Advertisement

ಕೆಲಸ ಮಾಡಲ್ಲವೆಂದ ವೈದ್ಯಕೀಯ ವಿದ್ಯಾರ್ಥಿಗಳು

11:25 AM Apr 26, 2020 | Naveen |

ದಾವಣಗೆರೆ: ಕೋವಿಡ್ ವೈರಸ್‌ ಸೋಂಕು ಚಿಕಿತ್ಸೆಗಾಗಿ ಕೋವಿಡ್‌ ಆಸ್ಪತ್ರೆಯನ್ನಾಗಿ ಮಾರ್ಪಾಡಿಸಿರುವ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ತಮಗೆ ಸೂಕ್ತ ಪರಿಕರ ಒದಗಿಸುತ್ತಿಲ್ಲ ಎಂಬ ಕಾರಣದಿಂದ ಸ್ಮಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಕೆಲಸ ಮಾಡಲಾಗುವುದಿಲ್ಲ ಎಂದಿದ್ದಾರೆ.

Advertisement

ಕೋವಿಡ್ ವೈರಸ್‌ ಸೋಂಕು ಹರಡುವಿಕೆ ನಿಯಂತ್ರಣ ಹಾಗು ಚಿಕಿತ್ಸೆ ಹಿನ್ನೆಲೆಯಲ್ಲಿ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್‌ ವಾರ್ಡ್‌ ಪ್ರಾರಂಭಿಸಲಾಗಿದ್ದು, ಈ ವಿಭಾಗದಲ್ಲಿ ಕೆಲಸ ಮಾಡುವ ನಮಗೆ ನಮಗೆ ವೈಯಕ್ತಿಕ ರಕ್ಷಣಾ ಪರಿಕರ (ಪಿಪಿಇ)ಕಿಟ್‌ ನೀಡುತ್ತಿಲ್ಲ. ಅಲ್ಲದೆ, ಆಸ್ಪತ್ರೆಯ ಪ್ಲ್ಯೂ ಕಾರ್ನರ್‌ನಲ್ಲಿ ಜಿಲ್ಲಾ ಆಸ್ಪತ್ರೆಯ ಯಾವುದೇ ವೈದ್ಯರು ಸೇವೆ ಸಲ್ಲಿಸುತ್ತಿಲ್ಲ. ದುರಾದೃಷ್ಟವಶಾತ್‌ ಎಲ್ಲಾ ಕೆಲಸವನ್ನೂ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳೇ ಮಾಡಬೇಕು. ಹಾಗಾಗಿ ಪ್ಲ್ಯೂ ಕಾರ್ನರ್‌ನಲ್ಲಿ ಕೆಲಸ ಮಾಡುವುದಿಲ್ಲ ಎಂಬುದಾಗಿ ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಇ-ಮೇಲ್‌ ಮೂಲಕ ಸಂದೇಶ ರವಾನಿಸಲಾಗಿದೆ.

ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ನಗರದ ಜೆಜೆಎಂ ಮೆಡಿಕಲ್‌ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳು, ಹೌಸ್‌ ಸರ್ಜನ್‌ ಸೇರಿ 160 ಮಂದಿ ಕ್ಲಿನಿಕಲ್‌ ಸೌಲಭ್ಯ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಅವರು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಈಗ ಜಿಲ್ಲಾಸ್ಪತ್ರೆಯನ್ನೇ ಕೋವಿಡ್‌ ಆಸ್ಪತ್ರೆಯನ್ನಾಗಿಸಿರುವುದರಿಂದ ವೈದ್ಯಕೀಯ ಪಿಜಿ ವಿದ್ಯಾರ್ಥಿಗಳು ಆ ವಿಭಾಗದಲ್ಲೂ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಆದರೆ ವೈಯಕ್ತಿಕ ರಕ್ಷಣಾ ಪರಿಕರ ಒದಗಿಸದ ಕಾರಣಕ್ಕಿಂತ ಕೋವಿಡ್‌-19 ಆತಂಕವೇ ಕೆಲವು ಪಿಜಿ ವಿದ್ಯಾರ್ಥಿಗಳು ಕೆಲಸ ಮಾಡಲು ಹಿಂಜರಿಕೆ ಇರಬಹುದು ಎನ್ನಲಾಗಿದೆ.

ಚಿಗಟೇರಿ ಜಿಲ್ಲಾ ಆಸ್ಪತ್ರೆ ಒಟ್ಟು 900 ಬೆಡ್‌ ಸೌಲಭ್ಯ ಹೊಂದಿದೆ. ಕೋವಿಡ್‌ ಆಸ್ಪತ್ರೆಯನ್ನಾಗಿಸಿದ ನಂತರ ಆಸ್ಪತ್ರೆಯಲ್ಲಿ ಸಮರ್ಪಕ ಸೌಲಭ್ಯಕ್ಕೆ ಆದ್ಯತೆ ನೀಡಲಾಗಿದೆ. ಇನ್ನು ಕೋವಿಡ್‌-19 ಸೋಂಕು ಪತ್ತೆಯಾದಲ್ಲಿ ಅಂಥವರಿಗೆ ಸೂಕ್ತ ಚಿಕಿತ್ಸೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ 100 ಬೆಡ್‌ಗಳಿಗೆ ಪೈಪ್‌ನಲ್ಲಿ ಆಕ್ಸಿಜನ್‌ ಪೂರೈಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅದನ್ನು 200ಕ್ಕೇರಿಸಲು ಈಗಾಗಲೇ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಕೋವಿಡ್‌ -19 ವೈರಾಣು ಸೋಂಕಿನ ಗಂಭೀರತೆ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಅಗತ್ಯ ಇರುವ ಎಲ್ಲಾ ವಸ್ತುಗಳು ಲಭ್ಯ ಇವೆ. ಯಾವುದೇ ಪರಿಕರಗಳ ಕೊರತೆಯೇ ಇಲ್ಲ ಎಂದು ಆಸ್ಪತ್ರೆ ಅಧೀಕ್ಷಕ ಡಾ| ನಾಗರಾಜ್‌ ಹೇಳುತ್ತಾರೆ.

ಕೆಲ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕಿನ ಆತಂಕ
ಸದ್ಯ ಆಸ್ಪತ್ರೆಯಲ್ಲಿ 700 ಪಿಪಿಇ, 562 ಎನ್‌-95 ಮಾಸ್ಕ್, 490 ತ್ರಿಲೇಯರ್‌ ಮಾಸ್ಕ್, ಸಾಕಷ್ಟು ಸಾನಿಟೈಜರ್‌ ಲಭ್ಯ ಇದೆ. ಸಿಬ್ಬಂದಿಗೆ ಯಾವುದೇ ಪರಿಕರಗಳ ಕೊರತೆಯೇ ಇಲ್ಲ. ಕೆಲವು ಪಿಜಿ ವಿದ್ಯಾರ್ಥಿಗಳಿಗೆ ಕೋವಿಡ್‌-19 ಆತಂಕ ಕಾರಣ ಕೆಲಸ ಮಾಡಲು ಹಿಂಜರಿಕೆ ಇರಬಹುದು. ಕೋವಿಡ್ ವೈರಸ್‌ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳ ಬಳಿ ಅವರ ಪೋಷಕರು ಸಹ ತಮ್ಮ ಆತಂಕ ವ್ಯಕ್ತಪಡಿಸಿರಬಹುದು. ಈ ಬಗ್ಗೆ ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರ ಗಮನಕ್ಕೆ ತಂದು ಮಾತನಾಡಿದ್ದೇವೆ.

Advertisement

ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವುದಾಗಿ ಅವರು ಹೇಳಿದ್ದಾರೆ ಎಂದು ಆಸ್ಪತ್ರೆ ಅಧೀಕ್ಷಕ ಡಾ| ನಾಗರಾಜ್‌ “ಉದಯವಾಣಿ ತಿಳಿಸಿದರು. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲೇ ಈಗಾಗಲೇ ಓರ್ವ ಕೋವಿಡ್ ವೈರಸ್‌ ಸೋಂಕಿತನಿಗೆ ಚಿಕಿತ್ಸೆ ನೀಡಿ, ಆತ ಗುಣಮುಖನಾಗಿ ಮನೆಗೆ ತೆರಳಿದ್ದಾನೆ. ಜಿಲ್ಲೆಯಲ್ಲಿ ಒಟ್ಟು ಮೂವರು ಕೊರೊನಾ ಸೋಂಕಿತರು ಚಿಕಿತ್ಸೆ ಯಿಂದ ಗುಣಮುಖರಾಗಿದ್ದು, ಕಳೆದ 28 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್‌-19ರ ಯಾವುದೇ ಒಂದು ಪ್ರಕರಣ ಕೂಡ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಎಲ್ಲಾ ಕಡೆಗಳಲ್ಲೂ ವ್ಯವಸ್ಥಿತವಾಗಿ ಪರಿಸ್ಥಿತಿ ನಿಭಾಯಿಸಲಾಗಿದೆ. ಮೇಲಾಗಿ ಆಸ್ಪತ್ರೆಯಲ್ಲಿ 500ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ರ್ನಿವಹಿಸುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಪಿಜಿ ವಿದ್ಯಾರ್ಥಿಗಳು ಆತಂಕಗೊಳ್ಳುವ ಪ್ರಮೇಯವೇ ಇಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಕ್ರಮ ವಹಿಸಲಾಗಿದೆ. ಪ್ರತಿಯೊಬ್ಬರ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next