Advertisement
ತುಂಗಭದ್ರಾ ಸಭಾಂಗಣದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಪರೀಕ್ಷೆ ಒಂದು ಸವಾಲಿನ ಮತ್ತು ವಿಶೇಷ ಪರೀಕ್ಷೆಯಾಗಿದೆ. ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದ್ದು, ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
Related Articles
Advertisement
ನಿಯಮದಂತೆ ಎಲ್ಲ 93 ಪರೀûಾ ಕೇಂದ್ರಗಳಲ್ಲಿ ಅಡ್ಡ ಮತ್ತು ಉದ್ದವಾಗಿ ಮೂರು ಅಡಿ ಅಂತರದಲ್ಲಿ ಡೆಸ್ಕ್ ವ್ಯವಸ್ಥೆ ಮಾಡಲಾಗಿದೆ. ಒಂದು ಡೆಸ್ಕ್ನಲ್ಲಿ ಇಬ್ಬರು ವಿದ್ಯಾರ್ಥಿಗಳು ಕೂರುತ್ತಾರೆ. ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ. ಮಂಡಳಿಯಿಂದ 200 ಮಕ್ಕಳಿಗೆ ಒಂದರಂತೆ ಥರ್ಮಲ್ ಸೀRÅನರ್‌ಗಳನ್ನು ನೀಡಿದ್ದು, 14 ಹೆಚ್ಚುವರಿ ಕೇಂದ್ರಗಳಿಗೆ ಅವಶ್ಯಕತೆ ಇದೆ. ದಾವಣಗೆರೆಯಲ್ಲಿ ಕಂಟೈನ್‌ಮೆಂಟ್ ಝೋನ್‌ನಿಂದ 90 ವಿದ್ಯಾರ್ಥಿಗಳು ಇದ್ದಾರೆಂದು ಗುರುತಿಸಲಾಗಿದೆ. ಅವರಿಗೆ ಎನ್-95 ಮಾಸ್ಕ್ ನೀಡಬೇಕಿದೆ. ಒಟ್ಟು 1,300 ಕೊಠಡಿ ಇದ್ದು ಪ್ರತಿ ಕೊಠಡಿಗೆ ಒಂದು ಸ್ಯಾನಿಟೈಸರ್ ನೀಡಬೇಕು ಎಂದು ಮನವಿ ಮಾಡಿದರು .ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು, ಇತ್ತೀಚೆಗೆ ಕೆಲವು ಕಂಟೈನ್‌ಮೆಂಟ್ ಝೋನ್ ಗಳನ್ನು ಡಿನೋಟಿಫೈ ಮಾಡಲಾಗಿದೆ. ಹಾಗಾಗಿ ಪಟ್ಟಿಯನ್ನು ಪರಿಷ್ಕರಿಸುವಂತೆ ತಿಳಿಸಿದರು.
ಸುಳ್ಳು ಸುದ್ದಿ ಹಬ್ಬಿಸಿದ್ರೆ ಕ್ರಮ ಎಸ್ಸೆಸ್ಸೆಲ್ಸಿ ಮಂಡಳಿಯಿಂದ ಈಗಾಗಲೇ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಅರ್ಧ ಲೀಟರ್ ಸ್ಯಾನಿಟೈಸರ್ ಬಾಟಲಿ ಸರಬರಾಜು ಮಾಡಲಾಗಿದೆ. ಎಸ್‌ಓಪಿ ಪ್ರಕಾರ ಎಲ್ಲಾ ಪರೀಕ್ಷಾ ಕೇಂದ್ರಗಳ ಸಾಮಾನ್ಯ, ವಿಶೇಷ ಕೊಠಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಆಸನ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ನಿಷೇಧವಿದ್ದು, ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ ಜೆರಾಕ್ಸ್, ಸೈಬರ್ ಕೆಫೆ ಮುಚ್ಚಿಸಲು ಕ್ರಮ ವಹಿಸಲಾಗುವುದು. ಹಾಗೂ ವಾಟ್ಸ್ ಆ್ಯಪ್ ಇತರೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದರು.