವ ಉದ್ದೇಶ ಹೊಂದಿದೆ. ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕಾಗಿದ್ದ ಗ ಣೇಶೋತ್ಸವವನ್ನು ಮಹಾಮಾರಿ ಕೊರೊನಾ ಹರಡುವಿಕೆ ಭೀತಿಯಿಂದ, ಷರತ್ತು ಬದ್ಧವಾಗಿ ಸರಳ ರೀತಿಯಲ್ಲಿ ಆಚರಿಸಲೇಬೇಕಾದ ಅನಿವಾರ್ಯತೆ ಒದಗಿದೆ. ಹಾಗಾಗಿ ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವ ಗಣೇಶಮೂರ್ತಿಯನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಸಂಖ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಬೇಕು.
ಇದನ್ನೂ ಓದಿ : ಆಸೆಗಣ್ಣಿನ ಗೊಂಬೆ ಟು ‘ಹುಣ್ಸ್ ಮಕ್ಕಿ ಹುಳ’ : ಬೆಂದ ಬದುಕಿನ ಸ್ಫೂರ್ತಿದಾಯಕ ನಡೆ
2-3 ವಾರ್ಡ್‌ನವರು ಸೇರಿ ಒಂದೆಡೆ ಪ್ರತಿಷ್ಠಾಪಿಸಿ ಆಚರಿಸುವುದು ಸೂಕ್ತ ಎಂದು ಸಲಹೆ ನೀಡಿದರು. ಸರ್ಕಾರದ ಸೂಚನೆಯಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣೇಶಮೂರ್ತಿ 4 ಅಡಿ, ಮನೆಯೊಳಗೆ ಕೂರಿಸುವ ಮೂರ್ತಿ 2 ಅಡಿ ಮೀರುವಂತಿಲ್ಲ. ಸಾರ್ವಜನಿಕವಾಗಿ ಗ ಣೇಶಮೂರ್ತಿ ಪ್ರತಿಷ್ಠಾಪಿಸಿ ಆಚರಣೆ ಮಾಡುವ ಆಯೋಜಕರು ಕೋವಿಡ್- 19ರ ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಮತ್ತು ಕನಿಷ್ಟ 1 ಡೋಸ್ ಲಸಿಕೆ ಪಡೆದಿದ್ದರು ಬಗ್ಗೆ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದೆ. ಗಣೇಶೋತ್ಸವ ವನ್ನು 5 ದಿನಕ್ಕಿಂತ ಹೆಚ್ಚು ಆಚರಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
ದರ್ಶನಕ್ಕೆ ಬರುವಂತಹವರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಒಂದು ವೇಳೆ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶಮೂರ್ತಿವಿಸರ್ಜನೆಗೆಒಟ್ಟು30ಕಡೆಗಳಲ್ಲಿಸ್ಥಳ ಗುರುತಿಸಲಾಗಿದೆ. ಶಿರಮಗೊಂಡನಹಳ್ಳಿ, ಬಾತಿಕೆರೆ ಬಳಿಯೂ ಕೃತಕ ಟ್ಯಾಂಕ್ ನಿರ್ಮಿಸಿ ಗಣೇಶಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದರು. ಸಾರ್ವಜನಿಕರು ನಿಗದಿತಳಗಳಲ್ಲೇ ಗಣೇಶಮೂರ್ತಿ ವಿಸರ್ಜಿಸಬೇಕು. ಗಣೇಶಮೂರ್ತಿ ವಿಸರ್ಜನೆ ಸ §ಳಗಳಲ್ಲಿ ಸಮರ್ಪಕವಾಗಿ ವಿದ್ಯುತ್ ದೀಪದ ವ್ಯವಸೆ § ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ Òಕ ಎಂ. ರಾಜೀವ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಇತರರು ಇದ್ದರು.
ಇದನ್ನೂ ಓದಿ : ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಡಿಜಿಟಲೈಸ್ಡ್ ವ್ಯವಸ್ಥೆ ಜಾರಿ: ಸಚಿವ ಮಾಧುಸ್ವಾಮಿ