ದಾವಣಗೆರೆ: ಬ್ಯಾಂಕಿಂಗ್ ಮತ್ತು ವಿಮಾ ಕ್ಷೇತ್ರಗಳಲ್ಲಿ ಸುಸ್ಥಿರ ಅಭ್ಯಾಸಗಳನ್ನು ಸಂಯೋಜಿಸುವ ಮಾರ್ಗ ಹಲವಾರು
ಅಡಚಣೆಗಳಿಂದ ತುಂಬಿದ್ದರೂ, ಉತ್ತಮ ಅವಕಾಶಗಳ ಸಾಮರ್ಥ್ಯ ಅಪಾರವಾಗಿದೆ. ನಾವೀನ್ಯತೆ ಅಳವಡಿಸಿಕೊಳ್ಳುವುದರಲ್ಲಿ
ಯಶಸ್ಸು ಅಡಗಿದೆ ಎಂದು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ|ಸಿ. ಎಂ. ತ್ಯಾಗರಾಜ್ ಹೇಳಿದರು.
Advertisement
ದಾವಣಗೆರೆ ವಿಶ್ವವಿದ್ಯಾನಿಲಯ ವ್ಯವಹಾರ ನಿರ್ವಹಣೆ ವಿಭಾಗದ ವತಿಯಿಂದ ಏರ್ಪಡಿಸಿದ್ದ ಬ್ಯಾಂಕಿಂಗ್ ಮತ್ತು ವಿಮಾ ವಲಯದಲ್ಲಿ ಸುಸ್ಥಿರತೆ ಮತ್ತು ತಂತ್ರಜ್ಞಾನ-ಸವಾಲುಗಳು ಮತ್ತು ಅವಕಾಶಗಳು ಕುರಿತ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ತಂತ್ರಜ್ಞಾನವು ಬ್ಯಾಂಕಿಂಗ್ ಮತ್ತು ವಿಮಾ ಕ್ಷೇತ್ರಗಳಲ್ಲಿನ ಅನೇಕ ಆವಿಷ್ಕಾರಗಳ ಹಿಂದಿನ ಚಾಲನಾ ಶಕ್ತಿಯಾಗಿ ಕಾರ್ಯ
ನಿರ್ವಹಿಸುತ್ತಿದೆ. ಇವುಗಳ ಬೆಳವಣಿಗೆಯ ವೇಗಕ್ಕೆ ತಕ್ಕಂತೆ ಸುಸ್ಥಿರತೆ ಕಾಳಜಿಯೂ ಮುಖ್ಯ ಆದ್ಯತೆ ಆಗಬೇಕಾಗಿದೆ. ಬೆಳವಣಿಗೆಯ
ಅವಕಾಶಗಳ ಜೊತೆಗೆ ಹೊಸ ಸವಾಲುಗಳು ಎದುರಾಗುತ್ತಿವೆ. ಅವುಗಳನ್ನು ನಿರ್ವಹಿಸುವ ಕೌಶಲ್ಯವೂ ಅನಿವಾರ್ಯವಾಗಿದೆ ಎಂದು ತಿಳಿಸಿದರು.
Related Articles
ಕಡಿಮೆ ಮಾಡಿವೆ. ಹೀಗಾಗಿ ಶಕ್ತಿಯ ಬಳಕೆ ಕಡಿಮೆಯಾಗುತ್ತಿದೆ ಎಂದರು.
Advertisement
ಬೆಳಗಾವಿ ವಿಶ್ವವಿದ್ಯಾಲಯದ ಪ್ರೊ|ಎಸ್.ಸಿ. ಪಾಟೀಲ ವಿಶೇಷ ಉಪನ್ಯಾಸ ನೀಡಿದರು. ಕುಲಸಚಿವ ಮತ್ತು ವಿಭಾಗದ ಅಧ್ಯಕ್ಷಪ್ರೊ|ಆರ್.ಶಶಿಧರ ಪ್ರಾಸ್ತಾವಿಕ ಮಾತನಾಡಿದರು. ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ, ಪ್ರೊ.ಜೆ.ಕೆ.ರಾಜು, ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕಿ ಡಾ.ಸುನಿತಾ ಆರ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.