Advertisement

ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ್ರೆ ಕ್ರಮ

05:54 PM Jun 21, 2020 | Naveen |

ದಾವಣಗೆರೆ: ಕೋವಿಡ್‌-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಶಂಕಿತರನ್ನು ಹೋಂ ಕ್ವಾರಂಟೈನ್‌ ನಲ್ಲಿ ಇಡಲಾಗಿದೆ. ಹೋಂ ಕ್ವಾರಂಟೈನ್‌ನಲ್ಲಿ ಇರುವಂತಹವರು ಮಾರ್ಗಸೂಚಿ, ನಿಯಮ ಉಲ್ಲಂಘನೆ ಮಾಡಿದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ ಎಚ್ಚರಿಸಿದ್ದಾರೆ.

Advertisement

ಕೆಲವರು ಕ್ವಾರಂಟೈನ್‌ ಉಲ್ಲಂಘನೆ ಮಾಡಿರುವ ಕುರಿತಂತೆ ಕೋವಿಡ್‌ ವಾರ್‌ ರೂಂನಿಂದ ಮಾಹಿತಿ ಹಾಗೂ ವಿವರಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಾರ್‌ ರೂಂನಿಂದ ಪರಿಶೀಲಿಸಿದಾಗ ಹೋಂ ಕ್ವಾರಂಟೈನ್‌ಗೆ ಒಳಗಾದ ಕೆಲವು ವ್ಯಕ್ತಿಗಳು ನಿಯಮ ಮೀರಿ ಮನೆಯಿಂದ ಹೊರಗೆ ಓಡಾಡುತ್ತಿರುವುದು ಕಂಡುಬಂದಿದೆ. ಹೋಂ ಕ್ವಾರಂಟೈನ್‌ನಲ್ಲಿ ಇದ್ದಂತಹವರು ಹೊರಗೆ ಓಡಾಡುವುದು ಅಥವಾ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಹೋಗುವುದು ಅಪರಾಧವಾಗಿದೆ. ಹೋಂ ಕ್ವಾರಂಟೈನ್‌ನಲ್ಲಿದ್ದು, ಉಲ್ಲಂಘನೆ ಮಾಡಿದವರಿಗೆ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿಡಲಾಗುವುದು. ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ನಿಯಾಮಾನುಸಾರ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ದಾಖಲಿಸಲು ಕೋರಲಾಗುತ್ತದೆ. ಹಾಗಾಗಿ ಹೋಂ ಕ್ವಾರಂಟೈನ್‌ನಲ್ಲಿ ಇರುವಂತಹವರು ನಿಯಮ ಉಲ್ಲಂಘನೆ ಮಾಡಬಾರದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next