Advertisement
ಮಂಗಳವಾರ, ತಮ್ಮ ಕಚೇರಿ ಸಭಾಂಗಣದಲ್ಲಿ ಹಕ್ಕಿಜ್ವರ ನಿಯಂತ್ರಣ ಕುರಿತು ನಡೆದ ಸಭೆ ಅಧ್ಯಕ್ಷತೆ ವಹಿಸಿ,ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಕ್ಕಿಜ್ವರ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಒಟ್ಟಾಗಿ ಸಹಕರಿಸಬೇಕು ಎಂದರು.
Related Articles
Advertisement
ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ 1 ಕಿ.ಮೀ ಸರ್ವೇಕ್ಷಣಾ ವ್ಯಾಪ್ತಿಯಲ್ಲಿ 1167 ಕೋಳಿಗಳಿದ್ದು, ಇವುಗಳನ್ನು ವೈಜ್ಞಾನಿಕ ರೀತಿಯಲ್ಲಿ ನಾಶಪಡಿಸಲು ಪಶುಸಂಗೋಪನೆ ಅಧಿಕಾರಿಗಳು ಕ್ರಮ ವಹಿಸುವರು. ಹತ್ತಿರದಲ್ಲಿ ಭತ್ತದ ಗದ್ದೆಗಳಿರುವುದರಿಂದ ಹೊರಗಿನಿಂದ ಬರುವ ಕೊಕ್ಕರೆ, ಬಾತುಕೋಳಿ ಇನ್ನೂ ವಿವಿಧ ಜಾತಿಯ ಪಕ್ಷಿಗಳ ಬಗ್ಗೆ ವಹಿಸಬೇಕೆಂದರು.
ಆರೋಗ್ಯ ಇಲಾಖೆಯು ಕಿಲ್ಲಿಂಗ್ ಕಾರ್ಯ ನಿರ್ವಹಿಸಲು ರ್ಯಾಪಿಡ್ ರೆಸ್ಪಾನ್ಸ್ ಟೀಂ ರಚಿಸಿ, ಟೀಮ್‌ನಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ ಮತ್ತು ಐಸೋಲೇಷನ್ ಸೌಲಭ್ಯ ಒದಗಿಸಬೇಕು. ಈ ತಂಡವು ಕಾರ್ಯ ನಿರ್ವಹಿಸಿದ ನಂತರ 14 ದಿನಗಳ ವರೆಗೆ ನಿಗಾವಣೆಯಲ್ಲಿ ಇಡಬೇಕು. ರ್ಯಾಪಿಡ್ ರೆಸ್ಪಾನ್ಸ್ ತಂಡಕ್ಕೆ ಅಗತ್ಯವಿರುವ ಸುರಕ್ಷಾ ಸಾಮಗ್ರಿಗಳನ್ನು ಹೊಂದಿರುವ ಪಿ.ಪಿ. ಕಿಟ್‌ಗಳ ನೆರವು ನೀಡಲಾಗುವುದು ಎಂದರು.
ಹರಿಹರ ತಾಲೂಕಿನ ಕೆಲವು ಡಾಬಾಗಳಲ್ಲಿ ಬೇಯಿಸಿದ ಮಾಂಸ ಸಹ ನಾಶಪಡಿಸಬೇಕು. ಹೆಬ್ಟಾಳು ಬಳಿ ಇರುವ ಕೋಳಿ ಫಾರಂಗಳಲ್ಲಿ ಸ್ವಚ್ಛತೆ ಇಲ್ಲದೆ ನೊಣಗಳ ಹಾವಳಿ ಹೆಚ್ಚಿದ್ದು ಸುತ್ತಮುತ್ತಲ ಗ್ರಾಮಗಳಿಗೆ ನೊಣಗಳ ಕಾಡುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಪೌಲ್ಟ್ರಿ ಫಾರಂ ಮಾಲೀಕರು ಶುಚಿತ್ವ ಕಾಪಾಡಬೇಕು. ಇಲ್ಲದಿದ್ದರೆ ಸಿಆರ್‌ಪಿಸಿ ಸೆಕ್ಷನ್ 133 ರನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಪರವಾನಗಿಯನ್ನು ಕೂಡ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.
ದೇವರಬೆಳೆಕೆರೆ ಪಿಕ್‌ಅಪ್ ಡ್ಯಾಂ ಬಳಿ ಹಕ್ಕಿಗಳು ಹೆಚ್ಚಾಗಿ ವಲಸೆ ಬರುತ್ತಿದ್ದು, ಅವುಗಳ ಬಗ್ಗೆಯೂ ನಿಗಾ ವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪೌಲ್ಟ್ರಿ ಫಾರಂನವರು ಒಂದು ಕೋಳಿಯನ್ನು ಸಹ ಇಟ್ಟುಕೊಳ್ಳುವ ಹಾಗಿಲ್ಲ. ಸತ್ತಿರುವ ಕೋಳಿಯನ್ನು ಎಲ್ಲೆಂದರಲ್ಲಿ ಎಸೆಯುವ ಹಾಗಿಲ್ಲ. ಹೊಸ ಕೋಳಿ ಸಾಕುವಂತಿಲ್ಲ ಎಂದು ತಿಳಿಸಿದರು.
ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಆರ್‌ಆರ್ ಟೀಮ್‌ಗಳಿಗೆ ಅಗತ್ಯ ಸೌಲಭ್ಯವನ್ನು ಒದಗಿಸಲಾಗುವುದು. ಆರ್‌ಆರ್ ಸಿಬ್ಬಂದಿಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಪಿಡಿಓ ಮತ್ತು ಎನ್‌ಜಿಓ ಗಳ ಸಭೆ ನಡೆಸಿ ಹಕ್ಕಿಜ್ವರದ ಕುರಿತು ಜಾಗೃತಿ ಮೂಡಿಸಲಾಗುವುದು. ಕೋಳಿ ಸಾಕಾಣಿಕೆದಾರರಿಗೆ ನೀಡುವ ಪರಿಹಾರದ ಕುರಿತು ಸಮರ್ಪಕ ದಾಖಲಾತಿ ನಿರ್ವಹಿಸಲು ಸೂಚಿಸಲಾಗುವುದು. ಹಕ್ಕಿಜ್ವರ ಕುರಿತು ಎಚ್ಚರಿಸುವ ಫಲಕಗಳನ್ನು ಸಾರ್ವಜನಿಕವಾಗಿ ಅಳವಡಿಸಲಾಗುವುದು. ಫಾಗಿಂಗ್ ಯಂತ್ರಗಳ ಮೂಲಕ ರಾಸಾಯನಿಕಗಳ ಸಿಂಪಡಣೆ ಮಾಡಿಸಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿವೈಎಸ್‌ಪಿ ಮಂಜುನಾಥ್ ಗಂಗಲ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಡಿಎಚ್‌ಓ ಡಾ|ರಾಘವೇಂದ್ರ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ರಾಘವನ್, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ| ಭಾಸ್ಕರ್ ನಾಯಕ್, ಪಿಡಬ್ಲ್ಯೂಡಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಹರಿಹರ ತಹಶೀಲ್ದಾರ್ ರಾಮಚಂದ್ರಪ್ಪ, ದಾವಣಗೆರೆ ತಹಶೀಲ್ದಾರ್ ಸಂತೋಷ್ ಕುಮಾರ್, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.