Advertisement

ದಾವಣಗೆರೆ: ಟೆರಸ್ ನಿಂದ ಮೇಲೆ ಬಿದ್ದು ಪಿಯು ವಿದ್ಯಾರ್ಥಿ ಸಾವು!

10:19 AM Apr 23, 2022 | Team Udayavani |

ದಾವಣಗೆರೆ: ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಸಂಭವಿಸಿದೆ.

Advertisement

ನಗರದ ಮಿಥುನ್ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಮೃತಪಟ್ಟ. ಆತ ಇಂದು ಗಣಿತ ಪರೀಕ್ಷೆ ಬರೆಯಬೇಕಾಗಿತ್ತು.

ಶುಕ್ರವಾರ ರಾತ್ರಿ ಮನೆಯ ಟೆರಸ್ ಮೇಲೆ ಓದುತ್ತಿದ್ದನು. 11.30ರ ಸಮಯದಲ್ಲಿ ಮಗ ಓದುತ್ತಿರುವುದನ್ನು ನೋಡಿ ಪೋಷಕರು ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮಿಥುನ್ ಟೆರಸ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವುದು ಕಂಡು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ರೈಲ್ವೆ ಕೆಳಸೇತುವೆಗೆ ಕಾರು ಢಿಕ್ಕಿ; ಮೂರು ಮಂದಿ ಸಾವು, ಇಬ್ಬರಿಗೆ ಗಾಯ

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳಕ್ಕೆ ಶ್ವಾನದಳದೊಂದಿಗೆ ಪೋಲೀಸರು ತನಿಖೆ ಶುರು ಮಾಡಿದ್ದಾರೆ.

Advertisement

ಮೃತ ಮಿಥುನ್, ಸತೀಶ್ ಪಿಸಾಳೆ ದಂಪತಿಯ ಏಕೈಕ ಪುತ್ರನಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿರುವ ಮಗನ ಶವ ಕಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next