Advertisement

ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಮುಂದಾಗಲಿ

11:54 AM May 02, 2020 | Naveen |

ದಾವಣಗೆರೆ: ಕಾರ್ಮಿಕರು ಒಳಗೊಂಡಂತೆ ಪ್ರತಿಯೊಬ್ಬರು ಕೋವಿಡ್ ವೈರಸ್‌ ಮಹಾಮಾರಿ ವಿರುದ್ಧ ಹೋರಾಟ ನಡೆಸಬೇಕಿದೆ ಎಂದು ಹಿರಿಯ ಕಾರ್ಮಿಕ ಮುಖಂಡ ಎಚ್‌.ಕೆ. ರಾಮಚಂದ್ರಪ್ಪ ಮನವಿ ಮಾಡಿದ್ದಾರೆ.

Advertisement

ಶುಕ್ರವಾರ ಜಿಲ್ಲಾ ಸಿಪಿಐ ಕಚೇರಿಯಲ್ಲಿ ನಡೆದ ಕಾರ್ಮಿಕ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೋವಿಡ್ ವೈರಸ್‌ ನಮ್ಮ ದೇಶ ಮಾತ್ರವಲ್ಲ ಇಡೀ ಜಗತ್ತಿನಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಮಾನವಕುಲವನ್ನೇ ತಲ್ಲಣ, ತಬ್ಬಿಬ್ಬುಗೊಳಿಸುತ್ತಿರುವ ಕೋವಿಡ್ ವಿರುದ್ಧ ಪ್ರತಿಯೊಬ್ಬರೂ ಹೋರಾಟ ಮಾಡಬೇಕು ಎಂದರು.

ದೇಶದ ಸಮಗ್ರ ಅಭಿವೃದ್ಧಿಗಾಗಿ ಹಗಲಿರುಳು ಎನ್ನದೆ ಶ್ರಮಿಸುತ್ತಿರುವ ಪೌರಕಾರ್ಮಿಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಕ್ಷೌರಿಕರು, ಹಮಾಲರು ಒಳಗೊಂಡಂತೆ ಅನೇಕ ಅಸಂಘಟಿತ ವಲಯದವರಿಗೆ ಕೇಂದ್ರ ಸರ್ಕಾರ ಸಂವಿಧಾನಬದ್ಧ ಹಕ್ಕುಗಳನ್ನೇ ನೀಡಿಲ್ಲ ಎಂದು ದೂರಿದರು. ಕೇಂದ್ರ ಸರ್ಕಾರ ರೈತರು, ಕಾರ್ಮಿಕರು, ಸಣ್ಣ ಕೈಗಾರಿಕೆಯವರು, ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಹಾಗೂ ಉದ್ಯಮಗಳಿಗೆ 68,607 ಕೋಟಿ ಹಣ ನೀಡಬೇಕಿತ್ತು. ಆದರೆ ಆ ಹಣವನ್ನು ಇದುವರೆಗೆ ನೀಡಿಲ್ಲ. ಬ್ಯಾಂಕ್‌ಗಳಲ್ಲಿ ಸಾವಿರಾರು ಕೋಟಿ ಸಾಲ ತೆಗೆದುಕೊಂಡು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವರ ಸಾಲ ಮನ್ನಾ ಮಾಡಿರುವು ದು ಅತ್ಯಂತ ಖಂಡನೀಯ. ಕೇಂದ್ರ ಸರ್ಕಾರದ ಈ ಕ್ರಮ ಜನಸಾಮಾನ್ಯರಿಗೆ ವಿರುದ್ಧವಾದುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕರು, ರೈತರು, ದುಡಿಯುವ, ಶ್ರಮಿಕ ವರ್ಗದ ಎಲ್ಲರೂ ಒಂದಾಗಿ ಒಡೆದು ಆಳುವ ನೀತಿ ಅನುಸರಿಸುವರನ್ನ ಬುಡ ಸಮೇತ ಕಿತ್ತೂಗೆದು ಸಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಖಜಾಂಚಿ ಆನಂದರಾಜ್‌ ಅಧ್ಯಕ್ಷತೆ ವಹಿಸಿದ್ದರು. ಆವರಗೆರೆ ಉಮೇಶ್‌, ಆವರಗೆರೆ ಚಂದ್ರು, ಆವರಗೆರೆ ವಾಸು, ಎಂ.ಬಿ. ಶಾರದಮ್ಮ, ಸರೋಜಮ್ಮ, ಟಿ.ಎಸ್‌. ನಾಗರಾಜ್‌ ಇತರರು ಮೊದಲಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next