Advertisement
ಮಂಗಳವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ, ಅರಕ್ಷಕ, ಸರ್ಕಾರಿ ಅಭಿಯೋಜಕ ಇಲಾಖೆ, ತಾಲೂಕು ಮತ್ತು ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
Related Articles
Advertisement
ಕಾರ್ಯಕ್ರಮ ಉದ್ಘಾಟಿಸಿದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ರಶ್ಮಿ ಎಸ್. ಮರಡಿ ಮಾತನಾಡಿ,ಇಂದಿಗೂ ಸಹ ಇಟ್ಟಿಗೆ ಭಟ್ಟಿ, ಗ್ಯಾರೇಜ್, ಹೋಟೆಲ್ ಮುಂತಾದ ಸ್ಥಳಗಳಲ್ಲಿ ಬಾಲಕಾರ್ಮಿಕರು ಕಂಡುಬರುತ್ತಿದ್ದು ಅವರೆಲ್ಲರನ್ನು ಮುಕ್ತಗೊಳಿಸಿ, ಶಾಲೆಗೆ ಕರೆತಂದು ಶಿಕ್ಷಣ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್. ಅರುಣ್‌ಕುಮಾರ್ ಮಾತನಾಡಿ, ಕಾನೂನು ಆಡಳಿತಕ್ಕೆ ಒಳಪಟ್ಟಿರುವ ನಾವೆಲ್ಲರೂ ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಿರುವ ಕಾನೂನುಗಳ ಬಗ್ಗೆ ತಿಳಿವಳಿಕೆ ಪಡೆಯುವುದು ಅವಶ್ಯಕವಾಗಿದ್ದು, ಇಂದು ಗರ್ಭದಿಂದ ಗೋರಿಯವರೆಗೂ ಸಹ ಮನುಷ್ಯನ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾನೂನುಗಳನ್ನು ರಚನೆ ಮಾಡಲಾಗಿದೆ. ಆದರೂ ಇಂದು ಭ್ರೂಣಾವಸ್ಥೆಯಲ್ಲಿಯೇ ಹೆಣ್ಣು ಶಿಶುಗಳನ್ನು ಹತ್ಯೆ ಮಾಡಲಾಗುತ್ತಿರುವುದರಿಂದ ದೇಶದಲ್ಲಿ ಹೆಣ್ಣು ಮಕ್ಕಳ ಸಂತತಿ ಕಡಿಮೆಯಾಗುತ್ತಿರುವುದು ಕಳವಳಕಾರಿ. ಹೆಣ್ಣು ಭ್ರೂಣ ತಡೆಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದರು.
ಉಪ ಪ್ರಾಚಾರ್ಯ ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ಎರಡನೇ ನ್ಯಾಯಾಲಯದ ನ್ಯಾಯಾಧೀಶ ಪಿ.ಎಂ.ಪಿ. ಕಿರಣ್, ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಎಂ. ಅನ್ನಪೂರ್ಣ, ವಕೀಲ ಎನ್.ಎಂ. ಆಂಜನೇಯ ಮಾತನಾಡಿದರು. ವಕೀಲ ಎ.ಸಿ. ರಘು, ಬಾಲಕಾರ್ಮಿಕರ ಕಾಯ್ದೆ …ಕುರಿತು ಉಪನ್ಯಾಸ ನೀಡಿದರು.