Advertisement
ಭಾನುವಾರ ಚನ್ನಗಿರಿ ತಾಲೂಕಿನ ರಾಜಗೊಂಡನಹಳ್ಳಿ, ತಿಪ್ಪಗೊಂಡನಹಳ್ಳಿ, ಹೊನ್ನೇಬಾಗಿ, ಅಜ್ಜಿಹಳ್ಳಿ, ನಲ್ಲೂರು ಸೇರಿ ದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚಿಸಿ ಮಾತನಾಡಿದ ಅವರು, ಚನ್ನಗಿರಿ ತಾಲೂಕಿನಲ್ಲಿ ಅಡಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಕೆ ಬೆಳೆಗಾರರ ಹಿತ ಕಾಪಾಡ ಬಹುದು. ತಾಲೂಕಿನಲ್ಲಿ ವಿಶೇಷ ಆರ್ಥಿಕ ವಲಯ ಸೃಜನೆಗೆ ವಿಪುಲ ಅವಕಾಶಗಳ ಯಶಸ್ವಿ ಅನುಷ್ಠಾನಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದರು. ತುಮ್ಕೋಸ್‌ನಲ್ಲಿ ತಾಲೂಕು ಸೇರಿದಂತೆ ಅಕ್ಕಪಕ್ಕದ ತಾಲೂಕಿನ ಬೆಳೆಗಾರರು ಅಡಕೆ ಮಾಡುತ್ತಿರುವುದರಿಂದ ಹೆಚ್ಚಿನ ಆರ್ಥಿಕ ವಹಿವಾಟು ನಡೆಯುತ್ತಿದೆ. ಅಡಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವ ಜನಾಂಗಕ್ಕೆ ಉದ್ಯೋಗ ದೊರೆಯಲಿದೆ. ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯವಾಗಲಿದೆ. ತಾಲೂಕಿನಲ್ಲಿ ವಿಶೇಷ ಆರ್ಥಿಕ ವಲಯ ರಚನೆ ಮಾಡಲು ನನಗೆ ಮತ ನೀಡುವ ಮೂಲಕ ಅವಕಾಶ ನೀಡಿ ಎಂದು ಮನವಿ ಮಾಡಿದರು.
Related Articles
Advertisement
ಜೀವಕ್ಕೆ ಗ್ಯಾರಂಟಿ ಯಾರು? : ನಲ್ಲೂರು ಗ್ರಾಮದಲ್ಲಿ ನಡೆದ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಗಾಯಿತ್ರಿ ಸಿದ್ದೇಶ್ವರ, ಮಾತೆತ್ತಿದರೆ ಗ್ಯಾರಂಟಿಗಳ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರೇ, ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಾಲು ಸಾಲು ಹತ್ಯೆಗಳು ಆಗುತ್ತಿವೆ. ಜನ ನಿರ್ಭೀತಿಯಿಂದ ಮನೆ ಬಿಟ್ಟು ಹೊರಬರಲು ಯೋಚಿಸುವಂತಾಗಿದೆ. ರಾಜ್ಯದ ಜನರ ಜೀವಕ್ಕೆ ಗ್ಯಾರಂಟಿ ಕೊಡುವವರು ಯಾರು ಎಂದು ಪ್ರಶ್ನಿಸಿದರು. ರಾಮನವಮಿ ದಿನ ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಅನ್ಯ ಕೋಮಿನ ಯುವಕರು ಹಿಂದೂ ಯುವಕರಿಗೆ ಚಾಕು ಇರಿದು ಹಲ್ಲೆ ಮಾಡಿದ್ದಾರೆ. ಅದೃಷ್ಟವಶಾತ್ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಇಂತಹ ಜಿಹಾದಿ ಕೃತ್ಯಗಳು ನಡೆಯಬಾರದು ಎಂದರೆ ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್‌ನ್ನು ಕಿತ್ತೂಗೆಯಬೇಕು. ಎಲ್ಲರೂ ಬಿಜೆಪಿ ಬೆಂಬಲಿಸಿದರೆ ದೇಶದಲ್ಲಿ, ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುವುದಿಲ್ಲ. ಜಿಹಾದಿ ಮನಸ್ಥಿತಿಯ ಕ್ರಿಮಿನಲ್‌ಗಳು ಬಾಲ ಮುಚ್ಚಿಕೊಂಡು ಇರುತ್ತಾರೆ ಎಂದರು.
ನಲ್ಲೂರಿನಲ್ಲಿ ಚಾಕು ಇರಿತದಿಂದ ಗಾಯಗೊಂಡಿದ್ದ ಯುವಕರ ಮನೆಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ, ಚಿತ್ರದುರ್ಗ ತಾಲೂಕುಗಳ 121 ಕೆರೆಗಳಿಗೆ ನೀರು ತುಂಬಿಸುವ 597 ಕೋಟಿ ರೂ ವೆಚ್ಚದ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಬಿಜೆಪಿ ಸರ್ಕಾರದ ಸಾಧನೆಯೇ ವಿನಃ, ಇದರಲ್ಲಿ ಕಾಂಗ್ರೆಸ್ ಪಕ್ಷದ ಶ್ರಮ ಎಳ್ಳಷ್ಟೂ ಇಲ್ಲ. ಮುಗಿದಿರುವ ಕಾಮಗಾರಿ ಪೂರ್ಣಗೊಳಿಸುವುದೇ ನನ್ನ ಆದ್ಯತೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಈ ಯೋಜನೆಯ ಗಂಧಗಾಳಿಯೂ ಗೊತ್ತಿಲ್ಲ. – ಗಾಯಿತ್ರಿ ಸಿದ್ದೇಶ್ವರ, ಬಿಜೆಪಿ ಅಭ್ಯರ್ಥಿ