ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆ ಗುರುವಾರ ಕೋವಿಡ್‌ಘಾತಕ್ಕೆ ಒಳಗಾಗಿದೆ. ಒಂದೇ ದಿನ 40 ಪಾಸಿಟಿವ್ ಪ್ರಕರಣ ವರದಿಯಾಗಿವೆ.
15 ಕ್ಕೂ ಹೆಚ್ಚು ಪ್ರಕರಣಗಳಲ್ಲಿನ ಸೋಂಕಿನ ಮೂಲ ಗೊತ್ತಾಗಿಲ್ಲ. ಜಿಲ್ಲಾಡಳಿತ ಸೋಂಕಿನ ಮೂಲ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದೆ.
ಮೇ.3 ರಂದು ಒಂದೇ ದಿನ 21 ಪಾಸಿಟಿವ್ ಪ್ರಕರಣ ಪತ್ತೆಯಾದ ನಂತರ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲಿ ಸಹ ಸೋಂಕು ಕಾಣಿಸಿಕೊಂಡಿದೆ.
ಗುರುವಾರ ಕೋವಿಡ್‌ದಿಂದ ಒಂದು ಸಾವು ಸಂಭವಿಸಿದೆ. ಈವರೆಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 14ಕ್ಕೇರಿದೆ. ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 423 ಪ್ರಕರಣಗಳಲ್ಲಿ ಈವರೆಗೆ 328 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 81 ಸಕ್ರಿಯ ಪ್ರಕರಣಗಳಿವೆ.