Advertisement

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

11:37 AM Apr 22, 2024 | Team Udayavani |

ದಾವಣಗೆರೆ: ಚನ್ನಗಿರಿ ತಾಲೂಕಿನ ಅಡಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹೇಳಿದರು.

Advertisement

ಭಾನುವಾರ ಚನ್ನಗಿರಿ ತಾಲೂಕಿನ ರಾಜಗೊಂಡನಹಳ್ಳಿ, ತಿಪ್ಪಗೊಂಡನಹಳ್ಳಿ, ಹೊನ್ನೇಬಾಗಿ, ಅಜ್ಜಿಹಳ್ಳಿ, ನಲ್ಲೂರು ಸೇರಿ ದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚಿಸಿ ಮಾತನಾಡಿದ ಅವರು, ಚನ್ನಗಿರಿ ತಾಲೂಕಿನಲ್ಲಿ ಅಡಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಕೆ ಬೆಳೆಗಾರರ ಹಿತ ಕಾಪಾಡ ಬಹುದು. ತಾಲೂಕಿನಲ್ಲಿ ವಿಶೇಷ ಆರ್ಥಿಕ ವಲಯ ಸೃಜನೆಗೆ ವಿಪುಲ ಅವಕಾಶಗಳ ಯಶಸ್ವಿ ಅನುಷ್ಠಾನಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದರು. ತುಮ್ಕೋಸ್‌ನಲ್ಲಿ ತಾಲೂಕು ಸೇರಿದಂತೆ ಅಕ್ಕಪಕ್ಕದ ತಾಲೂಕಿನ ಬೆಳೆಗಾರರು ಅಡಕೆ ಮಾಡುತ್ತಿರುವುದರಿಂದ ಹೆಚ್ಚಿನ ಆರ್ಥಿಕ ವಹಿವಾಟು ನಡೆಯುತ್ತಿದೆ. ಅಡಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವ ಜನಾಂಗಕ್ಕೆ ಉದ್ಯೋಗ ದೊರೆಯಲಿದೆ. ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯವಾಗಲಿದೆ. ತಾಲೂಕಿನಲ್ಲಿ ವಿಶೇಷ ಆರ್ಥಿಕ ವಲಯ ರಚನೆ ಮಾಡಲು ನನಗೆ ಮತ ನೀಡುವ ಮೂಲಕ ಅವಕಾಶ ನೀಡಿ ಎಂದು ಮನವಿ ಮಾಡಿದರು.

ಮಾಜಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಮಾತನಾಡಿ, ಜಿ.ಎಂ. ಸಿದ್ದೇಶ್ವರ ಕುಟುಂಬ ಜನಸೇವೆಯಲ್ಲಿ ಯಾವಾಗಲೂ ಮುಂದಿದೆ. ಈ ಬಾರಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್‌ ಸಿಕ್ಕಿದೆ. ನಾವು ಚನ್ನಗಿರಿ ಕ್ಷೇತ್ರದಿಂದ ಕನಿಷ್ಠ 50 ಸಾವಿರ ಲೀಡ್‌ ಕೊಟ್ಟು ಗೆಲ್ಲಿಸಬೇಕು ಎಂದರು.

ಬಿಜೆಪಿ ಯುವ ಮುಖಂಡ ಮಾಡಾಳ್‌ ಮಲ್ಲಿಕಾರ್ಜುನ್‌ ಮಾತನಾಡಿ, ಸಂಸದ ಸಿದ್ದೇಶ್ವರ ಅವರು ಪ್ರದೇಶಾಭಿವೃದ್ಧಿ ಅನುದಾನ ಹೊರತುಪಡಿಸಿ ಕೇಂದ್ರದಿಂದ ವಿವಿಧ ಯೋಜನೆಗಳಲ್ಲಿ ಅನುದಾನ ತಂದು ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ಗಾಯಿತ್ರಿ ಸಿದ್ದೇಶ್ವರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸಿದರೆ ಚನ್ನಗಿರಿ ತಾಲೂಕು ಮಾದರಿ ತಾಲೂಕನ್ನಾಗಿ ಅಭಿವೃದ್ಧಿ ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟರು.

ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್‌.ಎಸ್‌. ಶಿವಕುಮಾರ್‌, ಮಾಜಿ ಸಚಿವ ಮುರುಗೇಶ ನಿರಾಣಿ ಪತ್ನಿ ಕಮಲಾ ನಿರಾಣಿ, ಮಂಡಲ ಅಧ್ಯಕ್ಷರು, ಸದಸ್ಯರು, ಗ್ರಾಪಂ ಸದಸ್ಯರು, ಬೂತ್‌ ಮಟ್ಟದ ಅಧ್ಯಕ್ಷರು, ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮುಖಂಡರು ಇದ್ದರು. ‌

Advertisement

ಜೀವಕ್ಕೆ ಗ್ಯಾರಂಟಿ ಯಾರು? : ನಲ್ಲೂರು ಗ್ರಾಮದಲ್ಲಿ ನಡೆದ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಗಾಯಿತ್ರಿ ಸಿದ್ದೇಶ್ವರ, ಮಾತೆತ್ತಿದರೆ ಗ್ಯಾರಂಟಿಗಳ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರೇ, ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಾಲು ಸಾಲು ಹತ್ಯೆಗಳು ಆಗುತ್ತಿವೆ. ಜನ ನಿರ್ಭೀತಿಯಿಂದ ಮನೆ ಬಿಟ್ಟು ಹೊರಬರಲು ಯೋಚಿಸುವಂತಾಗಿದೆ. ರಾಜ್ಯದ ಜನರ ಜೀವಕ್ಕೆ ಗ್ಯಾರಂಟಿ ಕೊಡುವವರು ಯಾರು ಎಂದು ಪ್ರಶ್ನಿಸಿದರು. ರಾಮನವಮಿ ದಿನ ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಅನ್ಯ ಕೋಮಿನ ಯುವಕರು ಹಿಂದೂ ಯುವಕರಿಗೆ ಚಾಕು ಇರಿದು ಹಲ್ಲೆ ಮಾಡಿದ್ದಾರೆ. ಅದೃಷ್ಟವಶಾತ್‌ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಇಂತಹ ಜಿಹಾದಿ ಕೃತ್ಯಗಳು ನಡೆಯಬಾರದು ಎಂದರೆ ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್‌ನ್ನು ಕಿತ್ತೂಗೆಯಬೇಕು. ಎಲ್ಲರೂ ಬಿಜೆಪಿ ಬೆಂಬಲಿಸಿದರೆ ದೇಶದಲ್ಲಿ, ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುವುದಿಲ್ಲ. ಜಿಹಾದಿ ಮನಸ್ಥಿತಿಯ ಕ್ರಿಮಿನಲ್‌ಗ‌ಳು ಬಾಲ ಮುಚ್ಚಿಕೊಂಡು ಇರುತ್ತಾರೆ ಎಂದರು.

ನಲ್ಲೂರಿನಲ್ಲಿ ಚಾಕು ಇರಿತದಿಂದ ಗಾಯಗೊಂಡಿದ್ದ ಯುವಕರ ಮನೆಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ, ಚಿತ್ರದುರ್ಗ ತಾಲೂಕುಗಳ 121 ಕೆರೆಗಳಿಗೆ ನೀರು ತುಂಬಿಸುವ 597 ಕೋಟಿ ರೂ ವೆಚ್ಚದ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಬಿಜೆಪಿ ಸರ್ಕಾರದ ಸಾಧನೆಯೇ ವಿನಃ, ಇದರಲ್ಲಿ ಕಾಂಗ್ರೆಸ್‌ ಪಕ್ಷದ ಶ್ರಮ ಎಳ್ಳಷ್ಟೂ ಇಲ್ಲ. ಮುಗಿದಿರುವ ಕಾಮಗಾರಿ ಪೂರ್ಣಗೊಳಿಸುವುದೇ ನನ್ನ ಆದ್ಯತೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಈ ಯೋಜನೆಯ ಗಂಧಗಾಳಿಯೂ ಗೊತ್ತಿಲ್ಲ. – ಗಾಯಿತ್ರಿ ಸಿದ್ದೇಶ್ವರ, ಬಿಜೆಪಿ ಅಭ್ಯರ್ಥಿ

Advertisement

Udayavani is now on Telegram. Click here to join our channel and stay updated with the latest news.

Next