Advertisement
ಬುಧವಾರ, ತಮ್ಮ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಾಮಫಲಕಗಳು ಇಲ್ಲದಿರುವುದರಿಂದ ಸಾರ್ವಜನಿಕರು ಸುತ್ತಿ ಬಳಸಿ ತಮ್ಮ ಗ್ರಾಮ ಮತ್ತು ನಗರ ತಲುಪಬೇಕಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲಿ ಆ ರಸ್ತೆಗಳು ಯಾವ ನಗರ ಮತ್ತು ಗ್ರಾಮ ಸಂಪರ್ಕಿಸುತ್ತವೆ ಎಂಬ ಮಾಹಿತಿಯ ನಾಮಫಲಕಗಳನ್ನು ಅಳವಡಿಸಬೇಕು. ಇದರಿಂದಾಗಿ ಸಾರ್ವಜನಿಕರ ಸಮಯ ಉಳಿತಾಯವಾಗುತ್ತದೆ ಎಂದರು.
Related Articles
Advertisement
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಅಪಘಾತಗಳು ಸಂಭವಿಸುವ ಸ್ಥಳ ಪರಿಶೀಲನೆ ನಡೆಸಬೇಕು. ಅಪಘಾತಗಳನ್ನು ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆರ್‌ಟಿಓ ಬಣಕಾರ್ ಮಾತನಾಡಿ, ದಾವಣಗೆರೆ ತಹಶೀಲ್ದಾರ್ ಹಾಗೂ ಜಿಲ್ಲಾ ಲಾರಿ ಮಾಲೀಕರ ಸಂಘದ ಅಧ್ಯಕ್ಷರು ಜಂಟಿಯಾಗಿ ಸ್ಥಳ ಪರಿಶೀಲಿಸಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕಾಗಿ ನಗರದ ಹಳೇ ಬಾತಿ ಗ್ರಾಮದ ಜಾಗ ಸೂಕ್ತ ಎಂದು ತಿಳಿಸಿದ್ದಾರೆ. ತಮ್ಮ ಹಾಗೂ ಎಸ್ಪಿ ಕಚೇರಿಗಳ ಮುಂಭಾಗದ ರಿಂಗ್‌ರೋಡ್ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದ ಸಂಚಾರಕ್ಕೆ ಸಮಸ್ಯೆಯಾಗಿದೆ ಎಂದು ಸಭೆಗೆ ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಹಾದೇವಪ್ಪ ಪ್ರತಿಕ್ರಿಯಿಸಿ, ರಸ್ತೆಗಳನ್ನು ಅದಷ್ಟು ಶೀಘ್ರವಾಗಿ ದುರಸ್ತಿ ಮಾಡಲಾಗುವುದು ಎಂದರು. ಆಗ, ಎಸ್ಪಿ ಹನುಮಂತರಾಯ, ಸುಪ್ರೀಂಕೋರ್ಟ್ ಆದೇಶದಂತೆ ರಸ್ತೆ ಬದಿಗಳಲ್ಲಿ ಆಸ್ಪತ್ರೆಗಳ ವಿವರ ಮತ್ತು ದೂರವಾಣಿ ಸಂಖ್ಯೆಯ ಸಂಪೂರ್ಣ ಮಾಹಿತಿ ಇರುವ ಫಲಕಗಳನ್ನು ಮಹಾನಗರ ಪಾಲಿಕೆ ಮತ್ತು ಸ್ಮಾರ್ಟಿ ಸಿಟಿಯವರು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಾಮಾಜಿಕ ಕಾರ್ಯಕರ್ತ ಎಂ.ಜಿ. ಶ್ರೀಕಾಂತ್ ಮಾತನಾಡಿ, ಅಶೋಕ ರಸ್ತೆಯಲ್ಲಿ ಅನಧಿಕೃತವಾಗಿ ಲಾರಿಗಳು ನಿಲುಗಡೆಯಾಗುತ್ತವೆ. ವಾಹನಗಳನ್ನು ರಸ್ತೆ ಬದಿಗಳಲ್ಲಿ ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ರಸ್ತೆ ದುರಸ್ತಿ ವೇಳೆ ಮಣ್ಣನ್ನು ನಿಗದಿತ ಸ್ಥಳದಲ್ಲಿ ಹಾಕುವ ವ್ಯವಸ್ಥೆ ಮಾಡಿದರೆ ಆ ಮಣ್ಣನ್ನು ಇತರೆ ಕಾಮಗಾರಿ ಅಥವಾ ಸಾರ್ವಜನಿಕರ ಉಪಯೋಗಕ್ಕೆ ಬಳಸಬಹುದೆಂದು ಸಭೆಗೆ ತಿಳಿಸಿದರು.
ಜಿಲ್ಲಾಕಾರಿಗಳು ಪ್ರತಿಕ್ರಿಯಿಸಿ, ಅಶೋಕ ರಸ್ತೆಯಲ್ಲಿ ವಾಹನಗಳು ನಿಲುಗಡೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಹಾನಗರ ಪಾಲಿಕೆಯವರು ರಸ್ತೆ ದುರಸ್ತಿ ಸಂದರ್ಭದಲ್ಲಿ ಮಣ್ಣನ್ನು ಹಾಕಲು ಒಂದು ಜಾಗ ಗುರುತಿಸಬೇಕು. ಬಾತಿಕೆರೆ ರಸ್ತೆಯ ಬದಿಯಲ್ಲಿ ಬಾತಿ ಡಾಬಾ ಎಂದಿರುವ ನಾಮಫಲಕದಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆ ನಾಮಫಲಕ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಭಾರತಿ, ಐಕಾನ್ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ ಅಧಿಕಾರಿಗಳು, ದೂಡಾ ಅಧಿಕಾರಿಗಳು, ಹೆಬ್ಟಾಳ್ ಟೋಲ್ ಮ್ಯಾನೇಜರ್ ಟಿ. ಉಮಕಾಂತ್, ಲಾರಿ ಮಾಲೀಕರ ಸಂಘದ ಅಧ್ಯಕ್ಷರು , ಸರಕು ವಾಹನಗಳ ಸಂಘದ ಅಧ್ಯಕ್ಷ ಪಳನಿಸ್ವಾಮಿ, ವಿವಿಧ ಇಲಾಖೆ ಅಭಿಯಂತರರು ಉಪಸ್ಥಿತರಿದರು.