Advertisement
ಬುಧವಾರ ನಗರದ ಕೆಎಸ್‌ಆರ್‌ಟಿಸಿ ವಿಭಾಗ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಹಿನ್ನೆಲೆ ಘೋಷಿಸಲಾಗಿರುವ ಲಾಕ್ ಡೌನ್‌ನಿಂದ ನಾಲ್ಕು ನಿಗಮಗಳಿಗೆ 1800 ಕೋಟಿ ರೂ. ನಷ್ಟ ಆಗಿದೆ. ಇನ್ನೂ ಹೀಗೆ ಮುಂದುವರಿದಲ್ಲಿ ಏನೆಲ್ಲ ಕ್ರಮ ಕೈಗೊಳ್ಳಬೇಕೆಂದು ಚಿಂತಿಸಬೇಕಿದೆ. ಅಧಿಕಾರಿ/ನೌಕರರ ಸಂಬಳಕ್ಕೇ 326 ಕೋಟಿ ರೂ. ಅವಶ್ಯಕತೆ ಇದೆ. ಆದ್ದರಿಂದ ನಿಗಮಗಳ ಆಡಳಿತಾತ್ಮಕ ವೆಚ್ಚ ಕಡಿತಗೊಳಿಸಲು ಕ್ರಮ ವಹಿಸಬೇಕಿದೆ ಎಂದರು.
Related Articles
Advertisement
ಸಚಿವರು ಮಾತನಾಡಿ, ಎಸಿ ಇರುವ ವಿಮಾನ ಹಾಗೂ ಬೈಕ್ ಸವಾರಿಯಲ್ಲೂ ಸಾಮಾಜಿಕ ಅಂತರ ಇಲ್ಲ. ಕೆಎಸ್‌ಆರ್‌ಟಿಸಿ ಸೇವೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸೇವೆ ನೀಡುವುದು ಕಷ್ಟವಲ್ಲದೆ ನಷ್ಟಕ್ಕೆ ಕಾರಣವಾಗುತ್ತದೆ. ಕೇಂದ್ರದ ಹೊಸ ಮಾರ್ಗಸೂಚಿಗಳು ಬಂದ ನಂತರ ಸಾಮಾಜಿಕ ಅಂತರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಇನ್ನು ಬೆಳಗಿನ ಹೊತ್ತು ಮಾತ್ರ ಕೆಎಸ್‌ಆರ್‌ಟಿಸಿ ಸೇವೆಯಿಂದ ನಷ್ಟ ಹೆಚ್ಚುತ್ತಿದೆ. ಆದ ಕಾರಣ ಇನ್ನು ಮುಂದೆ 24+7 ಜೊತೆಗೆ ಸುಮಾರು ಶೇ.25 ತಾಪಮಾನದ ಎಸಿ ಯೊಂದಿಗೆ ಬಸ್‌ಗಳ ಸೇವೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಗಳೂರು ಮತ್ತು ಚನ್ನಗಿರಿಯಲ್ಲಿ ಕೆಎಸ್‌ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚನ್ನಗಿರಿಯಲ್ಲಿ ಜಾಗ ಸಿಗದ ಕಾರಣ ಪ್ರಸ್ತಾವನೆ ಹಾಗೆಯೇ ಇದೆ ಎಂದು ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿ ತಿಳಿಸಿದರು. ಸಂಸದ ಜಿ.ಎಂ ಸಿದ್ದೇಶ್ವರ್, ಚನ್ನಗಿರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಜಾಗ ಹುಡುಕಬೇಕು. ಮಾಯಕೊಂಡದಲ್ಲಿ ಜಾಗವಿದ್ದು, ಅಲ್ಲೇ ಕೆಎಸ್‌ಆರ್‌ಟಿಸಿ ಡಿಪೋ ಆಗಬೇಕು. ಸಂತೇಬೆನ್ನೂರು ಮತ್ತು ತ್ಯಾವಣಗಿಯಲ್ಲಿ ನಿಲ್ದಾಣ ನಿರ್ಮಾಣ ಆಗಬೇಕಿದೆ. ಹಾಗೂ 14 ಕೋಟಿ ರೂ. ವೆಚ್ಚದಲ್ಲಿ ಹರಿಹರ ಬಸ್‌ನಿಲ್ದಾಣ ಉನ್ನತೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನೇಕ ಹಳ್ಳಿಗಳಿಗೆ ಬಸ್ ಸಂಚಾರ ಪ್ರಾರಂಭಿಸಬೇಕೆಂದರು. ಆಗ ಸಚಿವರು ಪ್ರತಿಕ್ರಿಯಿಸಿ, ದಾವಣಗೆರೆ ವಿಭಾಗಕ್ಕೆ 63 ಹೊಸ ಬಸ್‌ಗಳನ್ನು ನೀಡಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿಯ ಬಸ್ನಿಲ್ದಾಣಗಳ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಕೈಗೊಳ್ಳಲು ಸೂಚಿಸಿದರು. ಪರಿಸರ ಮತ್ತು ಸಿಬ್ಬಂದಿ ನಿರ್ದೇಶಕಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್, ಮೇಯರ್ ಬಿ.ಜಿ.ಅಜಯಕುಮಾರ್, ಎಸ್‌ಪಿ ಹನುಮಂತರಾಯ, ಇತರರು ಇದ್ದರು. ಸಾರಿಗೆ ಸಂಜೀವಿನಿ ಹಸಿರು ನಿಶಾನೆಗೆ ವಿಳಂಬ
ಕೋವಿಡ್ ಸೋಂಕು ಪತ್ತೆಗೆ ಸ್ವಾಬ್ ಸಂಗ್ರಹ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಸಿದ್ದಪಡಿಸಿದ ಮೊಬೈಲ್ ಫೀವರ್ ವಾಹನಕ್ಕೆ ಹಸಿರು ನಿಶಾನೆ ತೋರಿಸಲು ಸಾರಿಗೆ ಸಚಿವ ಲಕ್ಷ್ಮಣ ಸವದಿ ತೀರಾ ವಿಳಂಬ ಮಾಡಿದರು. ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದೇ ಒಂದು ಗಂಟೆ ವಿಳಂಬವಾಗಿ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. 12 ಗಂಟೆಗೆ ಬಂದ ಸಚಿವರು, ಪ್ರಗತಿ ಪರಿಶೀಲನಾ ಸಭೆ ನಡೆಸಲು ತೆರಳಿದರು.ಸಭೆ ಮುಗಿಯುವ ಹಂತದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಆಗಮಿಸಿದ್ದರಿಂದ ಸಭೆ ಮುಂದುವರಿಯಿತು. ಹಾಗಾಗಿ ಸಾರಿಗೆ ಸಂಜೀವಿನಿ ಲೋಕಾರ್ಪಣೆಗೆ ಸಿಬ್ಬಂದಿ, ಮಾಧ್ಯಮದವರು ಎರಡೂವರೆ ತಾಸಿಗೂ ಹೆಚ್ಚು ಕಾಲ ಕಾಯಬೇಕಾಯಿತು. ಕೊನೆಗೆ ಸಭೆ ಮುಗಿಸಿ ಮಧ್ಯಾಹ್ನ 1.40ಕ್ಕೆ ಬಂದ ಸಚಿವರು ಸಾರಿಗೆ ಸಂಜೀವಿನಿಗೆ ಹಸಿರು ನಿಶಾನೆ ತೋರಿಸಿ ವಾಹನದಲ್ಲಿನ ಸೌಲಭ್ಯ ವೀಕ್ಷಿಸಿದರು. ಅವರಿಗೆ ಸಂಸದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಾಥ್ ನೀಡಿದರು. ಕೋವಿಡ್ ವಾರಿಯರ್ಗೆ ಅಭಿನಂದನೆ
ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣದಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸಿದ ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರಿಗೆ ಬುಧವಾರ ದಾವಣಗೆರೆ ಬಸ್ ನಿಲ್ದಾಣದಲ್ಲಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ್ ಮತ್ತು ಸಂಸದ ಜಿ.ಎಂ ಸಿದ್ದೇಶ್ವರ್, ಮೇಯರ್ ಬಿ.ಜಿ.ಅಜಯಕುಮಾರ್, ಸಂಸ್ಥೆಯ ಅಧಿಕಾರಿಗಳು ಪುಷ್ಟವೃಷ್ಟಿಗೈದು, ಚಪ್ಪಾಳೆ ತಟ್ಟುವ ಮೂಲಕ ಅಭಿನಂದಿಸಿದರು.