Advertisement

ಜುಲೈನಲ್ಲಿ ನಡೆಯುತ್ತೆ ದಾವಿವಿ ಪದವಿ ಪರೀಕ್ಷೆ

05:48 AM May 14, 2020 | Suhan S |

ದಾವಣಗೆರೆ: ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಮಾರ್ಗಸೂಚಿ- ಸಲಹೆ ಆಧರಿಸಿ ಜುಲೈನಲ್ಲಿ ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಸಲು ದಾವಣಗೆರೆ ವಿಶ್ವವಿದ್ಯಾಲಯ ಸಿದ್ಧತೆ ಮಾಡಿಕೊಂಡಿದೆ ಎಂದು ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.

Advertisement

ದಾವಣಗೆರೆ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಅಧ್ಯಕ್ಷರು, ಸಂಯೋಜನಾ ಧಿಕಾರಿಗಳು, ಸಿಂಡಿಕೇಟ್‌ ಮತ್ತು ಅಕಾಡೆಮಿಕ್‌ ಕೌನ್ಸಿಲ್‌ ಸದಸ್ಯರ ಜೊತೆ ವಿಡಿಯೋ ಕಾನ್ಫೆರೆನ್ಸ್‌ ನಡೆಸಿ ಮಾತನಾಡಿದ ಅವರು, ಜೂನ್‌ ತಿಂಗಳಲ್ಲಿ ಮೂರು ವಾರ ರಜಾರಹಿತ ನಿರಂತರ ತರಗತಿ ನಡೆಸಿ ಬಾಕಿ ಇರುವ ಪಠ್ಯಕ್ರಮ ಪೂರ್ಣಗೊಳಿಸಿ, ಪಾಠದ ಪುನರಾವಲೋಕನ ಮಾಡಲಾಗುವುದು. ಇದೇ ಅವ ಧಿಯಲ್ಲಿ ಪ್ರಾಯೋಗಿಕ ತರಬೇತಿ, ಕಿರು ಸಂಶೋಧನಾ ವರದಿ, ಪ್ರಾಜೆಕ್ಟ್, ಆಂತರಿಕ ಪರೀಕ್ಷೆ, ಪ್ರಾಯೋಗಿಕ ಅಧ್ಯಯನ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಒಂದು ವಾರ ಪರೀಕ್ಷಾ ಸಿದ್ಧತೆಗೆ ಅವಕಾಶ ನೀಡಿ ಜುಲೈನಲ್ಲಿ ಪರೀಕ್ಷೆ ನಡೆಸಲಾಗುವುದು ಎಂದರು.

ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮೊದಲು ಪರೀಕ್ಷೆ ನಡೆಸಿ ಶೀಘ್ರ ಫಲಿತಾಂಶ ಪ್ರಕಟಿಸಲಾಗುವುದು. ಇದೇ ಸಂದರ್ಭದಲ್ಲಿ ಹಿಂಬಾಕಿ (ಬ್ಯಾಕ್‌ಲಾಗ್‌) ವಿಷಯಗಳ ಪರೀಕ್ಷೆಯನ್ನೂ ನಡೆಸಲಾಗುವುದು. ಜುಲೈ ಅಂತ್ಯದೊಳಗೆ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು ವಿವರಿಸಿದರು. ಎಂಬಿಎ, ಬಿಇಡಿ, ಬಿಪಿಇಡಿ, ಎಂಇಡಿ ಮತ್ತು ಎಂಪಿಇಡಿ ಪದವಿಗಳ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 4ರಿಂದ 6 ವಾರಗಳ ಕಾಲ ಪಾಠ ಪ್ರವಚನ, ಪ್ರಾಯೋಗಿಕತರಗತಿ, ಆಂತರಿಕೆಪರೀಕ್ಷೆ, ಬೋಧನಾ ಶಿಕ್ಷಣಕ್ಕೆ ಒತ್ತು ನೀಡಲಾಗುವುದು. ವಿದ್ಯಾರ್ಥಿಗಳಎಲ್ಲಗೊಂದಲ, ಆತಂಕ ನಿವಾರಿಸಿ ಆತ್ಮವಿಶ್ವಾಸ ಮೂಡಿಸುವ ಮತ್ತು ಅವರಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಸಕಾರಾತ್ಮಕ ವಾತಾವರಣ ನಿರ್ಮಿಸಲಾಗುವುದು. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯದ ಎಲ್ಲ ಪ್ರಾಧ್ಯಾಪಕರು ವಿದ್ಯಾರ್ಥಿ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸುವರು ಎಂದು ಭರವಸೆ ನೀಡಿದರು.

ಸ್ನಾತಕ ಪದವಿಯ 3 ಮತ್ತು 5ನೇ ಸೆಮಿಸ್ಟರ್‌ ಹಾಗೂ ಸ್ನಾತಕೋತ್ತರ ಪದವಿಯ 3ನೇ ಸೆಮಿಸ್ಟರ್‌ಗೆ ಆಗಸ್ಟ್‌ 1ರಿಂದ ಹಾಗೂ ಒಂದನೇ ಸೆಮಿಸ್ಟರ್‌ಗೆ ಹೊಸದಾಗಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್‌ 1ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಮುಂದಿನ ಆದೇಶದವರೆಗೆಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಲಾಕ್‌ಡೌನ್‌ಗಿಂತ ಮುಂಚೆ ಪದವಿ ಕಾಲೇಜಿನಲ್ಲಿ ಶೇ. 75 ರಿಂದ 80 ರಷ್ಟು ಪಠ್ಯಕ್ರಮ ಮುಗಿದಿತ್ತು. ಸ್ನಾತಕೋತ್ತರ ಪದವಿಯಲ್ಲಿ ಶೇ.55 ರಿಂದ 65 ರಷ್ಟು ಪಠ್ಯಕ್ರಮ ಲಾಕ್‌ಡೌನ್‌ಗಿಂತ ಮುನ್ನ ಮುಗಿದಿತ್ತು. ಈಗ ಶೇ 85ರಿಂದ 90 ಪಠ್ಯಕ್ರಮ ಮುಗಿದಿದ್ದು, ಉಳಿದದ್ದನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು. ಅದಾಗ್ಯೂ ತಾಂತ್ರಿಕ ಕಾರಣದಿಂದ ಪಾಠಕ್ಕೆ ಹಾಜರಾಗಲು ಸಾಧ್ಯವಾಗದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಪುನರಾವರ್ತನೆ ಮಾಡಲಾಗುವುದು ಎಂದರು.

Advertisement

ದೈನಂದಿನ ತರಗತಿ ಹಾಗೂ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ ಕಾಪಾಡಲು ಆದ್ಯತೆ ನೀಡಲಾಗುವುದು. ಸ್ಯಾನಿಟೈಸರ್‌ಬಳಕೆ, ಮಾಸ್ಕ್ ಧಾರಣೆ ಕಡ್ಡಾಯ ಮಾಡಲಾಗಿದೆ. ಪ್ರತಿ ವಿದ್ಯಾರ್ಥಿ ಮತ್ತು ಬೋಧಕ ಸಿಬ್ಬಂದಿಯ ಆರೋಗ್ಯ ತಪಾಸಣೆ

ನಂತರವೇ ವಿಶ್ವವಿದ್ಯಾಲಯದ ಆವರಣದ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಕೋವಿಡ್ ವೈರಾಣು ಸೋಂಕು ನಿಯಂತ್ರಣಕ್ಕೆ ಬರುವವರೆಗೆ ಪೂರ್ಣ ಪ್ರಮಾಣದಲ್ಲಿ ಹಾಸ್ಟೆಲ್‌ ಗಳಲ್ಲಿ ವಿದ್ಯಾರ್ಥಿಗಳ ವಾಸಕ್ಕೆ ಅವಕಾಶ ನೀಡುವುದಿಲ್ಲ. ಕಾಲೇಜು ವಿದ್ಯಾರ್ಥಿಗಳ ವಸತಿ ವ್ಯವಸ್ಥೆಯ ನಿರ್ವಹಣೆಯನು °ಆಯಾ ಕಾಲೇಜಿನ ಪ್ರಾಚಾರ್ಯರೇ ನಿಭಾಯಿಸಲಿದ್ದಾರೆ ಎಂದು ಕುಲಪತಿ ತಿಳಿಸಿದರು.

ವಿಡಿಯೋ ಕಾನ್ಫೆರೆನ್ಸ್‌ ನಲ್ಲಿ ಕುಲಸಚಿವ ಪ್ರೊ| ಬಸವರಾಜ ಬಣಕಾರ, ಪರೀಕ್ಷಾಂಗ ಕುಲಸಚಿವೆ ಪ್ರೊ| ಎಚ್‌.ಎಸ್‌. ಅನಿತಾ, ಹಣಕಾಸು ಅಧಿಕಾರಿ ಪ್ರೊ| ಗೋಪಾಲ ಎಂ. ಅಡವಿರಾವ್‌ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next