Advertisement
ಗುರುವಾರ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರು ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮೊದಲ ಗುರು ತಾಯಿ ಕಲಿಸುವುದಕ್ಕಿಂತಲೂ ಮಕ್ಕಳು ಪ್ರವರ್ಧಮಾನಕ್ಕೆ ಬರುವ ತನಕ ಶಿಕ್ಷಣ ನೀಡುವಂತಹ ಶಿಕ್ಷಕರು ತಾಯಿಗಿಂತಲೂ ಹೆಚ್ಚು ಎಂದರು.
Related Articles
Advertisement
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಶೈಲಜಾ ಬಸವರಾಜ್ ಮಾತನಾಡಿ, ಶಿಕ್ಷಕರು ದೇಶ ಕಟ್ಟುವ ಕೆಲಸ ಮಾಡುವವರು. ಸಮಾಜದಲ್ಲಿ ಶಿಕ್ಷಕರು ಮತ್ತು ರೈತರಿಗೆ ಬಹಳ ಗೌರವ ಇದೆ. ರೈತರು ಹೊಟ್ಟೆಯ ಹಸಿವು ನೀಗಿಸಿದರೆ, ಶಿಕ್ಷಕರು ಜ್ಞಾನದ ಹಸಿವನ್ನು ನೀಗಿಸುವವರು. ಪ್ರತಿಯೊಬ್ಬರಿಗೆ, ಪ್ರತಿಯೊಂದಕ್ಕೆ ಗುರು ಬೇಕೇ ಬೇಕು. ಶಿಕ್ಷಕ ಸಮುದಾಯ ಕೊಡುವಂತಹ ಬೆಳಕು ಇಡೀ ವಿಶ್ವವೇ ಭಾರತವನ್ನ ನೋಡುವಂತಾಗಲಿ ಎಂದು ಆಶಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆ 9ನೇ ಸ್ಥಾನದಲ್ಲಿದೆ. ಮುಂದಿನ ವರ್ಷ ನಂಬರ್ ಒನ್ ಜಿಲ್ಲೆ ಆಗಬೇಕು. ಎಲ್ಲಾ ಶಿಕ್ಷಕರು ಸೇವಾ ಮನೋಭಾವದಿಂದ ತಮಗೆ ನೀಡಿರುವ ಪಾತ್ರವನ್ನ ಶೇ.100 ರಷ್ಟು ಅಚ್ಚುಕಟ್ಟಾಗಿ ನಿರ್ವಹಿಸಿ, ಗೌರವಕ್ಕೆ ಪಾತ್ರರಾದರೆ ಅದು ವಿಶ್ವ ಪ್ರಶಸ್ತಿಗಿಂತಲೂ ಮಿಗಿಲು ಎಂದರಿತು ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ್‌ಕುರ್ಕಿ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಗೀತಾ ಗಂಗಾಧರನಾಯ್ಕ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಪಾಲಾಕ್ಷ, ಡಯಟ್ ಪ್ರಾಚಾರ್ಯ ಎಚ್.ಎಸ್. ಲಿಂಗರಾಜು, ಪ್ರೌಢಶಾಲೆ ಸಂಘದ ಜಿಲ್ಲಾ ಅಧ್ಯಕ್ಷ ಮಂಜುನಾಥಯ್ಯ, ಕಾರ್ಯದರ್ಶಿ ಮುಬಾರಕ್, ಕೆ. ಈಶಾನಾಯ್ಕ, ಮಂಜಾನಾಯ್ಕ, ಶಿವಗಾನಾಯ್ಕ, ಪ್ರಾಥಮಿಕ ಶಾಲೆ ಸಂಘದ ಅಧ್ಯಕ್ಷ ತಿಪ್ಪೇಶ್, ಕಾರ್ಯದರ್ಶಿ ಸಿದ್ದೇಶ್, ಶಿಕ್ಷಣಾಧಿಕಾರಿ ನಿರಂಜನಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಸಿ. ಸಿದ್ದಪ್ಪ,ಜಿ. ಕೊಟ್ರೇಶ್ ಇತರರು ಇದ್ದರು. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳಾಡಿದರು.
ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ 22 ಜನ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.