Advertisement

ಸರ್ಕಾರಿ ಶಾಲೆ ದತ್ತು ಪಡೆದು ಬೆಳೆಸಿ

11:37 AM Jan 24, 2020 | Naveen |

ದಾವಣಗೆರೆ: ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲೆಯಲ್ಲಿರುವ ಒಂದು ಅಥವಾ ಎರಡು
ಸರ್ಕಾರಿ ಶಾಲೆ ದತ್ತು ಪಡೆದು ಅಗತ್ಯ ಸೌಲಭ್ಯ ಹಾಗೂ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಕ್ರಮ ಕೈಗೊಂಡು ಶಿಕ್ಷಣ ಇಲಾಖೆಗೆ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್‌.ಆರ್‌ ಉಮಾಶಂಕರ್‌ ಸೂಚಿಸಿದ್ದಾರೆ.

Advertisement

ಗುರುವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ
ಸಭೆ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿ, ದಾವಣಗೆರೆ ಜಿಲ್ಲೆ ವಿದ್ಯಾಕೇಂದ್ರವಾಗಿದ್ದು, ಜಿಲ್ಲಾ ಮಟ್ಟದ ಅಧಿ ಕಾರಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರಮ ಕೈಗೊಂಡಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಬಹುದೆಂದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುತ್ತಿರುವ ರೀತಿಯಲ್ಲಿಯೇ ದಾವಣಗೆರೆ ಜಿಲ್ಲೆಯಲ್ಲೂ ಅಧಿ ಕಾರಿಗಳು ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದ ಅವರು, ಕೋಲಾರ ಮತ್ತು ಬೆಂಗಳೂರಿನಲ್ಲಿ ಶಾಸಕರೇ ಸ್ವಯಂಪ್ರೇರಿತರಾಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ದಿಪಡಿಸುತ್ತಿದ್ದಾರೆಂದು ಸಭೆ ಗಮನಕ್ಕೆ ತಂದರು.

ರಾಜ್ಯದಲ್ಲಿ ಶೇ. 80ರಷ್ಟು ಮಕ್ಕಳು ಪ್ರಾಥಮಿಕ ಶಿಕ್ಷಣ ಪಡೆಯುತ್ತಿದ್ದರೆ, ಶೇ. 27ರಷ್ಟು ಮಕ್ಕಳು
ಮಾತ್ರ ಪ್ರೌಢಶಿಕ್ಷಣ ಪಡೆಯುತ್ತಿದ್ದಾರೆ. ನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸೇರಿ ಒಟ್ಟು 1.20 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಜಿಲ್ಲಾ ಮಟ್ಟದ ಅ ಧಿಕಾರಿಗಳು ಆಸಕ್ತಿ ಹೊಂದಿ ಶಾಲೆಗಳನ್ನು ದತ್ತು ತೆಗೆದುಕೊಂಡು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದರೆ ಪ್ರೌಢಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಬಹುದು ಎಂದು ಅಭಿಪ್ರಾಯಪಟ್ಟರು.

ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದಂತೆ ಸ್ಥಳಗಳ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಅಪ್‌ಡೇಟ್‌ ಮಾಡಲು ಕ್ರಮ ಕೈಗೊಳ್ಳಬೇಕು. ದಾಖಲೆ ಇರುವ, ಖಾತೆ ಬದಲಾವಣೆ ಬಾಕಿ ಇರುವ ಶಾಲೆಗಳಲ್ಲಿ ಖಾತೆ ಬದಲಾವಣೆ ಪ್ರಕ್ರಿಯೆ ಮಾಡಿಸಿಕೊಳ್ಳಬೇಕು. ದಾಖಲೆ ಇಲ್ಲದೇ ಇರುವ ಶಾಲೆಗಳು ಜಿಲ್ಲಾಧಿಕಾರಿಗಳ ಮುಖಾಂತರ ನಿಯಮಾನುಸಾರ ಖಾತೆ ಮಾಡಿಸಿಕೊಂಡು ಆನ್‌ಲೈನ್‌ನಲ್ಲಿ ಅಪ್‌ಡೇಟ್‌ ಮಾಡಿಸಬೇಕು ಎಂದು ಅವರು ಸೂಚಿಸಿದರು.
ಉಪವಿಭಾಗಾ ಧಿಕಾರಿ ಮಮತಾ ಹೊಸಗೌಡರ್‌ ಮಾತನಾಡಿ, ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರಕ್ಕೆ ಸಂಬಂಧಿ ಸಿದಂತೆ ಶೇ.100 ಗುರಿ ಸಾಧಿಸಲಾಗಿದೆ. ಸಕಾಲ ಯೋಜನೆಯಡಿ ಹೊನ್ನಾಳಿ ತಾಲೂಕು ರಾಜ್ಯದಲ್ಲೇ ಮೊದಲನೇ ಸ್ಥಾನದಲ್ಲಿದೆ.
ಚನ್ನಗಿರಿ ಹಾಗೂ ದಾವಣಗೆರೆ ತಾಲೂಕುಗಳು ಕ್ರಮವಾಗಿ 3 ಮತ್ತು 11ನೇ ಸ್ಥಾನದಲ್ಲಿವೆ.
ಜಿಲ್ಲೆಯಲ್ಲಿ ಪಹಣಿ ತಿದ್ದುಪಡಿಯಲ್ಲಿ ಶೇ.80 ಪ್ರಗತಿ ಸಾಧಿ ಸಿದ್ದು 17 ಸಾವಿರ ಅರ್ಜಿಗಳು ಬಾಕಿ ಇವೆ.

Advertisement

ಮಾರ್ಚ್‌ ಅಂತ್ಯದೊಳಗೆ ಅವುಗಳನ್ನು ವಿಲೇವಾರಿ ಮಾಡಲಾಗುವುದು ಎಂದರು.
ಜಿಲ್ಲಾ ಕಾರಿ ಮಹಾಂತೇಶ ಬೀಳಗಿ ಮಾತನಾಡಿ, ವಿವಿಧ ಯೋಜನೆಯ ಪಿಂಚಣಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರು, ತಹಶೀಲ್ದಾರರು,
ಉಪವಿಭಾಗಾಧಿಕಾರಿ ಮನೆ ಭೇಟಿ ನೀಡಿ ಹಾಗೂ ಪಿಂಚಣಿ ಅದಾಲತ್‌ ಮೂಲಕ ಇದುವರೆಗೆ 25 ಸಾವಿರ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ನಗರಾಭಿವೃದ್ಧಿ ಕೋಶ ಹಾಗೂ ದೂಡಾದ ವತಿಯಿಂದ ಸಮಾಜ ಕಲ್ಯಾಣ ಮತ್ತು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿನಿಲಯಗಳ ನಿರ್ಮಾಣಕ್ಕಾಗಿ
ಹಂಚಿಕೆಯಾದ ಜಮೀನು ಮತ್ತು ನಿವೇಶನಗಳಿಗೆ ಸಂಬಂಧಿ ಸಿದಂತೆ ಆಯಾ ಇಲಾಖೆಗಳೇ ತಂತಿ ಬೇಲಿ, ಫಲಕ ಸೇರಿದಂತೆ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಇದೇ ವೇಳೆ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾ ಧಿಕಾರಿ ಮಾದರಿ ಪ್ರಶ್ನೆ ಪತ್ರಿಕೆ
ಬಿಡುಗಡೆಗೊಳಿಸಿದರು. ಸಭೆಯಲ್ಲಿ ಜಿ.ಪಂ. ಸಿಇಓ ಪದ್ಮ ಬಸವಂತಪ್ಪ, ಅಪರ ಜಿಲ್ಲಾ ಧಿಕಾರಿ ಪೂಜಾರ್‌ ವೀರಮಲ್ಲಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಜಿ. ನಜ್ಮಾ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ, ಡಿಡಿಪಿಐ ಪರಮೇಶ್ವರಪ್ಪ, ವಿಶೇಷ ಭೂ ಸ್ವಾಧೀನಾ ಧಿಕಾರಿ ರೇಷ್ಮ ಹಾನಗಲ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಲಕ್ಷ್ಮೀಕಾಂತ್‌ ಬೊಮ್ಮನ್ನವರ್‌, ಜಿ.ಪಂ. ಉಪಕಾರ್ಯದರ್ಶಿ ಬಿ. ಆನಂದ್‌, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next