Advertisement
ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಾಮರಾಜನಗರದ ಸುಳ್ವಾಡಿಯಲ್ಲಿ ಪ್ರಸಾದ ಸೇವನೆ ಹಿನ್ನೆಲೆಯಲ್ಲಿ ಸಂಭವಿಸಿದ ದುರ್ಘಟನೆ ಉಲ್ಲೇಖೀಸಿ, ಆಹಾರ ಸುರಕ್ಷತೆ ತಂಡದಿಂದ ಪರೀಕ್ಷೆ ಮಾಡಿಸದೇ ಪ್ರಸಾದ ವಿತರಿಸಿ, ಅಚಾತುರ್ಯಗಳೇನಾದರೂ ಸಂಭವಿಸಿದಲ್ಲಿ ಆಯಾ ಮಂದಿರಗಳು, ಸಂಸ್ಥೆಯವರನ್ನೇ ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು. ಆನ್‌ಲೈನ್ ಮೂಲಕ ಈ ಮಂದಿರ-ಸಂಸ್ಥೆಗಳು ನೋಂದಾಯಿಸಿಕೊಳ್ಳದಿದ್ದಲ್ಲಿ 25,000 ರೂ. ವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.
Related Articles
Advertisement
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 12 ಲಕ್ಷ ಗರ್ಭಿಣಿಯರು ಮತ್ತು 10.5 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಗರ್ಭಿಣಿ ಹೆರಿಗೆಯಾಗುವವರೆಗೂ ಅನೇಕ ಲಸಿಕೆಗಳನ್ನು ನೀಡಲಾಗುವುದು. ಮಕ್ಕಳು ಮತ್ತು ವಯಸ್ಕರು ಸೇರಿದಂತೆ ಎಲ್ಲಾ ವಯಸ್ಸಿನವರಲ್ಲಿ ಡಿಫ್ತಿರಿಯಾ ಕಂಡು ಬರುತ್ತಿದ್ದು, ಟಿ.ಡಿ. ಲಸಿಕೆ ಹಾಕಲಾಗುವುದು. ಹಿಂದೆ ಇದ್ದ ಟಿ.ಟಿ ಲಸಿಕೆಯನ್ನು ಟಿ.ಡಿ.(ಟೆಟನಸ್ ಡಿಫ್ತಿರಿಯಾ)ಯನ್ನಾಗಿಸಿ ನೀಡಲಾಗುತ್ತಿದ್ದು, ರೋಟಾ ವೈರಸ್ ಹಾಗೂ ಟಿಡಿ ಲಸಿಕೆಗಳನ್ನು ನೀಡುವ ವ್ಯಾಪ್ತಿ ಹೆಚ್ಚಿಸಲಾಗುತ್ತಿದೆ.
ಕಾರ್ಯಕ್ರಮಗಳ ಯಶಸ್ಸಿಗೆ ಸರ್ಕಾರದ ವಿವಿಧ ಇಲಾಖೆಗಳ ಸಹಕಾರ ಅಗತ್ಯವೆಂದು ಸಭೆ ಗಮನಕ್ಕೆ ತಂದರು.
ಆಗ, ಜಿಲ್ಲಾಧಿಕಾರಿಗಳು, ನಗರಾಭಿವೃದ್ಧಿ ಕೋಶದಿಂದಲೂ ಸಾರ್ವತ್ರಿಕ ಲಸಿಕೆ ಕುರಿತು ಸಭೆ ನಡೆಸಿ, ಪಾಲಿಕೆ ವ್ಯಾಪ್ತಿ ಸೇರಿದಂತೆ ಜಿಲ್ಲೆಯಲ್ಲಿ ಅರ್ಹರೆಲ್ಲರಿಗೂ ಲಸಿಕೆ ಹಾಕಲು ಕ್ರಮವಹಿಸಬೇಕು. ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದ ಅವರು, ಈ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಮೀನಾಕ್ಷಿ, ಜಿಲ್ಲೆಯಲ್ಲಿ ಆಗಸ್ಟ್ ಅಂತ್ಯದವರೆಗೆ 640 ಡೆಂಘೀ ಸಂಶಯಾಸ್ಪದ ಪ್ರಕರಣಗಳ ಪೈಕಿ 160 ದೃಢಪಟ್ಟಿವೆ. 285 ಚಿಕೂನ್‌ಗುನ್ಯ ಸಂಶಯಾಸ್ಪದ ಪ್ರಕರಣಗಳ ಪೈಕಿ 38 ಪ್ರಕರಣ ದೃಢಪಟ್ಟಿದೆ. ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಗಂಗಾಧರ್ ಮಾತನಾಡಿ, ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಒಟ್ಟು 1344 ರೋಗಿಗಳಿಗೆ ಕಫ ಪರೀಕ್ಷೆ ನಡೆಸಲಾಗಿದ್ದು, 82 ಧನಾತ್ಮಕ ವರದಿ ಬಂದಿದೆ. ಇತರೆ ಕ್ಷಯ ರೋಗಿಗಳು 62 ಸೇರಿ ಒಟ್ಟು 141 ಕ್ಷಯ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ತಾಯಿ ಮತ್ತು ಮಗು ಮರಣ ಪ್ರಮಾಣ, ಕುಷ್ಟರೋಗ ನಿಯಂತ್ರಣ ಸೇರಿದಂತೆ ಆರೋಗ್ಯ ಕಾರ್ಯಕ್ರಮಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕ್ರಮಗಳನ್ನು ಸಂಬಂಧಿಸಿದ ಅಧಿಕಾರಿಗಳು ಇತರೆ ಇಲಾಖೆಗಳ ಸಹಯೋಗದೊಂದಿಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಓ ಪದ್ಮ ಬಸವಂತಪ್ಪ, ಡಿಯುಡಿಸಿ ಯೋಜನಾ ನಿರ್ದೇಶಕಿ ನಜ್ಮಾ, ಡಿಎಚ್ಓ ಡಾ| ರಾಘವೇಂದ್ರಸ್ವಾಮಿ, ಜಿಲ್ಲಾಸ್ಪತ್ರೆ ಅಧಿಧೀಕ್ಷಕ ಡಾ| ನಾಗರಾಜ್, ತಾಲ್ಲೂಕಿನ ವೈದ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿಜಯಕುಮಾರ್, ಡಿಡಿಪಿಐ ಪರಮೇಶ್ವರಪ್ಪ, ಇತರೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.